ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಇಲಾಖೆಗೆ ತಾಯಿಯಿದ್ದಂತೆ: ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು : ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಇಲಾಖೆಗೆ ತಾಯಿ ಇದ್ದಂತೆ. ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಬಹಳ ಹತ್ತಿರವಾಗಬೇಕು. ಕೃಷಿ ಇಲಾಖೆಗೆ ವಿಶ್ವವಿದ್ಯಾಲಯಗಳು ಮಾರ್ಗದರ್ಶಿಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸಚಿವರಾದ ಬಳಿಕ ಮೊದಲ ಕೃಷಿ ವಿಶ್ವವಿದ್ಯಾಲಯಗಳ ಸಮನ್ವಯ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು.

ಸಭೆಗಳು  ಹಾಗೂ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು ಸೂಚನೆಗಳು ಬರೀ ಕಡತದಲ್ಲಿ ಕಿರುಪುಸ್ತಕದಲ್ಲಷ್ಟೇ ಉಳಿಯದೇ ಕಾರ್ಯರೂಪಕ್ಕೆ ಬರಬೇಕು. ಟಿಎ ಡಿಎ ಸಮಯವ್ಯರ್ಥಕ್ಕಾಗಿ ಸಭೆಗಳನ್ನು ಮಾಡದೇ ರೈತರಿಗೆ ಅನುಕೂಲ ಕಲ್ಪಿಸಲು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಕೃಷಿಯತ್ತ ಹೊಸ ಕಲಿಕೆಗೆ ಅವಕಾಶ ಮಾಡಿಕೊಡುವಲ್ಲಿ ಉಪಯೋಗವಾಗಬೇಕು. ವಿಶ್ವವಿದ್ಯಾಲಯಗಳಲ್ಲಿ ಹೊಸತನ್ನು ಕಲಿಯಲು ಮತ್ತು ಕಲಿಸಲು ರೈತರಿಗೆ ಎಲ್ಲಾ ರೀತಿಯಲ್ಲಿ ಅನುಕೂಲ ಕಲ್ಪಿಸುವಂತಹ ಹೊಸಸಂಶೋಧನೆಗಳು, ತಳಿಗಳನ್ನು ಕಂಡುಹಿಡಿಯಬೇಕು ಎಂದು ಸಭೆಯಲ್ಲಿ ಸಚಿವರು ನಿರ್ದೇಶಿಸಿದರು.

“ಯಾವ ಕಾಯಿಲೆಗೆ ಯಾವ ಮದ್ದು” ಎನ್ನುವುದು ವೈದ್ಯರಿಗೆ ಹೇಗೆ ತಿಳಿದಿರುತ್ತದೆಯೋ ಅದೇ ರೀತಿ ರೈತರ ಬೆಳೆಯ ಸಮಸ್ಯೆ ಗಳಿಗೆ ಕೃಷಿವಿಶ್ವವಿದ್ಯಾಲಯಗಳು ಪರಿಹಾರ ಸೂಚಿಸಬೇಕು. ಪ್ರತಿಯೊಬ್ಬ ಪ್ರೊಫೇಸರ್ ನ್ನು ಫೀಲ್ಡ್ ಗೆ ಕಳುಹಿಸಬೇಕು. ಹಿಂದಿನ ಕಾಲದ ಬೇಸಾಯದ ಪದ್ಧತಿಗೂ ಈಗಿನ ಪದ್ಧತಿಗೂ ಬಹಳಷ್ಟು ವ್ಯತ್ಯಾಸಗಳಿವೆ. ಕಾಲಕ್ಕೆ ತಕ್ಕ ಬೆಳೆ ತಂತ್ರಜ್ಞಾನದ ಬಳಕೆ ಸಂಶೋಧನೆ ಬಗ್ಗೆ ವಿದ್ಯಾರ್ಥಿಗಳಿಗೆ ರೈತರಿಗೆ ನೇರವಾಗಿ ಮಾಹಿತಿ ಹೋಗುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳನ್ನು ಪ್ರೊಫೆಸರ್ ಗಳನ್ನು ಹೊಸಹೊಸ ಸಂಶೋಧನೆ ತಳಿಗಳು ವಿಶ್ವವಿದ್ಯಾಲಯದ ಸಾಧನೆಗಳನ್ನು ಪ್ರಚುರಪಡಿಸಲು ಸಹಕರಿಸುವಂತೆ ನೋಡಿಕೊಳ್ಳಬೇಕು ಎಂದು ಕೃಷಿ ಸಚಿವರು ಸಭೆಯಲ್ಲಿ ತಿಳಿಸಿದರು.

ವಿಶ್ವವಿದ್ಯಾಲಯಗಳಲ್ಲಿ ಹೊಸಹೊಸ ತಳಿಗಳ ಸಂಶೋಧನೆ ಹೆಚ್ಚೆಚ್ಚು ನಡೆಯಬೇಕು. ವಿಶ್ವವಿದ್ಯಾಲಯಗಳ ಸಾಧನೆ ಸಂಶೋಧನೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚುರಪಡಿಸಬೇಕು. ಸಭೆಗೆ ಯಾವುದೇ ಅಧಿಕಾರಿಗಳಾಗಲೀ ಕುಲಪತಿ ನಿರ್ದೇಶಕರಾಗಲೀ ಯಾರೇ ಆಗಲೀ ಪೂರ್ವಮಾಹಿತಿ ದಾಖಲೆಯಿಲ್ಲದೇ ಬರಬಾರದು. ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ಇಲಾಖೆ ನಡುವೆ  ಎಂದಿಗೂ ಸಮನ್ವಯದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೈತರ ಜೊತೆ ಸಂವಾದ ಮಾಡುವ ಮೂಲಕ ರೈತರ ಸಮಸ್ಯೆಗಳನ್ನು ಹತ್ತಿರದಿಂದ ಅರಿತು ಅವುಗಳ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಬಿ.ಸಿ.ಪಾಟೀಲ್ ಸೂಚಿಸಿದರು.

ಇನ್ನುಮುಂದೆ ಪ್ರತಿತಿಂಗಳಿಗೊಮ್ಮೆ ಸಮನ್ವಯ ಸಮಿತಿ ಸಭೆ ನಡೆಸಲಾಗುವುದು. ಮೇಲಿಂದ ಮೇಲೆ ಸಭೆಗಳನ್ನು ನಡೆಸುವುದರಿಂದ ವಿಷಯಗಳ ಮಾಹಿತಿಯ ವಿನಿಮಯ ಕೆಲಸದ ಪ್ರಗತಿ ಬಗ್ಗೆ ಅರಿಯಲು ಹಾಗೂ ರೈತರಿಗಾಗಿ ಇನ್ನಷ್ಟು ದುಡಿಯಲು ಸಾಧ್ಯವಾಗುತ್ತದೆ ಎಂದರು.

ಸಭೆಯಲ್ಲಿ ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ ಸೇರಿದಂತೆ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!