ದೇವನಹಳ್ಳಿ : ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕುಂದಾಣ ಹೊಬಳಿ ಜೆಡಿಎಸ್ ಮುಖಂಡ ಬಿ.ಕೆ.ನಾರಾಯಣಸ್ವಾಮಿ ದಿನಸಿ ಕಿಟ್ ವಿತರಿಸಿದರು.
ತಾಲೂಕಿನ ಕುಂದಾಣ ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದಿನಸಿ ಕಿಟ್ ನೀಡಿ,ಆಶಾ ಕಾರ್ಯಕರ್ತೆಯರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು.
ಈ ವೇಳೆ ಜೆಡಿಎಸ್ ಪ್ರಚಾರ ಘಟಕದ ಅಧ್ಯಕ್ಷ ನೆರಗನಹಳ್ಳಿ ಶ್ರೀನಿವಾಸ್,ಆನಂದ್,ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಲಕ್ಷ್ಮಣ ,ಗ್ರಾಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ,ಡಾ.ನೀತು,ಕುಂದಾಣ ಜೆಡಿಎಸ್ ಹೋಬಳಿ ಅಧ್ಯಕ್ಷ ನರಸಿಂಹ ಮೂರ್ತಿ,ಕಾರ್ಯದರ್ಶಿ ಶ್ರೀನಿವಾಸ್,ಆಶಾ ಕಾರ್ಯಕರ್ತೆಯರು ಹಾಗೂ ಮತ್ತಿತರರಿದ್ದರು.