ಪ್ರಭಾವಿಗಳ ವಿರುದ್ದ ಕ್ರಮಕೈಗೊಳ್ಳಲು ಪೊಲೀಸರ ಮೀನಾ ಮೇಷ – ಮೆ.30ಕ್ಕೆ ಪ್ರತಿಭಟನೆಯ ಎಚ್ಚರಿಕೆ

ದೊಡ್ಡಬಳ್ಳಾಪುರ : ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ,ನ್ಯಾಯ ನೀಡಬೇಕಾದ ಪೊಲೀಸ್ ಇಲಾಖೆ ಪ್ರಭಾವಿ ವಕೀಲರೊಬ್ಬರ ಮೇಲೆ ಹಲವಾರು ಬಾರಿ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ.ಈ ನಿಟ್ಟಿನಲ್ಲಿ ಪೊಲೀಸರಿಗೆ ಇದೇ ಮೇ.29ರವರೆಗೆ ಗಡವು ನೀಡುತ್ತಿದ್ದು ಕಾನೂನು ರೀತಿಯ ಕ್ರಮ ತೆಗೆದುಕೊಳ್ಳದೆ ಹೋದರೆ ಮೇ.30ರಂದು ಡಿವೈಎಸ್ಪಿ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ರಾಜ ಸಣ್ಣಕ್ಕಿ ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಜನಪರ ಸಂಘಟನೆಗಳ ಒಕ್ಕೂಟದಲ್ಲಿ ಕನ್ನಡಪರ, ದಲಿತಪರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.

ವಕೀಲರಾದ ಜಿ.ವೆಂಕಟೇಶ್ ಅವರು ವಿವಿಧ ಪ್ರಕರಣಗಳಲ್ಲಿ ಹಲವಾರು ಜನರಿಗೆ ಕಿರುಕುಳ ನೀಡುತ್ತಿರುವ ಆರೋಪಗಳಿವೆ. ಈ ಬಗ್ಗೆ ಸಾರ್ವಜನಿಕರಿಂದ ಆರು ದೂರುಗಳನ್ನು ನೀಡಿ, ಹದಿನೈದು ದಿನಗಳು ಕಳೆದರೂ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ.ಈ ನಿಟ್ಟಿನಲ್ಲಿ ಜನಪರ ಸಂಘಟನೆಗಳ ಒಕ್ಕೂಟದಲ್ಲಿ ಈ ಸುದ್ಧಿಗೋಷ್ಠಿಯನ್ನು ನಡೆಸುತ್ತಿದ್ದು,ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ,  ವಕೀಲರು ಮತ್ತು ಆರ್.ಟಿ.ಐ ಕಾರ್ಯಕರ್ತ ಎಂದು ಹೇಳಿಕೊಳ್ಳುವ ವ್ಯಕ್ತಿಯ ವಿರುದ್ಧ ವಸೂಲಿ,ಕಿರುಕುಳ ಮೊದಲಾದ ಹಲವಾರು ದೂರುಗಳು ನೀಡಿದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವುದು ಆಶ್ಚರ್ಯವಾಗಿದೆ. ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಪೊಲೀಸರು ನೇರ ಕಾರಣವಾಗುತ್ತಾರೆ. ನೊಂದವರಿಗೆ ರಕ್ಷಣೆ ನೀಡಬೇಕಿರುವುದು ಪೊಲೀಸರ ಕರ್ತವ್ಯ ಎಂದರು.

ರಶ್ಮಿ ಎನ್ನುವವರು ಮಾತನಾಡಿ,ನಮ್ಮ ಮನೆಯ ಮುಂದೆ ವಾಸ ಮಾಡುತ್ತಿರುವ ವಕೀಲರು ಹಾಗೂ ಆರ್.ಟಿ.ಐ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಜಿ.ವೆಂಕಟೇಶ್ ಎಂಬ ವ್ಯಕ್ತಿ ನನ್ನೊಡನೆ ಅವಾಚ್ಯ ಶಬ್ದಗಳನ್ನು ಬಳಸಿ ಅಸಭ್ಯವಾಗಿ ವರ್ತಿಸಿದ್ದು ಆ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿ ಸುಮಾರು 15 ದಿನ ಕಳೆದರೂ ಯಾವುದೇ ಕ್ರಮ ಕೈಗಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.

ವಕೀಲ ಆಂಜನೇಗೌಡ ಮಾತನಾಡಿದ,ಜನ ಸಾಮಾನ್ಯನೊಬ್ಬ ತಪ್ಪು ಮಾಡಿದರೆ ಆತನನ್ನು ತಕ್ಷಣವೇ ಕಠಿಣ ಶಿಕ್ಷಗೆ ಒಳಪಡಿಸುವ ಪೊಲೀಸರು,ಈ ವ್ಯಕ್ತಿಯ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಜಾಣ ಕುರುಡಾಗಿದೆ.ಇಂತಹವರ ಈ ಕೃತ್ಯದಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ.ವಕೀಲರು ತಪ್ಪು ಮಾಡಿದರೆ ವಕೀಲರ ಪರಿಷತ್ತು ಶಿಸ್ತು ಕ್ರಮ ಕೈಗೊಳ್ಳುತ್ತದೆ. ಜನಸಾಮಾನ್ಯರಿಗೂ ವಕೀಲರಿಗೂ ಒಂದೇ ಕಾನೂನು.ಕಾನೂನನ್ನು ಕೈಗೆತ್ತಿಕೊಳ್ಳುವುದು ಅಪರಾಧ.ಪೊಲೀಸ್ ಅಧಿಕಾರಿಗಳ ಈ ನಡೆ ನೋವಿನ ಸಂಗತಿಯಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು,ಕಸಾಪ ತಾಲೂಕು ಅಧ್ಯಕ್ಷೆ ಪ್ರಮೀಳಾ ಮಹಾದೇವ್,ನಗರಸಭೆ  ಮಾಜಿ ಸದಸ್ಯ ಪ್ರಕಾಶ್,ಬಿಜೆಪಿ ಮುಖಂಡ ರೋಜಿಪುರ ರಘು, ಕರುನಾಡ ಸೇನೆಯ ತಾಲೂಕು ಅದ್ಯಕ್ಷ ತೆರದಾಳ್ ಶ್ರೀನಿವಾಸ್,ಯೋಗಿ ನಾರಾಯಣ ಬಡಾವಣೆಯ ನರೇಂದ್ರ,ಶ್ರೀನಿವಾಸ್,ಪತ್ರಕರ್ತರಾದ ಮುನಿಕೃಷ್ಣ,ಎಚ್.ಎಸ್.ವೆಂಕಟೇಶ್ ಮುಂತಾದವರು ಹಾಜರಿದ್ದರು.

ಅಕ್ರಮ ಮುಚ್ಚಿಡಲು ಸುಳ್ಳು ಆರೋಪ – ನ್ಯಾಯವಾದಿ ಜಿ.ವೆಂಕಟೇಶ್

ಅಕ್ರಮವಾಗಿ ಕಟ್ಟಿರುವ ಕಟ್ಟಡ ಕುರಿತು,ನಗರಸಭೆ ದೂರು ನೀಡಿದ್ದರ ಹಿನ್ನಲೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ನನ್ನ ವಿರುದ್ದ ಸುಳ್ಳು ಆರೋಪ ಮಾಡಿದ್ದು,ಪ್ರಕರಣದಿಂದ ಹಿಂದೆ ಸರಿಸುವ ಶಡ್ಯಂತ್ರ ರೂಪಿಸಿ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡದಲ್ಲಿ ಬಾಡಿಗೆಯಲ್ಲಿರುವವರನ್ನು ಬಳಸಿಕೊಂಡು ನನ್ನ ವಿರುದ್ದ ನಿರಾದಾರ ಆರೋಪ ಮಾಡಿದ್ದು,ಇವರ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲಾಗುವುದೆಂದು ನ್ಯಾಯವಾದಿ ವೆಂಕಟೇಶ್ ಹರಿತಲೇಖನಿಗೆ ತಿಳಿಸಿದ್ದಾರೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!