ಬೆಂಗಳೂರು : ಕರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ 2020ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪ್ರಸ್ತುತ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದೆ.
ರಾಜ್ಯ ಸರ್ಕಾರದ ಆದೇಶದ ಅನ್ವಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಮೊದಲನೇ ವರ್ಷದ / ಮೊದಲನೇ ಸೆಮಿಸ್ಟರ್ ನ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನದ ಕೋರ್ಸ್‌ಗಳು ಮತ್ತು ಬಿ-ಫಾರ್ಮಾ-ಡಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ಕೆಳಗಿನ ದಿನಾಂಕಗಳಂದು ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.
ವೇಳಾಪಟ್ಟಿ
30-07-2020- ಜೀವಶಾಸ್ತ್ರ ( ಬೆಳಿಗ್ಗೆ 10-30 ರಿಂದ 11-50 ರ ವರೆಗೆ)
ಇದೇ ದಿನ
ಗಣಿತ (02-30 ರಿಂದ 03-50 ವರೆಗೆ)
31-07-2020- ಭೌತಶಾಸ್ತ್ರ ( ಬೆಳಿಗ್ಗೆ 10-30 ರಿಂದ 11-50 ರ ವರೆಗೆ)
ಇದೇ ದಿನ
ರಸಾಯನ ಶಾಸ್ತ್ರ (02-30 ರಿಂದ 03-50 ವರೆಗೆ)
ಕನ್ನಡ ಭಾಷಾ ಪರೀಕ್ಷೆ (ಬೆಂಗಳೂರಲ್ಲಿ ಮಾತ್ರ)
01-08-2020- ಬೆಳಿಗ್ಗೆ 11-30 ರಿಂದ ಮಧ್ಯಾಹ್ನ 12-30 ರವರೆಗೆ.
ಕನ್ನಡ ಭಾಷಾ ಪರೀಕ್ಷೆಯನ್ನು 50 ಅಂಕಗಳಿಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಡೆಸಲಾಗುತ್ತದೆ. ಇತರೆ ವಿಷಯಗಳ ಪರೀಕ್ಷೆಗಳನ್ನು 60 ಅಂಕಗಳಿಗೆ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.