ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಕರೊನಾ ವೈರಸ್ ಸೋಂಕು
ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕ
ಆರೋಗ್ಯದ ಹಿತದೃಷ್ಠಿಯಿಂದ ಸಿ.ಆರ್.ಪಿ.ಸಿ. 1973, ಕಲಂ 144(1) ರಡಿ ಮೇ 17 ರಿಂದ ಮೇ 31ರ
ಮಧ್ಯರಾತ್ರಿಯವರೆಗೆ ಕೇಂದ್ರ ಗೃಹ ಮಂತ್ರಾಲಯದಿಂದ
ಹೊರಡಿಸಿರುವ ಆದೇಶಗಳನ್ವಯ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಅವರು ಆದೇಶಿಸಿದ್ದಾರೆ.
ನಿಷೇಧಾಜ್ಞೆ ಅವಧಿಯಲ್ಲಿ ಪ್ರತಿದಿನ ರಾತ್ರಿ 7 ಗಂಟೆಯಿಂದ
ಬೆಳಗ್ಗೆ 7 ಗಂಟೆಯವರೆಗೆ ಸಾರ್ವಜನಿಕರ
ಅನಗತ್ಯ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಿದ್ದು, ಕೇಂದ್ರ ಗೃಹ ಮಂತ್ರಾಲಯದ
ಆದೇಶದಂತೆ ಮೇ 24 ಮತ್ತು
ಮೇ 31ರ ಭಾನುವಾರದಂದು ದಿನನಿತ್ಯದ
ಅಗತ್ಯ ಸೇವೆಗಳನ್ನು ಹೊರತುಪಡಿಸಿ ಸಂಪೂರ್ಣ ಕರ್ಫ್ಯೂ ಜಾರಿಯಲ್ಲಿರುತ್ತದೆ.
ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಬಂಧಿಸಿ, ಅವರ ವಿರುದ್ಧ
ಸೂಕ್ತ ಕಾನೂನು ರೀತ್ಯಾ ಕ್ರಮ
ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು
ಆದೇಶದಲ್ಲಿ ತಿಳಿಸಿದ್ದಾರೆ.
ಪ್ಲಾಸ್ಟಿಕ್ ಕ್ರೇಟ್ಸ್ ಖರೀದಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ದೊಡ್ಡಬಳ್ಳಾಪುರ : ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ವತಿಯಿಂದ 2020-21 ನೇ ಸಾಲಿನಲ್ಲಿ ಮಾವು ಬೆಳೆಗಾರರಿಗೆ ಕೋಯ್ಲು ನಂತರ ಚಟುವಟಿಕೆಗಳಿಗೆ ಅವಶ್ಯವಿರುವ 15 ಕೆ.ಜಿ ಮತ್ತು 20 ಕೆ.ಜಿ ಸಾಮರ್ಥ್ಯದ ಪ್ಲಾಸ್ಟಿಕ್ ಕ್ರೇಟ್ಸ್‌ಗಳನ್ನು ಅನುಮೋದಿತ ಸರಬರಾಜುದಾರರಿಂದ ಖರೀದಿಗೆ ನಿಗಮದಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರೈತರು ಕನಿಷ್ಠ 0.20 ಹೆಕ್ಟೇರ್ ನಿಂದ ಗರಿಷ್ಠ 2.00 ಹೆಕ್ಟೇರ್ ಮಾವು ಬೆಳೆ ಪ್ರದೇಶ ಹೊಂದಿದ್ದಲ್ಲಿ ಸಂಬಂಧಪಟ್ಟ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಅರ್ಜಿಯನ್ನು ಮತ್ತು ದಾಖಲಾತಿಗಳಾದ ಪಹಣಿ, ಬೆಳೆ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಹಾಗೂ ಪರಿಶಿಷ್ಟ ಜಾತಿ/ಪಂಗಡ ವರ್ಗ ಆಗಿದಲ್ಲಿ ಜಾತಿ ಪ್ರಮಾಣ ಪತ್ರವನ್ನು ರೈತರು ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸಬಹುದು. ದೇವನಹಳ್ಳಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಮೊ.ಸಂ.: 9448001644, ತಾಂತ್ರಿಕ ಸಹಾಯಕರು ಮೊ.ಸಂ.: 9886736664, ಕಚೇರಿ ದೂ.ಸಂ.: 080 2768120. ದೊಡ್ಡಬಳ್ಳಾಪುರ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಮೊ.ಸಂ.: 9632410677, ತಾಂತ್ರಿಕ ಸಹಾಯಕರು ಮೊ.ಸಂ.: 9741895988, ಕಚೇರಿ ದೂ.ಸಂ.: 080 27623770. ಹೊಸಕೋಟೆ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಮೊ.ಸಂ.: , ತಾಂತ್ರಿಕ ಸಹಾಯಕರು ಮೊ.ಸಂ.: 9538953949, ಕಚೇರಿ ದೂ.ಸಂ.: 08029716626. ಹಾಗೂ ನೆಲಮಂಗಲ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಮೊ.ಸಂ.: 9901754339, ತಾಂತ್ರಿಕ ಸಹಾಯಕರು ಮೊ.ಸಂ.: 9980276248, ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ಮಾಹಾಂತೇಶ ಮುರಗೋಡ (ಮೊ.ಸಂ.: 9448999214) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.