ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ, ಮಾಜಿ ಡಾನ್ ಮುತ್ತಪ್ಪ ರೈ(68) ನಿಧನರಾಗಿದ್ದಾರೆ.
ಕಳೆದ ಒಂದು ವರ್ಷದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅನೇಕ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ.ಕರೊನಾ ಕಾರಣ ಕುಟುಂಬಸ್ಥರ ಸಮ್ಮುಖದಲ್ಲಿ ಬೆಂಗಳೂರಿನ ಬಿಡದಿಯಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಇಬ್ಬರು ಮಕ್ಕಳು,ಮೂವರು ತಮ್ಮಂದಿರು,ಒಬ್ಬ ತಂಗಿ,ಕುಟುಂಬ ವರ್ಗ ಮತ್ತು ಅಪಾರವಾದ ಅಭಿಮಾನಿಗಳನ್ನು ಅಗಲಿದ್ದಾರೆ.