ಕ್ವಾರಂಟೈನ್‌ಗೆ ಒಳಪಡುವ ಎಲ್ಲಾ ಪ್ರಯಾಣಿಕರಿಗೆ ರಕ್ಷಣಾ ವ್ಯವಸ್ಥೆ ಕಲ್ಪಿಸಲು ಡಿ.ಸಿ ಸೂಚನೆ

ದೊಡ್ಡಬಳ್ಳಾಪುರ : ವಿದೇಶದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವಂತಹ ರಾಜ್ಯದ ಪ್ರಯಾಣಿಕರನ್ನು ಕ್ವಾರಂಟೈನ್ ಗೆ ಒಳಪಡಿಸುವಾಗ,ಸೂಕ್ತ ಆರೋಗ್ಯ ಮತ್ತು ರಕ್ಷಣಾ ವ್ಯವಸ್ಥೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಗುರುವಾರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ವಿದೇಶದಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಕಲ್ಪಿಸುವ ಸಂಬಂಧ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರಯಾಣಿಕರ ಆರೋಗ್ಯ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಕಾರ್ಯಕ್ಕೆ ನಿಯೋಜನೆಕೊಂಡಿರುವ ಎಲ್ಲಾ ಅಧಿಕಾರಿಗಳು ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಮೇ.11 ರಿಂದ,ವಿದೇಶದಿಂದ ಆಗಮಿಸುವ ರಾಜ್ಯದ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಮೂರು ದರ್ಜೆಗಳಲ್ಲಿ ಹೋಟೆಲ್ ಗಳನ್ನು ಗುರುತಿಸಲಾಗಿದ್ದು, ಪ್ರಯಾಣಿಕರು ತಮ್ಮ ಸ್ವಂತ ಖರ್ಚಿನಲ್ಲಿ ಸರ್ಕಾರ ನಿಗದಿಪಡಿಸಿರುವ ದರವನ್ನು ಭರಿಸಿ, ಇಚ್ಚಿಸುವ ಹೋಟೆಲ್‌ನಲ್ಲಿ 14 ದಿನಗಳ ಕ್ವಾರಂಟೈನ್ ವ್ಯವಸ್ಥೆಗೆ ಒಳಗಾಗಬಹುದು. ವಿಮಾನ ಪ್ರಯಾಣಕ್ಕೆ ಮುನ್ನ ಹಾಗೂ ವಿಮಾನ ನಿಲ್ದಾಣಕ್ಕೆ ಬಂದ ಕೂಡಲೇ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಯಬೇಕು ಎಂದು ತಿಳಿಸಿದರು.
ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕು ಶಂಕೆ ಕಂಡುಬಂದಲ್ಲಿ, ರಾಜೀವ್ ಗಾಂಧಿ ಹೃದ್ರೋಗ ಆಸ್ಪತ್ರೆಗೆ ಕಳುಹಿಸಿಕೊಡಲಾಗುವುದು. ವಿದೇಶದಿಂದ ಆಗಮಿಸುವ ಯಾವ ಒಬ್ಬ ಪ್ರಯಾಣಿಕ ಕ್ವಾರಂಟೈನ್ ವ್ಯವಸ್ಥೆಯಿಂದ ತಪ್ಪಿಸಿಕೊಳ್ಳದಂತೆ ಅಧಿಕಾರಿಗಳು ಬಹಳ ಎಚ್ಚರ ವಹಿಸಬೇಕು. ಹೋಟೆಲ್‌ಗಳಲ್ಲೂ ಸಹ ವೈದ್ಯಕೀಯ ಸಿಬ್ಬಂದಿಗಳನ್ನು ಪ್ರಯಾಣಿಕರ ಆರೋಗ್ಯ ಸೇವೆಗೆ ನಿಯೋಜಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಯಾಣಿಕರ ಕ್ವಾರಂಟೈನ್ ವ್ಯವಸ್ಥೆ ಮಾಡಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಪ್ರಯಾಣಿಕರಿಗೆ ಮೊದಲ ಬೆಂಗಳೂರು ನಗರದಲ್ಲಿ ಗುರುತಿಸಿರುವ ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಮಾಡಲಾಗುವುದು. ಪ್ರಯಾಣಿಕರ ಸಂಖ್ಯೆ ಹೆಚ್ಚಿದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರವಲಯದಲ್ಲಿ ಗುರುತಿಸಿರುವ ಹೋಟೆಲ್‌ಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸಹಾಯವಾಗುವಂತೆ ಹೆಲ್ಪ್‌ಡೆಸ್ಕ್ ತೆರೆಯಲಾಗಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಇಳಿದ ತಕ್ಷಣವೇ ಅವರಿಗೆ ಭಾರತೀಯ ಸಿಮ್‌ಕಾರ್ಡ್ ಗಳನ್ನು ನೀಡಲಾಗುವುದು. ಎಲ್ಲಾ ಪ್ರಯಾಣಿಕರಿಗೂ ಸ್ಕ್ರೀನಿಂಗ್ ಮಾಡಿ ನಿಗದಿತ ಹೋಟೆಲ್‌ಗಳಿಗೆ ಅಧಿಕಾರಿ ನೇತೃತ್ವದಲ್ಲಿ ಕೇವಲ 20 ಪ್ರಯಾಣಿಕರನ್ನು ಬಸ್‌ಗಳ ಮೂಲಕ ಗುರುತಿಸಿರುವ ಹೋಟೆಲ್‌ಗಳಿಗೆ ಕರೆದುಕೊಂಡು ಹೋಗಲಾಗುವುದು. ಪ್ರತಿ ಹೋಟೆಲ್‌ಗೆ ಒಬ್ಬ ಅಧಿಕಾರಿಯನ್ನು ಉಸ್ತುವಾರಿ ನೋಡಿಕೊಳ್ಳಲು ನೇಮಿಸಲಾಗಿದೆ ಎಂದರು
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಮುಖ್ಯ ಲೆಕ್ಕಾಧಿಕಾರಿ ಟಿ.ಆರ್.ಶೋಭಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಪ್ರಜಾಪ್ರಭುತ್ವಕ್ಕೆ ಮಾದರಿಯಾದ ಎಂಕೆ ಸ್ಟಾಲಿನ್‌ ನಡೆ..!

ಪ್ರಜಾಪ್ರಭುತ್ವಕ್ಕೆ ಮಾದರಿಯಾದ ಎಂಕೆ ಸ್ಟಾಲಿನ್‌ ನಡೆ..!

ತಮ್ಮ ಸರ್ಕಾರವನ್ನು ಕೆಳಗಿಳಿಸಿ, ಅನ್ಯ ಪಕ್ಷದ ಹೊಸ ಸರ್ಕಾರ ಅಧಿಕಾರಕ್ಕೆ ಬಂದರೆ, ಸದಾ ಅವರನ್ನು ಕೆಳಗಿಳಿಸಲು ಸುಳ್ಳು ಪ್ರಚಾರ ಮಾಡುತ್ತಾ, ಸಾಂವಿಧಾನಿಕ ಬಿಕ್ಕಟ ಸೃಷ್ಟಿಸಲು ಕಾಯುವ ಪಕ್ಷಗಳ ನಡುವೆ ಎಂಕೆ ಸ್ಟಾಲಿನ್ (MK Stalin)

[ccc_my_favorite_select_button post_id="121840"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]