ಖಾಸಗಿ ಆಸ್ಪತ್ರೆಗಳಲ್ಲಿ ಕೆಮ್ಮು,ನೆಗಡಿ,ಜ್ವರಕ್ಕೆ ಚಿಕಿತ್ಸೆ ಪಡೆದವರ ಮಾಹಿತಿ ಸಂಗ್ರಹ : ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ : ಕೆಮ್ಮು, ನೆಗಡಿ, ಜ್ವರ  ಮತ್ತು ತೀವ್ರ ಉಸಿರಾಟದ ತೊಂದರೆಗೆ ಸಂಬಂಧಿಸಿದಂತೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸೆ, ವೈದ್ಯಕೀಯ ಸಲಹೆ ಪಡೆದವರ ಮಾಹಿತಿ ಸಂಗ್ರಹಿಸಿ ವರದಿ ನೀಡಲು ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನೊಳಗೊಂಡ ತಂಡಗಳನ್ನು ರಚಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ‌ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ಸೋಂಕು ಹರಡದಂತೆ ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲೆಯ ಖಾಸಗಿ ವೈದ್ಯರುಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಕೆಪಿಎಂಇ ಕಾಯ್ದೆಯಡಿ ನೋಂದಣಿಯಾದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಲ್ಲಿ ಚಿಕಿತ್ಸೆ ಪಡೆದಿರುವ ಸಾರ್ವಜನಿಕರ ಮಾಹಿತಿ ಸಂಗ್ರಹಣೆ ವಾಸ್ತವವಾಗಿರಬೇಕು ಎಂದರಲ್ಲದೆ, ಕಳೆದ ಹತ್ತು ದಿನಗಳ ಅವಧಿಯಲ್ಲಿ ತೀವ್ರ ಉಸಿರಾಟದ ತೊಂದರೆ, ಐಎಲ್‌ಐ ಸಂಬಂಧಿತ ಕೆಮ್ಮು, ನೆಗಡಿ, ಜ್ವರಕ್ಕೆ ಚಿಕಿತ್ಸೆ ಪಡೆದವರ ಮಾಹಿತಿ ಕ್ರೋಢಿಕರಣ ಕಾರ್ಯ ತುರ್ತಾಗಿ ಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಯ ವೈದ್ಯರು ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿಫಾರಸ್ಸು ಮಾಡಿದ್ದರೆ ಆ ಕುರಿತ ವಿವರಗಳನ್ನು ಕೂಡ ಸಂಗ್ರಹಿಸಬೇಕು ಎಂದು ಖಾಸಗಿ ಆಸ್ಪತ್ರೆ ವೈದ್ಯರಿಗೆ ಸೂಚಿಸಿದರು.

 ಜಿಲ್ಲೆಯಲ್ಲಿರುವ ಅಧಿಕ ರಕ್ತದೊತ್ತಡ, ಮಧುಮೇಹ, ಕ್ಷಯ, ಕುಷ್ಠರೋಗ, ಮತ್ತಿತರ ಖಾಯಿಲೆಗಳಿಂದ ಬಳಲುತ್ತಿರುವ ದುರ್ಬಲ ಗುಂಪಿನ ಜನರನ್ನು ಆಶಾ ಕಾರ್ಯಕರ್ತೆಯರು ಖುದ್ದಾಗಿ ಭೇಟಿ ಮಾಡಿ ಅಗತ್ಯ ಔಷಧಿ, ಸಲಹೆ ದೊರೆತಿದೆಯೇ ಎಂಬುದರ ಸಮೀಕ್ಷೆ ಕಾರ್ಯ ಕೈಗೊಂಡಿದ್ದಾರೆ. ಈ ಸಮೀಕ್ಷೆ ಯಶಸ್ವಿಯಾಗಲು ಮತ್ತು ಕೋವಿಡ್-19 ಅನ್ನು ಸಂಪೂರ್ಣವಾಗಿ ತಡೆಗಟ್ಟಲು ಖಾಸಗಿ ವೈದ್ಯರ ಸಹಕಾರ ಅಗತ್ಯ ಎಂದು ಹೇಳಿದರು. 

ಮೆಡಿಕಲ್ ಸ್ಟೋರ್ ಗಳಲ್ಲಿ ಎಲ್ಲಾ ಔಷಧಿ ವ್ಯಾಪಾರಿಗಳು ಔಷಧ ನಿಯಂತ್ರಣ ನಿಯಮ ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಯಬೇಕು. ಜ್ವರ ಮತ್ತು ಕೆಮ್ಮು ಇರುವವರಿಗೆ ವೈದ್ಯರ ಸಲಹೆ ಮೇರೆಗೆ ಔಷಧಿ ವಿತರಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಡಿ.ಫಾರ್ಮಾ, ಬಿ.ಫಾರ್ಮಾ ಪದವಿ ಪಡೆದ ಅರ್ಹರು ಔಷಧಿ ಅಂಗಡಿಗಳನ್ನು ನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲನೆ ಮಾಡಬೇಕು. ನಿಯಮ ಪಾಲಿಸದೇ ಇರುವ ಔಷಧಿ ವ್ಯಾಪಾರಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಹಾಗೂ ನೆಗಡಿ, ಕೆಮ್ಮು ಹಾಗೂ ಪ್ಯಾರಾಸಿಟಮಲ್ ಔಷಧಿಯನ್ನು ಖರೀದಿಸುತ್ತಿರುವ ಗ್ರಾಹಕರ ಮಾಹಿತಿಯ ವರದಿಯನ್ನು ಜಿಲ್ಲಾ ಆರೋಗ್ಯಾಧಿಕಾರಿ ಅಥವಾ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಯವರು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು, ಸಿಬ್ಬಂದಿಗಳು, ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳ ಪ್ರತಿನಿಧಿಗಳು, ಖಾಸಗಿ ವೈದ್ಯರು ಉಪಸ್ಥಿತರಿದ್ದರು.

ರಾಜಕೀಯ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ ಬೊಮ್ಮಾಯಿ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ

ದೇಶದಲ್ಲಿ ಪೆಟ್ರೊಲ್ ಡಿಸೆಲ್ ಸಮಸ್ಯೆ ಇಲ್ಲಾ. ಎಲ್ ಪಿಜಿ (LPG) ಗಲ್ಪ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದೂ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು

[ccc_my_favorite_select_button post_id="120114"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!