ಲಾಕ್‌ಡೌನ್ : ತುರ್ತು ಪರಿಹಾರಕ್ಕಾಗಿ ಮನವಿ ಸಲ್ಲಿಸಲು ತೆರಳುತ್ತಿದ್ದ ನೇಕಾರರ ತಡೆದ ಪೊಲೀಸರು

ದೊಡ್ಡಬಳ್ಳಾಪುರ : ಕರೊನಾ ಲಾಕ್ಡೌನ್ ಹಿನ್ನಲೆಯಲ್ಲಿ ನೇಕಾರರು ಸಂಕಷ್ಟಕ್ಕೀಡಾಗಿದ್ದು, ಸರ್ಕಾರ ಈ ಕೂಡಲೇ ನೇಕಾರರ ಸಂಕಷ್ಟಗಳನ್ನು ಬಗೆಹರಿಸಲು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ನೇಕಾರರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲು ತೆರಳುತ್ತಿದ್ದ ನೂರಾರು ನೇಕಾರರನ್ನು ತಾಲೂಕಿನ ರಘನಾಥಪುರದ ಬಳಿ ಪೊಲೀಸರು ತಡೆದ ಪ್ರಸಂಗ ನಡೆಯಿತು.

ಸೋಮವಾರ ಬೆಳಿಗ್ಗೆ 11 ಗಂಟೆಗೆ ಬೀರಸಂದ್ರದ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲು ವಿವಿಧ ವಾಹನಗಳಲ್ಲಿ ತೆರಳುತ್ತಿದ್ದ ನೂರಾರು ನೇಕಾರರು ಹಾಗೂ ಮುಖಂಡರನ್ನು ರಘನಾಥಪುರದ ಬಳಿ ತಡೆದು ಕೊರೊನಾ ಲಾಕ್ಡೌನ್ ವಿಸ್ತರಣೆ ಇರುವುದರಿಂದ ಇಷ್ಟೊಂದು ಮಂದಿಯನ್ನು ತೆರಳಲು ಬಿಡುವುದಿಲ್ಲ ಎಂದು ಪೊಲೀಸರು ತಡೆದರು.

ಇದಕ್ಕೆ ಪ್ರತಿಕ್ರಿಯಿಸಿದ ನೇಕಾರ ಮುಖಂಡರು, ನಾವು ಮನವಿ ಸಲ್ಲಿಸುವ ಕುರಿತಂತೆ ಸಭೆ ಸೇರಿದ್ದ ವೇಳೆ ಮೇ.17ಕ್ಕೆ ಲಾಕ್ಡೌನ್ ಅವಧಿ ಮುಗಿಯುವುದಾಗಿ ಘೋಷಣೆಯಾಗಿತ್ತು.ಆದ್ದರಿಂದ ಇಂದು ಮನವಿ ಸಲ್ಲಿಸಲು ತೆರಳುತ್ತಿದ್ದೇವೆ. ನಿಯಮ ಮೀರಿಲ್ಲ ಎಂದು ಸ್ಪಷ್ಟಪಡಿಸಿದರು.ಇದೇ ವೇಳೆ ನೂರಾರು ನೇಕಾರರು ರಸ್ತೆಯಲ್ಲಿ ಸೇರಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.ನಂತರ ಜಿಲ್ಲಾಧಿಕಾರಿಗಳೇ ಇಲ್ಲಿಗೆ ಬಂದು ನಮ್ಮ ಮನವಿ ಸ್ವೀಕರಿಸಲಿ ಎಂದು ನೇಕಾರ ಮುಖಂಡರು ಒತ್ತಾಯಿಸಿದಾಗ ಜಿಲ್ಲಾಧಿಕಾರಿಗಳ ಬದಲಿಗೆ ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು.

ಮನವಿ ಸಲ್ಲಿಸಿದ ನೇಕಾರ ಮುಖಂಡ ಪಿ.ಎ.ವೆಂಕಟೇಶ್ ಮಾತನಾಡಿ,ಕರೊನಾ ಪರಿಣಾಮ ನೇಕಾರಿಕೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆ, ರೇಷ್ಮೆ ಬೆಲೆ ಹೆಚ್ಚಳ, ನೇಯ್ದ ಬಟ್ಟೆಗಳಿಗೆ ಮಾರುಕಟ್ಟೆ ಇಲ್ಲದಿರುವುದು ಮೊದಲಾದ ಸಮಸ್ಯೆಗಳಲ್ಲಿಯೇ ನೇಕಾರರು ಬದುಕುತ್ತಿದ್ದು,ಲಾಕ್ಡೌನ್ ನೇಕಾರರು ಆರ್ಥಿಕವಾಗಿ ದಿವಾಳಿಯಾಗುತ್ತಿದ್ದಾರೆ.ನೇಕಾರರಿಗೆ ನೆರವು ನೀಡಬೇಕೆನ್ನುವ ಮನವಿಯನ್ನು ಮುಖ್ಯಮಂತ್ರಿಗಳಾದಿಯಾಗಿ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ. ಆದರೆ ನೇಕಾರರಿಗೆ ತುರ್ತಾಗಿ ಯಾವುದೇ ನೆರವು ದೊರೆತಿಲ್ಲ. ಈ ದಿಸೆಯಲ್ಲಿ  ನೇಕಾರರ ಕುಟುಂಬಕ್ಕೆ ಮಾಸಿಕ 7.5 ಸಾವಿರ ಧನ ಸಹಾಯ  ನೀಡಬೇಕು. ದಕ್ಷಿಣ ಭಾರತದ ರಾಜ್ಯಗಳಾದ ಆಂದ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ  ನೇಕಾರರಿಗೆ ತಿಂಗಳಿಗೆ 2 ಸಾವಿರ ರೂ ನೀಡುತ್ತಿದ್ದು, ಅದೇ ರೀತಿ ಕರ್ನಾಟಕದ ಪವರ್ಲೂಂ ನೇಕಾರರಿಗೂ ಸಿಗುವಂತಾಗಬೇಕು. ಉದ್ಯಮ ಚೇತರಿಸಿಕೊಳ್ಳುವ ತನಕ ವಿದ್ಯುತ್ ಬಿಲ್ (ಗೃಹ ಬಳಕೆಯೂ ಸೇರಿ) ಸಂಪೂರ್ಣ ಮನ್ನಾ ಮಾಡಬೇಕು.ನೇಕಾರರ ಬಟ್ಟೆಗಳನ್ನು ಖರೀದಿಸಲು ಫ್ಯಾಬ್ರಿಕ್ ಬ್ಯಾಂಕ್ ತೆರೆಯಬೇಕು.. ನೇಕಾರರನ್ನು ಅಸಂಘಟಿತ ಕಾರ್ಮಿಕರನ್ನಾಗಿ ಪರಿಗಣಿಸಬೇಕು. ನೇಕಾರರಿಗೆ ಉಚಿತ ಆರೋಗ್ಯ ಸೌಲಭ್ಯ, ಮಗ್ಗಗಳಿಗೆ ಸಹಾಯಧನ, ನೇಕಾರರ ಮಕ್ಕಳಿಗೆ ಶಿಕ್ಷಣ ಶುಲ್ಕ ರಿಯಾಯಿತಿ ಸೌಲಭ್ಯ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ನೇಕಾರರ ಸಂಕಷ್ಟಗಳನ್ನು ಮನವರಿಕೆಯಾಗಿದ್ದು,ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಿ ನಂತರ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಬಂಧಪಟ್ಟ ಸಚಿವರ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತರಬಹುದಾಗಿದೆ. ವಲಸೆ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಿದಂತೆ ನೇಕಾರರಿಗೆ ಕಿಟ್ ವಿತರಣೆ ಮಾಡುವ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಟಿ.ಎಸ್.ಶಿವರಾಜ್,ನೇಕಾರರ ಹಿತರಕ್ಷಣಾ ಸಮಿತಿಯ ಕೆ.ಮಲ್ಲೇಶ್,ಎಸ್.ಅಶೋಕ್,ಎಂ.ಮುನಿರಾಜು,ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ,ಜಿಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ,ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಟಿ.ಎನ್.ಪ್ರಭುದೇವ್, ಆರ್.ಕೆಂಪರಾಜ್ ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!