ದೊಡ್ಡಬಳ್ಳಾಪುರ : ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸುವ SSLC ಪರೀಕ್ಷಾ ದಿನಾಂಕವನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಘೋಷಿಸಿದ್ದಾರೆ.
ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು,ಜೂನ್ 25 ರಿಂದ ಜುಲೈ 4ರ ವರೆಗೆ SSLC ಪರೀಕ್ಷೆ ನಡೆಯಲಿದ್ದು,ಜೂನ್ 18 ರಂದು ದ್ವಿತೀಯ PUCಯ ಇಂಗ್ಲೀಷ್ ವಿಷಯದ ಪರೀಕ್ಷೆ ದಿನ ನಿಗದಿ ಪಡಿಸಲಾಗಿದೆ.
2879 ಪರೀಕ್ಷಾ ಕೇಂದ್ರಗಳಲ್ಲಿ 8.48.196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು,ಎಲ್ಲಾ ವಿಧ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯ.ಎಲ್ಲಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನರ್ ಅಳವಡಿಕೆ.
ಯಾವುದಾದರೂ ವಿಧ್ಯಾರ್ಥಿಗಳಿಗೆ ಆರೋಗ್ಯದ ಸಮಸ್ಯೆ ಇದ್ದರೆ, ಅಂತಹವರಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗುವುದೆಂದರು.
ಪರೀಕ್ಷೆ ಆರಂಭಕ್ಕೆ ಮುನ್ನ ಪರೀಕ್ಷಾ ಕೇಂದ್ರದ ಸ್ಯಾನಿಟೈಸ್ ಮಾಡುವುದು.ವಲಸೆ ಕಾರ್ಮಿಕರ, ಹಾಸ್ಟೆಲ್ ವಿದ್ಯಾರ್ಥಿಗಳ ಮಕ್ಕಳಿಗೆ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರದ ಬದಲಾವಣೆಗೆ ಅವಕಾಶ ನೀಡಲಾಗಿದ್ದು,ಡಿಡಿ ಚಂದನದಲ್ಲಿ ಮಾದರಿ ಪ್ರಶ್ನೆ ಪ್ರತ್ರಿಕೆಗೆ ಉತ್ತರ ನೀಡುವ ವಿಶೇಷ ಕಾರ್ಯಕ್ರಮ ನಡೆಸಲಾಗುವುದೆಂದು ತಿಳಿಸಿದ್ದಾರೆ.
ಒಟ್ಟು 10 ದಿನದ ಪರೀಕ್ಷೆ ನಡೆಯಲಿದ್ದು,ಇಂಗ್ಲಿಷ್,ಗಣಿತ ಮತ್ತು ವಿಜ್ಞಾನ ಪರೀಕ್ಷೆಗೆ ಒಂದೊಂದು ದಿನ ಅಂತರವಿರಲಿದೆ.