ದೊಡ್ಡಬಳ್ಳಾಪುರ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮಂತ .ಬಿ.ಪಾಟೀಲ್ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕು, ಸೂಲಿಬೆಲೆ ಹೋಬಳಿಯ ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ವತಿಯಿಂದ ನಿರ್ಮಿಸಲಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲಾ ಕಟ್ಟಡದ ಮೊದಲನೇ ಹಂತದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗಿಡ್ಡಪ್ಪನಹಳ್ಳಿ ಗ್ರಾಮದ ಬಳಿ ಹತ್ತು ಎಕರೆ ಪ್ರದೇಶದಲ್ಲಿ, ಹತ್ತು ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು, ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಬ್ದುಲ್ ಅಜೀಜ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.