ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನವು ಜೂನ್ 1 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದೆಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಕರೊನಾ ಸೋಂಕಿನ ಮುಂಜಾಗ್ರತೆ ಸಲುವಾಗಿ,ಸರ್ಕಾರದ ಆದೇಶದಂತೆ.ಸ್ವಚ್ಚತೆ,ಸ್ಯಾನಿಟೈಸರ್ ಬಳಕೆ,ಥರ್ಮಲ್ ಸ್ಕ್ರೀನಿಂಗ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ದೇವಾಲಯಗಳನ್ನು ತೆರೆಯಲು ಮಾ.31ರ ವೇಳೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅವಕಾಶ ನೀಡಲಾಗಿದೆ. ಧಾರ್ಮಿಕ ಸಭೆ, ಜಾತ್ರೆ ಹಾಗೂ ದೇವರ ಉತ್ಸವಗಳನ್ನು ನಡೆಸಲು ಅನುಮತಿ ಇಲ್ಲ.ಮಾ.27 ಆಯ್ದ 52 ದೇವಸ್ಥಾನಗಳಲ್ಲಿ ಆನ್ಲೈನ್ ಮೂಲಕ ದೇವರ ಸೇವೆಗಳ ಕಾರ್ಯಗಳ ಬುಕಿಂಗ್ ಆರಂಭ ಮಾಡಲಾಗುತ್ತದೆ.
ಮೈಸೂರು ಚಾಮುಂಡೇಶ್ವರಿ, ಕುಕ್ಕೆ ಸುಬ್ರಮಣ್ಯ, ಕೊಲ್ಲೂರು ಮುಕಾಂಭಿಕಾ, ಧರ್ಮಸ್ಥಳ ಸೇರಿದಂತೆ ಪ್ರಮುಖ 52 ದೇವಾಲಯಗಳು ಜೂನ್ 1ರಿಂದ ತೆರೆಯಲಿವೆ.
( ಸಾಂದರ್ಭಿಕ ಚಿತ್ರ ಬಳಸಲಾಗಿದೆ )