ಮಹಿಳಾ ಸದಸ್ಯರ ನಾಟಿ ಕೋಳಿ ಸಾಕಾಣಿಕಾ ಕಂಪನಿ ಸ್ಥಾಪನೆಗೆ ಕ್ರಮ: ನಟೇಶ್

ದೊಡ್ಡಬಳ್ಳಾಪುರ : ಸಂಜೀವಿನಿ ಎನ್.ಆರ್.ಎಲ್.ಎಂ. ಯೋಜನೆಯಡಿ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರ ನಾಟಿ ಕೋಳಿ ಸಾಕಾಣಿಕಾ ಉತ್ಪಾದಕರ ಕಂಪನಿ ಹೆಸರಿನಡಿ ಸ್ಥಾಪನೆ ಮಾಡಿ, ಅವಶ್ಯವಿರುವ ತರಬೇತಿ, ಮಾರ್ಗದರ್ಶನವನ್ನು ಪರಿಣಿತಿ ಹೊಂದಿದ ಸಂಸ್ಥೆ ಮೂಲಕ ಕೈಗೊಳ್ಳಲಾಗುವುದು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವೆಗಳ ಇಲಾಖೆ ಆಯುಕ್ತ ನಟೇಶ್ ತಿಳಿಸಿದರು.  

ದೇವನಹಳ್ಳಿ ತಾಲ್ಲೂಕಿನ, ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ, ಹೊಸಕೋಟೆ ತಾಲ್ಲೂಕಿನಲ್ಲಿ ನಾಟಿ ಕೋಳಿ ಸಾಕಾಣಿಕೆ ಮಾಡುವ ರೈತ ಉತ್ಪಾದನಾ ಕಂಪನಿಯನ್ನು ಸಂಜೀವಿನಿ ಎನ್.ಆರ್.ಎಲ್.ಎಂ.(ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ) ಯೋಜನೆ ಮತ್ತು ಪಶುಪಾಲನಾ ಮತ್ತು ಪಶುವೈದ್ಯ ಸೇವೆಗಳ ಇಲಾಖೆ ಹಾಗೂ ಕರ್ನಾಟಕ ಸಹಕಾರ ಕುಕ್ಕೂಟ ಮಹಾ ಮಂಡಳಿ ರವರ ಸಹಯೋಗದೊಂದಿಗೆ ಸ್ಥಾಪಿಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

  ರಾಜ್ಯದಲ್ಲಿಯೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಹೊಸಕೋಟೆ ತಾಲ್ಲೂಕಿನಲ್ಲಿ ಕನಿಷ್ಠ ೫೦೦ ರಿಂದ ೧೦೦೦ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರ ನಾಟಿ ಕೋಳಿ ಸಾಕಾಣಿಕಾ ಉತ್ಪಾದಕರ ಕಂಪನಿಯನ್ನು ಸ್ಥಾಪನೆ ಮಾಡಲಾಗುವುದು. ಕಂಪನಿಯ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ಅವಶ್ಯವಿರುವ ತರಬೇತಿ, ಮಾರ್ಗದರ್ಶನವನ್ನು ಪರಿಣಿತಿ ಹೊಂದಿದ ಸಂಸ್ಥೆ ಮೂಲಕ ಕೈಗೊಂಡು, ಉತ್ತಮ ಗುಣಮಟ್ಟದ ನಾಟಿ ಕೋಳಿ ಮರಿಗಳನ್ನು ನೀಡಲಾಗುವುದು. ಪೋಷಣೆ ಮಾಡಿ ಬೆಳೆದ ನಾಟಿ ಕೋಳಿಗೆ ಮಾರುಕಟ್ಟೆ ಸೌಲಭ್ಯವನ್ನು ಕಂಪನಿಯ ಮುಖಾಂತರ ಬೆಂಗಳೂರಿಗೆ ಬೇಡಿಕೆಯನುಸಾರ ಕಲ್ಪಿಸಲು ಕ್ರಮ ವಹಿಸಲಾಗುವುದೆಂದು ಮಾಹಿತಿ ನೀಡಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ  ಮಾತನಾಡಿ,ಸಂಜೀವಿನಿ ಎನ್.ಆರ್.ಎಲ್.ಎಂ. ಯೋಜನೆಯಡಿ ರಚನೆಯಾಗಿರುವ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಡಿ ಬರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಉಪ ಕಸುಬಾಗಿ ನಾಟಿ ಕೋಳಿ ಸಾಕಾಣಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಚಟುವಟಿಕೆಗಳನ್ನು ಕೈಗೊಂಡು ಕಂಪನಿಯ ಮುಖಾಂತರ ಮಾರುಕಟ್ಟೆಯನ್ನು ಕಲ್ಪಿಸಿದರೆ ಗ್ರಾಮೀಣ ಮಹಿಳೆಯರ ಆದಾಯ ಹೆಚ್ಚಳವಾಗಲು ಸಹಕಾರಿಯಾಗುವುದೆಂದು ತಿಳಿಸಿದರು. 

ಕರ್ನಾಟಕ ಸಹಕಾರ ಕುಕ್ಕೂಟ ಮಹಾ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಡಾ. ಕೆ.ಹೆಚ್.ಶಿವರುದ್ರಪ್ಪ ರೈತ ಉತ್ಪಾದಕ ಕಂಪನಿಯ ರಚನೆಯ ಬಗ್ಗೆ ಹಾಗೂ ಇಲಾಖೆಯಿಂದ ಕಂಪನಿಗೆ ದೊರೆಯುವ ಬೆಂಬಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಪಶುಪಾಲನಾ ಮತ್ತು ಪಶುವೈದ್ಯ ಸೇವೆಗಳ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕ ಡಾ.ಬಾಲಚಂದ್ರ, ಹೊಸಕೋಟೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್‌ಗೌಡ, ಸಂಜೀವಿನಿ ಜಿಲ್ಲಾ ಅಭಿಯಾನ ನಿರ್ವಹಣಾ ಘಟಕದ ಜಿಲ್ಲಾ ವ್ಯವಸ್ಥಾಪಕ ಅಶೋಕ.ವೈ.ಎಸ್. ಸೇರಿದಂತೆ ಹೊಸಕೋಟೆ ತಾಲ್ಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಂಜೀವಿನಿ ಯೋಜನೆಯ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ

[ccc_my_favorite_select_button post_id="121740"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]