ತಿರುಪತಿ ಆಸ್ತಿ ಮಾರಲು ಮುಂದಾದ ಆಂಧ್ರ ಸಿಎಂ ಜಗನ್ ವಿರುದ್ಧ ಹಿಂದು ಸಂಘಟನೆಗಳು ಕಿಡಿ

ದೊಡ್ಡಬಳ್ಳಾಪುರ : ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ ತಿರುಪತಿಯ ಆಸ್ತಿ ಮಾರಾಟ ಮಾಡಲು ಮುಂದಾಗಿರುವುದಕ್ಕೆ ಹಿಂದು ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ತಮಿಳುನಾಡಿನ ವಿವಿಧ ಸ್ಥಳಗಳಲ್ಲಿರುವ ಮನೆ ಮತ್ತು ಕೃಷಿ ಭೂಮಿ ಸೇರಿದಂತೆ ಹಲವು ಸ್ಥಿರ ಆಸ್ತಿಗಳನ್ನು ಹರಾಜಿಗಿಡಲು ನಿರ್ಧರಿಸಿದೆ.ಇದರಿಂದಾಗಿ ಜಗನ್ ಮೋಹನ್ ರೆಡ್ಡಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ‌.

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು. ತಮ್ಮ ರಾಜ್ಯಗಳನ್ನು ಅಲ್ಪಸಂಖ್ಯಾತರ ರಾಜ್ಯಗಳನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದಾರೆ ಆರೋಪಿಸಿದ್ದಾರೆ.

ದೇವಸ್ಥಾನಗಳ ಆಸ್ತಿ ಮಾರಾಟದ ಜತೆಗೆ ರಾಜ್ಯದಲ್ಲಿ ಹಿಂದುತ್ವಕ್ಕೆ ಹಾನಿ ಉಂಟುಮಾಡುವುದು ಸರಕಾರದ ಉದ್ದೇಶವಾಗಿರುವಂತಿದೆ. ಸರಕಾರವು ಇಂತಹ ನಿರ್ಧಾರ ಕೈಗೊಳ್ಳುವ ಮೂಲಕ ಹಿಂದೂಗಳ ಭಾವನೆ ಜತೆ ಚೆಲ್ಲಾಟವಾಡುತ್ತಿದೆ. ರಾಜ್ಯ ಸರಕಾರ ಈ ನಿರ್ಧಾರಕ್ಕೆ ತಡೆ ನೀಡಬೇಕು. ಇಲ್ಲದಿದ್ದರೆ ಹಿಂದೂಗಳ ಪ್ರತಿಭಟನೆ, ಆಕ್ರೋಶ, ಅಸಹನೆ ಎದುರಿಸಬೇಕಾಗು­ತ್ತದೆ,ಎನ್ನುವ ಸಂದೇಶಗಳು ಹರಿದಾಡುತ್ತಿವೆ.

” ಆದೇಶಕ್ಕೆ ತಡೆ “

ಆಸ್ತಿಗಳ ಹರಾಜಿಗೆ ಮುಂದಾಗಿದ್ದ ಟಿಟಿಡಿ ನಿರ್ಧಾರ ರಾಜಕೀಯ ಸ್ವರೂಪ ಪಡೆಯುತ್ತಿರುವುದು ಹಾಗೂ ಹಿಂದುಗಳ ಆಕ್ರೋಶಕ್ಕೆ ಒಳಗಾಗುತ್ತಿರುವುದರಿಂದ ಎಚ್ಚೆತ್ತ ಸರಕಾರ, ಈಗ ಆಸ್ತಿ ಹರಾಜಿಗೆ ತಡೆ ನೀಡಿದೆ.

ಹಿಂದೂ ವಿರೋಧಿ  ರಾಜಕೀಯ ಶಕ್ತಿಗಳ ವಿರುದ್ದ ಹೋರಾಟ ಅಗತ್ಯ – ಮಧು ಬೇಗಲಿ

ಹಿಂದೂ ದೇಗುಲಗಳನ್ನು ಇಂತಹ ರಾಜಕಾರಣಿಗಳ  ಕಪಿಮುಷ್ಠಿಯಿಂದ  ನಾವು ರಕ್ಷಿಸಬೇಕಿದೆ.ಕೋಟ್ಯಾಂತರ ಹಿಂದೂ ಜನರ ಭಾವನೆಗಳಿಗೆ ಅಪಮಾನ ಎಸಗುತ್ತಿರುವ ಹಿಂದೂ ವಿರೋಧಿ ರಾಜಕೀಯ ಶಕ್ತಿಗಳ ವಿರುದ್ದ ಹೋರಾಟ ಅಗತ್ಯ ಎಂದು ಎಂದು ಭಜರಂಗದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕ್ ಮಧು ಬೇಗಲಿ ತಿಳಿಸಿದ್ದಾರೆ.

ಹಿಂದು ವಿರೋಧಿ ನೀತಿ ಖಂಡನೀಯ – ದೊಡ್ಡತುಮಕೂರು ಆ‌ನಂದ್

ಹಿಂದು ಭಕ್ತಾಧಿಗಳ ಭಾವನೆಗಳಿಗೆ ನೋವುಂಟಾಗದಂತೆ ಮುನ್ನೆಚ್ಚರಿಕೆ ವಹಿಸದೆ, ಟಿಟಿಡಿ ಆಸ್ತಿಗಳು ಅಥವಾ ಬೇರೇ ಯಾವುದೇ ಆಸ್ತಿ ಪಾಸ್ತಿಗಳ ಮಾರಾಟ ಮಾಡಲು ಮುಂದಾಗಿದ್ದು ಹಿಂದು ವಿರೋಧಿ ನೀತಿಯಾಗಿದ್ದು,ವ್ಯವಸ್ಥಿತ ಶಡ್ಯಂತ್ರ ಎಂದು ಹಿಂದು ಜಾಗರಣ ವೇದಿಗೆ ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೊಡ್ಡತುಮಕೂರು ಆ‌ನಂದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

( ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="117560"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

[ccc_my_favorite_select_button post_id="117562"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!