ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವೈರಾಣು ನಿಯಂತ್ರಣಕ್ಕೆ ಜನರು ಮುಂದಾಗಬೇಕು : ಆರ್.ಅಶೋಕ್

ದೊಡ್ಡಬಳ್ಳಾಪುರ : ಮಾರಕವಾದ ವೈರಾಣು ಕೋವಿಡ್-19 ನೊಂದಿಗೆ ಜೀವನ ಸರಿದೂಗಿಸಿಕೊಂಡು ಮತ್ತೆ ಬದುಕನ್ನು ಕಟ್ಟಿಕೊಳ್ಳುವ ಅನಿವಾರ್ಯತೆ ಎದುರಾಗಿರುವ ಪರಿಸ್ಥಿತಿಯಲ್ಲಿ, ಜನರು ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳುವ ಮೂಲಕ ವೈರಾಣು ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಕಂದಾಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ತಿಳಿಸಿದರು.

ದೇವನಹಳ್ಳಿ ತಾಲ್ಲೂಕು ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19 ವೈರಸ್ ನಿಯಂತ್ರಣ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಕೋವಿಡ್-19 ವೈರಾಣು ಹರಡುವಿಕೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ಜಾರಿಯಲ್ಲಿದ್ದ ಕಾರಣ ದೇಶ ಹಾಗೂ ರಾಜ್ಯಕ್ಕೆ ಆರ್ಥಿಕವಾಗಿ ಸಾಕಷ್ಟು ಸಮಸ್ಯೆ ಎದುರಾಗಿದೆ. ಹೀಗೆ ಪರಿಸ್ಥಿತಿ ಮುಂದುವರಿದರೆ, ಜನರಿಗೆ ಬದುಕು ಕಟ್ಟಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಅರಿತು ಸರ್ಕಾರ ‌ಭಾನುವಾರ ಸಂಪೂರ್ಣ ಲಾಕ್ ಡೌನ್ ಹಾಗೂ ಕರ್ಫ್ಯೂ ಸಮಯ ಮುಂದುವರಿಕೆ ಹೊರತುಪಡಿಸಿ ಎಲ್ಲವನ್ನು ಸಡಿಲಿಸಿದೆ ಎಂದು ಹೇಳಿದರು.

ಬಹಳಷ್ಟು ಖಾಸಗಿ ಕ್ಲಿನಿಕ್ ಹಾಗೂ ಆಸ್ಪತ್ರೆಗಳು ಮುಚ್ಚುವ ಮೂಲಕ ಆರೋಗ್ಯ ಸೇವೆಯನ್ನು ಸ್ಥಗಿತಗೊಳಿಸಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಎಲ್ಲಾ ಖಾಸಗಿ ವೈದ್ಯರು ತಕ್ಷಣದಿಂದಲೇ ತಮ್ಮ ಸೇವೆಯನ್ನು ಮತ್ತೆ ಆರಂಭಿಸಬೇಕು. ಯಾವುದೇ ವೈದ್ಯಕೀಯ ತುರ್ತು ಅಥವಾ ಅಪಘಾತಗೊಳಗಾದ ವ್ಯಕ್ತಿಗಳು ಆರೋಗ್ಯ ಸೇವೆಗೆ ಬಂದಾಗ ಕೋವಿಡ್-19 ತಪಾಸಣೆಗೆ ಶಿಫಾರಸ್ಸು ಮಾಡದೆ, ಅಗತ್ಯ ಸೇವೆಯನ್ನು ನೀಡಬೇಕು ಎಂದು ತಿಳಿಸಿದರು.

ಸರ್ಕಾರಿ ಹಾಗೂ ಖಾಸಗಿ ಬಸ್, ಟ್ಯಾಕ್ಸಿ, ಆಟೋ ಹಾಗೂ ಅಂತರ ಜಿಲ್ಲಾ ರೈಲ್ವೆ ಸೇವೆಯನ್ನು ಆರಂಭಿಸಲು ಅನುಮತಿ ನೀಡಲಾಗಿದ್ದು, ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಹಾಗೂ ಸೇವೆಯ ವೇಳೆ ಸ್ಯಾನಿಟೈಸರ್ ಇಟ್ಟುಕೊಳ್ಳುವುದು ಕಡ್ಡಾಯ ಎಂದು ತಿಳಿಸಿದ ಸಚಿವರು, ಪ್ರಯಾಣಿಕರು ಪ್ರಯಾಣಿಸುವಾಗ ಮಾಸ್ಕ್ ಧರಿಸದಿದ್ದರೆ, ಪೊಲೀಸ್ ಇಲಾಖೆ ಅಂತಹ ಪ್ರಯಾಣಿಕರಿಂದ ದಂಡವನ್ನು ವಸೂಲಿ ಮಾಡಬೇಕು ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಹಲವು ಜಿಲ್ಲೆಗಳೊಂದಿಗೆ ಗಡಿಯನ್ನು ಹಂಚಿಕೊಳ್ಳುವುದರ ಜೊತೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಿದೆ. ಜಿಲ್ಲೆಯಲ್ಲಿರುವ ಕಾರ್ಯದೊತ್ತಡದ ಮಧ್ಯೆ, ಅಧಿಕಾರಿಗಳು ಹಗಲಿರುಳು ದುಡಿದ ಪರಿಣಾಮ ಕೋವಿಡ್-19 ವೈರಾಣು ಹರಡುವಿಕೆಯನ್ನು ನಿಯಂತ್ರಣದಲ್ಲಿ ಇಡುವುದರ ಮೂಲಕ ಬೇರೆ ಜಿಲ್ಲೆಯವರಿಗೆ ಮಾದರಿಯಾಗಿರುವುದು ಶ್ಲಾಘನೀಯ ಎಂದು ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.

ಕೋವಿಡ್-19 ವೈರಸ್ ನಿಯಂತ್ರಣ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಕುರಿತ ಸಂಬಂಧಪಟ್ಟ ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ಶೀಘ್ರವಾಗಿ ಆಯೋಜಿಸಿ, ಆರ್ಥಿಕ ಚಟುವಟಿಕೆಯನ್ನು ಮತ್ತೆ ಪ್ರರಂಭಿಸಲು ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಕೃಷಿ ಚಟುವಟಿಕೆಗೆ ಯಾವುದೇ ಸಮಸ್ಯೆಯಾಗದಂತೆ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ತೇಜಸ್ವಿನಿ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ,  ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಜಿತ್.ವಿ.ಜೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಉಪ ವಿಭಾಗಾಧಿಕಾರಿ ಅರಳ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ ಸರ್ಕಾರ ಅವಧಿಯಲ್ಲಿ ಎಷ್ಟು ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸಿದ್ದೀರಿ?: ಡಿಸಿಎಂ ಡಿ.ಕೆ.

"ಹಿಮಂತ್ ಅವರು ಅಕ್ರಮ ಬಾಂಗ್ಲಾ ವಲಸಿಗರನ್ನು ರಾಜ್ಯದಿಂದ ವಾಪಸ್ ಕಳುಹಿಸುವುದಾಗಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 44 ಸಾವಿರ ಅಕ್ರಮ ಬಾಂಗ್ಲಾ ವಲಸಿಗರನ್ನು ವಾಪಸ್ ಕಳುಹಿಸಲಾಗಿತ್ತು. ಈಗ ಬಿಜೆಪಿ ಸರ್ಕಾರದಲ್ಲಿ ಎಷ್ಟು ಅಕ್ರಮ ಬಾಂಗ್ಲಾ

[ccc_my_favorite_select_button post_id="120560"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!