ದೊಡ್ಡಬಳ್ಳಾಪುರ : ಶಿಕ್ಷಣ ಇಲಾಖೆ ನಡೆಸುವ #TET ಪರೀಕ್ಷೆಯನ್ನು ಜು.5 ರಂದು ನಡೆಸಲಾಗುವುದೆಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕರೊನಾ ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಇಡೀ ದೇಶ ಲಾಕ್ ಡೌನ್ ಮಾಡಿರುವ ಕಾರಣ 2020ರ ಏ.11 ರಂದು ನಿಗದಿಯಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯನ್ನು ಮುಂದೂಡಲಾಗಿತ್ತು.
ಅರ್ಜಿ ಸಲ್ಲಿಸದಿರುವ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯುವ ಸಲುವಾಗಿ ಹೊಸದಾಗಿ ಅರ್ಜಿ ಸಲ್ಲಿಸಲೂ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.