ದೊಡ್ಡಬಳ್ಳಾಪುರ : ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಮಸ್ಕಟ್ ನಿಂದ ಮೇ.20 ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂದೇ ದಿನ 200 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.
ಮಸ್ಕಟ್ ನಿಂದ ಬಂದ ಆರನೇ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 115 ಮಂದಿ ಹಾಗೂ ದಮಮ್ ನಿಂದ ಬಂದ ಏಳನೇ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 85 ಮಂದಿ ಬಂದಿದ್ದಾರೆ.
ಸರ್ಕಾರದ ನಿರ್ದೇಶನದಂತೆ 200ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು,ದಮಮ್ ನಿಂದ ಬಂದ ಒಬ್ಬ ಪ್ರಯಾಣಿಕನಲ್ಲಿ ಕರೊನಾ ವೈರಾಣು ಸೋಂಕಿನ ಲಕ್ಷಣಗಳು ಕಂಡು ಬಂದಿದ್ದು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಕ್ವಾರಂಟೈನ್ ಗಾಗಿ ಕಳುಹಿಸಿಕೊಡಲಾಗಿದೆ.
ಆರೋಗ್ಯ ತಪಾಸಣೆಯ ಬಳಿಕ,199 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಬಿಎಂಟಿಸಿ ಬಸ್ ಗಳ ಮೂಲಕ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.