ದೊಡ್ಡಬಳ್ಳಾಪುರ ತಾಪಂನಲ್ಲಿ ವಿಶೇಷ ಸಭೆ / ಕುಡಿಯುವ ನೀರು ಹಾಗೂ ನೈರ್ಮಲೀಕರಣಕ್ಕೆ 15ನೇ ಹಣಕಾಸಿನ ಅನುದಾನ

ದೊಡ್ಡಬಳ್ಳಾಪುರ : ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ 2020-21 ನೇ ಸಾಲಿನ 15ನೇ ಹಣಕಾಸಿನ ಕ್ರಿಯಾಯೋಜನೆ ತಯಾರಿಸುವ ಬಗ್ಗೆ ಡಿ.ಸಿ.ಶಶಿಧರ್ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು.

ಈ ವೇಳೆ ಅಧ್ಯಕ್ಷ ಡಿ.ಸಿ.ಶಸಿಧರ್ ಮಾತನಾಡಿ,15ನೇ ಹಣಕಾಸಿನ ಅನುದಾನದಲ್ಲಿ ಕುಡಿಯುವ ನೀರು ಹಾಗೂ ನೈರ್ಮಲೀಕರಣಕ್ಕೆ ಬಳಸಲು ಸೂಚಿಸಿದರು.

ಸದಸ್ಯ ಶ್ರೀವತ್ಸ ಮಾತನಾಡಿ,ಕರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ಆತಂಕಕಾರಿ ಎಂದರು.

ಸದಸ್ಯ ಶಂಕರಪ್ಪ ಮಾತನಾಡಿ,ಕನಸವಾಡಿ ಹೋಬಳಿಯ ಕಮ್ಮಸಂದ್ರದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ರಿಪೇರಿಗೆ ಬಂದಿದ್ದು ತ್ವರಿತವಾಗಿ ದುರಸ್ಥಿ ಮಾಡಿಸುವಂತೆ ಒತ್ತಾಯಿಸಿದರು.

ಈ ಕುರಿತಂತೆ ತಾಲೂಕಿನ ಶುದ್ದ ಕುಡಿಯುವ ನೀರಿನ ಘಟಕಗಳ ದುರಸ್ಥಿ ಕಾರ್ಯಕ್ಕೆ ಮುಂದಾಗುವಂತೆ,ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇಗೆ ತಾಪಂ ಅಧ್ಯಕ್ಷ ಶಶಿಧರ್ ಸೂಚಿಸಿದರು.

ಸದಸ್ಯ ಕಣಿವೇಪುರ ಸುನೀಲ್ ಕುಮಾರ್ ಮಾತನಾಡಿ,ಕರೊನಾ ಸೋಂಕು ನಿವಾರಣೆಗಾಗಿ ಶ್ರಮಿಸುತ್ತಿರುವ ತಾಲೂಕಿನ ಕರೋನಾ ವಾರಿಯರ್ಸ್‌ಗಳನ್ನು ತಾಲೂಕುಪಂಚಾಯಿತಿವತಿಯಿಂದ ಸನ್ಮಾನಿಸುವಂತೆ ಸೂಚಿಸಿದರು.

ಕಾರ್ಯನಿರ್ವಾಹಕ ಅಧಿಕಾರಿಗಳಾದ ಮುರುಡಯ್ಯ ಮಾತನಾಡಿ,೧೫ನೇ ಹಣಕಾಸಿನ ಕ್ರಿಯಾಯೋಜನೆಯನ್ನು plan plus ಎಂಬ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕು. ಹಾಗೂ ವೆಚ್ಚಗಳನ್ನು ನಿಯಮಾನುಸಾರ ಲೆಕ್ಕಪತ್ರ ನಿಯಮಗಳ ಪ್ರಕಾರ ದಾಖಲಿಸಿ  PRIA
SOFT
ತಂತ್ರಾಂಶದ ಮುಖಾಂತರವೇ ಕಡ್ಡಾಯವಾಗಿ ಪಾವತಿಸಬೇಕು.15ನೇ ಹಣಕಾಸು ಆಯೋಗದ ಅನುದಾನದಲ್ಲಿ ಕೈಗೊಳ್ಳುವ ಎಲ್ಲ ಕಾಮಗಾರಿಗಳು ಸಾಮಾಜಿಕ ಲೆಕ್ಕಪರಿಶೋಧನೆ ಒಳಪಡುತ್ತವೆ ಎಂದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಪದ್ಮಾವತಿಅಣ್ಣಯ್ಯಪ್ಪ,ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ  ಚನ್ನಮ್ಮರಾಮಲಿಂಗಯ್ಯ,ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಸಿ.ಗೀತಾ ಮಣಿ,ಎಓ ಮಂಜುನಾಥ,ತಾಲೂಕು ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

 ಸಹಾಯಕ ಕೃಷಿ ನಿರ್ದೇಶಕ ಎಸ್.ಪಿ.ನಾರಾಯಣಸ್ವಾಮಿ ಸನ್ಮಾನ 

ಈ ವೇಳೆ ಮೆ.೩೦ರಂದು ನಿವೃತ್ತಿ ಹೊಂದಲಿರುವ ಸಹಾಯಕ ಕೃಷಿ ನಿರ್ದೇಶಕ ಎಸ್.ಪಿ.ನಾರಾಯಣಸ್ವಾಮಿಯವರನ್ನು ತಾಲೂಕುಪಂಚಾಯಿತಿವತಿಯಿಂದ ಸನ್ಮಾನಿಸಲಾಯಿತು. 

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!