ಘೋಷಿಸಿದ 20ಲಕ್ಷ ಕೋಟಿ ಎಲ್ಲಿ..? ಮೋದಿಗೆ ಕುಟುಕಿದ ಸಿದ್ದರಾಮಯ್ಯ

ದೊಡ್ಡಬಳ್ಳಾಪುರ : ಬಹುಪ್ರಚಾರದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಪ್ರಕಟಿಸಿದ ರೂ.20 ಲಕ್ಷ ಕೋಟಿ ಕೊರೊನಾ ಪ್ಯಾಕೇಜ್ ‘ಕನ್ನಡಿಯೊಳಗಿನ ಗಂಟು’ ಅಷ್ಟೆ. ಟಿವಿ ಪರದೆಯಲ್ಲಿ, ಪತ್ರಿಕೆಯ ಪುಟದಲ್ಲಿ ಕಾಣುತ್ತಿದೆ, ಜನರ ಕೈಗೆ ಸಿಗುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿಯ ವಿರುದ್ಧ ಕುಟುಕಿದ್ದಾರೆ.

ಈ ಕುರಿತು ಸಾಮಾಜಿಜಾಲತಾಣದಲ್ಲಿ ಸಂದೇಶ ಹರಿಬಿಟ್ಟಿರುವ ಅವರು,ನಿರ್ಮಲಾ ಸೀತರಾಮನ್ ಅವರು 5 ಕಂತುಗಳಲ್ಲಿ ಬಿಚ್ಚಿಟ್ಟ ಪ್ಯಾಕೇಜ್ ಅಂಕಿ ಅಂಶಗಳ ಕಸರತ್ತು ‘ಹಳೆಯ ಸರಕಿಗೆ ಹೊಸ ಹೊದಿಕೆಯಾಗಿದೆ.

ಕೊರೊನಾ ಹಾವಳಿಯಿಂದ ದೇಶ ಅತ್ಯಂತ ದೊಡ್ಡ ಮಾನವೀಯತೆಯ ಬಿಕ್ಕಟ್ಟನ್ನು ಎದುರಿಸುತ್ತಿದೆ. ಲಕ್ಷಾಂತರ ವಲಸೆ ಕಾರ್ಮಿಕರು, ಮಹಿಳೆಯರು, ಮಕ್ಕಳು ಊರು ಸೇರಲು ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಈ ಜನರ ಪ್ರಸ್ತಾವವೇ ಇಲ್ಲದ ಪ್ಯಾಕೇಜ್ ‘ಬೆತ್ತಲೆ ಮನುಷ್ಯನ ಮುಂದೆ ಅರಸನ ಬಟ್ಟೆಗಳ ಮೆರವಣಿಗೆ’ ಅಷ್ಟೆ. ಜನರ ಜೇಬಿಗೆ ದುಡ್ಡು ಹಾಕಿ ಎಂದು ನೊಬೆಲ್ ಪ್ರಶಸ್ತಿ ವಿಜೇತ ವಿದ್ವಾಂಸರು, ಪ್ರಖ್ಯಾತ ಆರ್ಥಿಕ ತಜ್ಞರು ಹೇಳುತ್ತಿದ್ದರೆ, ನರೇಂದ್ರ ಮೋದಿ ಅವರು ಖಾಲಿಯಾಗಿರುವ ಸರ್ಕಾರದ ಜೇಬು ತುಂಬಲು ಹೊರಟಿದ್ದಾರೆ. ಇದರಿಂದ ಬಡವರಿಗೆ, ಹಸಿದ ಹೊಟ್ಟೆಗಳಿಗೆ, ಕಾರ್ಮಿಕರಿಗೆ, ರೈತರಿಗೆ, ಸಣ್ಣ ವ್ಯಾಪಾರಿಗಳಿಗೆ ಸಿಕ್ಕಿದೆಷ್ಟು?

ದೇಶದಲ್ಲಿ ಗುರುತಿಸಲಾದ 13 ಕೋಟಿ ಬಡವರಿಗೆ ಮಾಸಿಕ ರೂ.5000 ನೀಡಿದರೆ ಆಗುವ ವೆಚ್ಚ ರೂ.65,000 ಕೋಟಿ. ರೂ.7000 ನೀಡಿದರೆ ಆಗುವ ವೆಚ್ಚ 97,500 ಕೋಟಿ. ಇಷ್ಟು ಕೊಟ್ಟು ಪುಣ್ಯ ಕಟ್ಕೊಳ್ಳಿ ಎಂದು ನಮ್ಮ ಪಕ್ಷ ಹೇಳುತ್ತಲೇ ಇದೆ. ಇಷ್ಟನ್ನೂ ನೀಡಲು ಸಾಧ್ಯ ಇಲ್ಲದಷ್ಟು‌ ಸರ್ಕಾರ ದಿವಾಳಿ‌ ಆಗಿದೆಯೇ? ನರೇಗಾ ಯೋಜನೆಯ ಕೆಲಸದ ದಿನಗಳನ್ನು 200ಕ್ಕೆ ಹೆಚ್ಚಿಸಿ ಮತ್ತು ಈ ಯೋಜನೆಯನ್ನು ನಗರ ಪ್ರದೇಶದ ಬಡವರಿಗೂ ವಿಸ್ತರಿಸಿ ಎಂದು ಪ್ರಾರಂಭದಿಂದಲೇ ನಮ್ಮ ಪಕ್ಷ ಹೇಳುತ್ತಲೇ ಬಂದಿದೆ. ಲಕ್ಷ ಕೋಟಿಗಳ ಪ್ಯಾಕೇಜ್ ನಲ್ಲಿ ಇದರ ಪ್ರಸ್ತಾವವೇ ಇಲ್ಲ.

ಮುಂಗಾರು ಬೆಳೆಯ ಸಿದ್ದತೆಯಲ್ಲಿರುವ ರೈತರು ಈಗಾಗಲೇ ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲದೆ ದಿವಾಳಿಯಾಗಿದ್ದಾರೆ. ಅವರ ಹಳೆ ಸಾಲ ಮನ್ನಾ ಮಾಡಿ, ರಸಗೊಬ್ಬರ, ಕ್ರಿಮಿನಾಶಕ ಮತ್ತು ಕೃಷಿ ಸಲಕರಣೆಗಳ ಮೇಲಿನ ಜಿಎಸ್ ಟಿ ರದ್ದುಪಡಿಸಿ ಎಂಬ ಬೇಡಿಕೆ ಬಗ್ಗೆ ಪ್ರಧಾನಿಗಳು ಮೌನವಾಗಿದ್ದಾರೆ. 

ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಆರ್ಥಿಕ ನೆರವಿನ ಪ್ಯಾಕೇಜ್ ಮೇಲ್ನೋಟಕ್ಕೆ ಬಂಪರ್ ಕೊಡುಗೆ ಎಂದು ಅನಿಸಿದರೂ ಒಳಗಿನ ಗುಟ್ಟು ಬೇರೆ ಇದೆ. ದೇಶದಲ್ಲಿರುವ 6.2 ಲಕ್ಷ ಕೋಟಿ ಕಿರುಉದ್ದಿಮೆಗಳಲ್ಲಿ 45 ಲಕ್ಷ ದೊಡ್ಡಗಾತ್ರದ ಕಿರುಉದ್ದಿಮೆಗಳಿಗೆ ಮಾತ್ರ ಈ ನೆರವು ಲಭ್ಯ. ಉಳಿದವರ ಗತಿ ಏನು? ಸಣ್ಣ ಕೈಗಾರಿಕೆಗಳಿಗೆ ಸಾಲ, ಸಾಲಕ್ಕೆ ಖಾತರಿ ನೀಡಿಕೆಯ ಬಗ್ಗೆ ಪ್ಯಾಕೇಜ್ ಹೇಳಿದೆ.

ಉತ್ಪಾದನೆ ಇಲ್ಲದೆ ಖಾಲಿ ಬಿದ್ದಿರುವ ಕೈಗಾರಿಕೆಗಳಿಗೆ ಸಾಲ‌ಮಾಡುವ ಶಕ್ತಿ ಎಲ್ಲಿದೆ? ಕಾರ್ಮಿಕರ ಸಂಬಳ ನೀಡಿಕೆಗೆ ನೆರವು, ಹಳೆ ಸಾಲದ ಮೇಲಿನ ಬಡ್ಡಿ ಮನ್ನಾ ಮೊದಲಾದ ನೆರವಿನಿಂದ ಮಾತ್ರ ಸಣ್ಣ ಕೈಗಾರಿಕೆಗಳ ರಕ್ಷಣೆ ಸಾಧ್ಯ.

ದೇಶದಲ್ಲಿ ಜನ ರಾಜ್ಯದಿಂದ ರಾಜ್ಯಕ್ಕೆ, ಜಿಲ್ಲೆಯಿಂದ ಜಿಲ್ಲೆಗೆ ಹೋಗಲು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಆಕಾಶದಲ್ಲಿ ವಿಮಾನ ಸಂಚಾರ ವ್ಯವಸ್ಥೆಯನ್ನು ಸುಲಭ ಮಾಡಿ ದುಡ್ಡು ಮಾಡುವ ಯೋಚನೆಯಲ್ಲಿದೆ. ಇದು ಹಸಿದ ಹೊಟ್ಟೆಗಳ ಅಪಹಾಸ್ಯವಲ್ಲದೆ ಇನ್ನೇನು?

ದೇಶಪ್ರೇಮದ ವಾರಸುದಾರರು ತಾವೆಂದು‌ ಸಾರಿಸಾರಿ ಹೇಳುತ್ತಿರುವ ನರೇಂದ್ರ ಮೋದಿ ಅವರು ಈಗ ರಕ್ಷಣಾ ಇಲಾಖೆಯ FDI ಮಿತಿಯನ್ನು ಶೇ 74ಕ್ಕೆ ಹೆಚ್ಚಿಸುವ ಮೂಲಕ ದೇಶದ ಭದ್ರತೆಯ ಜೊತೆ ರಾಜಿ ಮಾಡಲು ಹೊರಟಿದ್ದಾರೆ. ಇದೇನಾ ದೇಶ ಪ್ರೇಮ? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!