ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯಡಿ ಗೌರವಧನದ ಆಧಾರದ ಮೇಲೆ ಖಾಲಿಯಿರುವ ಪ್ರೋಗ್ರಾಮ್ ಮ್ಯಾನೇಜರ್ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಜೂ.29 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. 

ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಯು 11 ತಿಂಗಳು ಅವಧಿಯದ್ದಾಗಿದೆ. ಬಿ.ಎ ಪದವಿ/ಬಿ.ಎಸ್.ಡಬ್ಲ್ಯೂ ವಿಷಯಗಳಲ್ಲಿ ಪದವಿ ಹೊಂದಿದ್ದು, ವಿವಿಧ ಸಾಮಾಜಿಕ ಕಾರ್ಯಕ್ಷೇತ್ರಗಳಲ್ಲಿ, ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಟ 05 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಮಕ್ಕಳು ದುಡಿಯುವ ಪ್ರದೇಶಗಳು ಹಾಗೂ ವೃತ್ತಿಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿರಬೇಕು. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯಿಂದ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕಾಲಕಾಲಕ್ಕೆ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಪ್ರತಿ ಮಾಹೆಯಾನ ಬಾಲ ಕಾರ್ಮಿಕ ತರಬೇತಿ ಕೇಂದ್ರಗಳ ಮಾಹಿತಿಯನ್ನು ಪಡೆದು ಕ್ರೋಢೀಕರಿಸಿ ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸುವುದು.

ಕೇಂದ್ರ ಸರ್ಕಾರದ ಫೆನ್ಸಿಲ್ ಸಾಪ್ಟ್‌ವೇರ್, ಫಿಎಫ್‌ಎಂಎಸ್ ಸಾಪ್ಟ್‌ವೇರ್‌ಗಳ ಬಳಕೆ ಹಾಗೂ ವರದಿಗಳನ್ನು ಆನ್‌ಲೈನ್ ಮೂಲಕ ನಿರ್ವಹಿಸುವುದು. ಬಾಲ ಕಾರ್ಮಿಕ ತರಬೇತಿ ಕೇಂದ್ರಗಳ ಮೇಲ್ವಿಚಾರಣೆ ಮಾಡಿ ವರದಿಯನ್ನು ಸಲ್ಲಿಸುವುದು, ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಶೈಲಿಯನ್ನು ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು (M.S.Office, M.S.Excel & Internet operation,
kannada & English typing 
ಕಡ್ಡಾಯ) ಹೊಂದಿರಬೇಕು.

ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗೆ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲು ಇಚ್ಚೆಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ಅರ್ಜಿಯನ್ನು ಭಾವಚಿತ್ರ ಮತ್ತು ನಿಗದಿತ ದಾಖಲೆಗಳೊಂದಿಗೆ ಜೂ.29 ರೊಳಗೆ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಕೊಠಡಿ ಸಂಖ್ಯೆ-102, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಇಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!