ಲಾಕ್‌ಡೌನ್‌ ರೈತರ ಮುಂದೆ ಹಲವಾರು ಸಮಸ್ಯೆ, ಅವಕಾಶಗಳನ್ನು ತಂದುಕೊಟ್ಟಿದೆ

ದೊಡ್ಡಬಳ್ಳಾಪುರ: ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ವ್ಯವಸ್ಥಾಪನ ಮಂಡಳಿ ಸದಸ್ಯರಾಗಿ ನೇಮಕವಾಗಿರುವ ತಾಲ್ಲೂಕಿನ ಪ್ರಗತಿಪರ ಕೃಷಿಕ ದೊಡ್ಡತುಮಕೂರು ಗ್ರಾಮದ ಟಿ.ಎಂ.ಅರವಿಂದ್‌ ಅವರ ಅಭಿನಂದನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಎಚ್‌.ಅಪ್ಪಯ್ಯ, ಗ್ರಾಮೀಣ ಪ್ರದೇಶದ ಜನರನ್ನು ಗುರುತಿಸಿ ಕೃಷಿ ವಿವಿಗಳಲ್ಲಿ ಜವಾಬ್ದಾರಿಗಳನ್ನು ನೀಡುವುದೇ ಅಪರೂಪ. ಇಂತಹ ಸಂದರ್ಭದಲ್ಲಿ ನಮ್ಮ ತಾಲ್ಲೂಕಿನ ಪ್ರಗತಿಪರ ಯುವ ಕೃಷಿಕರನ್ನು ವ್ಯವಸ್ಥಾಪನ ಮಂಡಳಿಗೆ ನೇಮಿಸಿರುವುದು ಹೆಮ್ಮೆಯ ಸಂಗತಿ. ಕೃಷಿ ವಿವಿಗಳಲ್ಲಿನ ನೂತನ ಪ್ರಯೋಗಗಳು ರೈತರ ತೋಟಗಳಲ್ಲಿ ಅನುಷ್ಟಾನಕ್ಕೆ ಬರುವಂತೆ ನೋಡಿಕೊಳ್ಳಬೇಕಾದ ತುರ್ತು ಅಗತ್ಯವಿದೆ. ಅಲ್ಲದೆ ಲಾಕ್‌ಡೌನ್‌ ರೈತರ ಮುಂದೆ ಹಲವಾರು ರೀತಿಯ ಹೊಸ ಸಮಸ್ಯೆಗಳು ಹಾಗೆಯೇ ಹೊಸ ಅವಕಾಶಗಳನ್ನು ಸಹ ತಂದಿಟ್ಟಿದೆ. ಇವುಗಳನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದನ್ನು ಕೃಷಿ ವಿವಿಯಲ್ಲಿನ ತಜ್ಞರು ರೈತರೊಂದಿಗೆ ಕೂಡಿಕೊಂಡು ಮನವರಿಕೆ ಮಾಡಿಕೊಡಬೇಕಿದೆ ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೃಷಿ ವಿವಿ ವ್ಯವಸ್ಥಾಪನ ಮಂಡಳಿ ಸದಸ್ಯ ಟಿ.ಎಂ.ಅರವಿಂದ್‌, ಕೃಷಿ ಸೇರಿದಂತೆ ಎಲ್ಲಾ ಉದ್ಯಮ, ಜನರ ಬದುಕು ಸಂಕ್ರಮಣ ಕಾಲಘಟ್ಟದಲ್ಲಿದೆ. ರೈತರ ಮುಂದೆ ಮಾರುಕಟ್ಟೆ ಸಮಸ್ಯೆಯು ಸೇರಿದಂತೆ ತಮ್ಮ ಮುಂದಿನ ಬದುಕು, ಯಾವ ಬೆಳೆ ಪದ್ದತಿಗಳ ಕಡೆಗೆ ಹೋಗಬೇಕು ಎನ್ನುವ ಹತ್ತಾರು ಪ್ರಶ್ನೆಗಳು ಇವೆ. ಇವುಗಳನ್ನು ಸಮರ್ಥವಾಗಿ ಎದುರುಸಿ ಬದುಕು ರೂಪಿಸಿಕೋಳ್ಳುವ ಕಡೆಗೆ ಅನುಕೂಲವಾಗುವಂತೆ ಕೃಷಿ ವಿವಿಗಳು ಶ್ರಮಿಸಲು ಹೆಚ್ಚಿನ ಒತ್ತು ನೀಡಿ ಕೆಲಸ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಮಲ್ಲಿಕಾರ್ಜುನಗೌಡ, ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಚಿಕ್ಕಣ್ಣ,ದಕ್ಷಿಣ ಭಾರತ ಹೂವು ಬೆಳೆಗಾರರ ಸಂಘದ ನಿರ್ದೇಶಕ ಶ್ರೀಕಾಂತ್‌ ಇದ್ದರು.   

ರಾಜಕೀಯ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ‌. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು.

[ccc_my_favorite_select_button post_id="117357"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]