ದೊಡ್ಡಬಳ್ಳಾಪುರ : ಅಮೇರಿಕಾದ ಸ್ಯಾನ್ ಫ್ರಾನ್ಸಿಸ್ಕೊ ದಿಂದ ಮೇ.21 ಬೆಳಿಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏಂಟನೇನೇ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 117 ಮಂದಿ ಅನಿವಾಸಿ ಭಾರತೀಯರು ಪ್ರಯಾಣಿಸಿದ್ದಾರೆ.
ಏರ್ ಇಂಡಿಯಾ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ಬಂದಿಳಿದ ಒಟ್ಟು 117 ಮಂದಿ ಪ್ರಯಾಣಿಕರಲ್ಲಿ 50 ಪುರುಷ ಮತ್ತು 67 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ.
ಬಳಿಕ ಏರ್ ಇಂಡಿಯಾ ವಿಮಾನವು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿತು.
ಸರ್ಕಾರದ ನಿರ್ದೇಶನದಂತೆ, 117 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. 117 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಬಿಎಂಟಿಸಿ ಬಸ್ ಗಳ ಮೂಲಕ ಕಳುಹಿಸಿಕೊಡಲಾಗಿದ್ದು, ಕ್ವಾರಂಟೈನ್ ವೆಚ್ಚವನ್ನು ಭರಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.