ದೊಡ್ಡಬಳ್ಳಾಪುರ : ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಪ್ಪತ್ತನೇ ಏರ್ ಇಂಡಿಯಾ ವಿಮಾನದಲ್ಲಿ 136 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 136 ಮಂದಿ ಪ್ರಯಾಣಿಕರಲ್ಲಿ ಒಂದು ಮಗು ಸೇರಿದಂತೆ 75 ಪುರುಷರು ಮತ್ತು 61 ಮಹಿಳೆಯರು ಇದ್ದಾರೆ.
ನಂತರ ಏರ್ ಇಂಡಿಯಾ ವಿಮಾನವು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿತು.
ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 136 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.
136 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.