ದೊಡ್ಡಬಳ್ಳಾಪುರ ನಗರದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಸ್ಮಾರಕ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾಗಿದ್ದ ಎ.ಜಿ.ಶ್ರೀನಿವಾಸಮೂರ್ತಿ (70 ವರ್ಷ) ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ.
ಮೃತರು ಪತ್ನಿ, ಒಬ್ಬ ಮಗ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ನಡೆಯಿತು.
ಎ.ಜಿ.ಶ್ರೀನಿವಾಸಮೂರ್ತಿ ಅವರ ನಿಧನಕ್ಕೆ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಸ್ಮಾರಕ ವಿದ್ಯಾಸಂಸ್ಥೆಯ ಅಧ್ಯಕ್ಷ ವಿ.ತಿಮ್ಮಶೆಟ್ಟಪ್ಪ,ಗೌರವ ಕಾರ್ಯದರ್ಶಿ ಎಂ.ಅಶ್ವತ್ಥಯ್ಯ, ಸಹಕಾರ್ಯದರ್ಶಿ ಎ.ಆರ್.ರಾಜಶೇಖರ್, ಖಜಾಂಚಿ ಎ.ರಾಮಶೆಟ್ಟಿ, ವಿದ್ಯಾಸಂಸ್ಥೆಯ ನಿರ್ದೇಶಕರುಗಳು, ವಿದ್ಯಾಸಂಸ್ಥೆಯ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಮುಖ್ಯಶಿಕ್ಷಕರು, ಉಪನ್ಯಾಸಕರು, ಶಿಕ್ಷಕರು, ಬೋಧಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.