ಗ್ರಾಮಪಂಚಾಯಿತಿ ಚುನಾವಣೆ ಮುಂದೂಡಿದ ಚುನಾವಣಾ ಆಯೋಗ

ದೊಡ್ಡಬಳ್ಳಾಪುರ : ಗ್ರಾಮಪಂಚಾಯಿತಿ ಅವಧಿ ಅಂತ್ಯದ ಹಿನ್ನೆಲೆ ಚುನಾವಣೆ ನಡೆಸುವಂತೆ ವಿರೋಧ ಪಕ್ಷ ಒತ್ತಡ ಹಾಗೂ ಆಡಳಿತ ಸಮಿತಿ ನೇಮಿಸಲು ಸರ್ಕಾರದ ಪ್ರಯತ್ನದ ನಡುವೆಯೇ ಕರೊನಾ ಸೋಂಕಿನ ಕಾರಣ ಗ್ರಾಮಪಂಚಾಯಿತಿ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ ಆದೇಶಿಸಿದೆ.

ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ನೀಡಿರುವ ಮಾದ್ಯಮ ಪ್ರಕಟಣೆಯಲ್ಲಿ ಈ ಕುರಿತು ಅವರು,ಉಲ್ಲೇಖಿಸಿದ್ದಾರೆ.

ಜೂನ್ ಹಾಗೂ ಆಗಸ್ಟ್‌ ತಿಂಗಳಲ್ಲಿ ಸುಮಾರು 5800 ಗ್ರಾಮಪಂಚಾಯಿತಿ ಅವಧಿ ಮುಕ್ತಾಯವಾಗುತ್ತಿದ್ದ ಹಿನ್ನೆಲೆ ಚುನಾವಣಾ ಆಯೋಗ ಚುನಾವೆಣೆ ನಡೆಸಲು ಸಿದ್ದತೆ ಕೈಗೊಳ್ಳಲಾಗಿತ್ತು.ಈ ಹಂತದಲ್ಲಿ ದೇಶದಾದ್ಯಂತ ಕರೊನಾ ಸೋಂಕು ನಿಯಂತ್ರಣಕ್ಕಾಗಿ ಘೋಷಿಸಲಾದ ಲಾಕ್ ಡೌನ್ ಕಾರಣ ಸಿದ್ದತೆಗಳನ್ನು ನಿಲ್ಲಿಸಲಾಯಿತು.ಅಲ್ಲದೆ ಚುನಾವಣೆ ಪ್ರಕ್ರಿಯೆಗೆ ಲಾಕ್ ಡೌನ್ ಅಡ್ಡಿಯಾಗಿದೆ.

ಈ ನಡುವೆ ಚುನಾವಣೆ ಪ್ರಕ್ರಿಯೆ ನಡೆಸಲು,ಜಿಲ್ಲಾಧಿಕಾರಿಗಳ ಅಭಿಪ್ರಾಯ ಕೇಳಲಾಗಿ,ಜಿಲ್ಲಾಡಳಿತ ಕರೊನಾ ನಿಯಂತ್ರಣದಲ್ಲಿ ತೊಡಗಿರುವುದರಿಂದ ಚುನಾವಣೆ ಕಾರ್ಯಕ್ಕೆ ಸಿಬ್ಬಂದಿಗಳ ಕೊರತೆ,ಸಾರಿಗೆ ವ್ಯವಸ್ಥೆ ಕೊರತೆ,ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತೊಂದರೆಗಳು ಉಂಟಾಗುವ ಕಂಡು ಬಂದಿರುತ್ತದೆ.ಅಲ್ಲದೆ ಚುನಾವಣೆ ಕಾರ್ಯದ ವೇಳೆ ಜನಸಾಮಾನ್ಯರ ಆರೋಗ್ಯದ ರಕ್ಷಣೆಗೆ ತೊಂದರೆ ಮತ್ತು ಕರೊನಾ ಸೋಂಕು ಹರಡುವಿಕೆಗೆ ಅವಕಾಶ ಉಂಟಾಗುತ್ತದೆ‌ ಎಂಬ ಮಾಹಿತಿ ದೊರಕಿದೆ.

ಸರ್ವೋಚ್ಚ ನ್ಯಾಯಾಲಯವು ಕಿಷನ್ ಸಿಂಗ್ ತೋಮರ್ ವಿರುದ್ದ ಸಿಟಿ ಮುನಿಸಿಪಲ್ ಕಾರ್ಪೊರೇಷನ್, ಅಹಮದಾಬಾದ್ ಮತ್ತು ಇತರರು, ಪ್ರಕರಣದಲ್ಲಿ ನೀಡಿರುವ ಆದೇಶದಲ್ಲಿ,ಮಾನವ ನಿರ್ಮಿತ ಅವಘಡಗಳಿಂದಾಗಿ ಕಾನೂನು ಸುವ್ಯವಸ್ಥೆ ಹಾಳಾದ ಪರಿಸ್ಥಿತಿಯಲ್ಲಿ.ಅಥವಾ, ನೈಸರ್ಗಿಕ ವಿಪತ್ತು ಸಂದರ್ಭದಲ್ಲಿ ಚುನಾವಣೆ ಪ್ರಕ್ರಿಯೆ ಕೈಗೊಳ್ಳುವ ಪ್ರಾಧಿಕಾರಗಳಿಗೆ ಚುನಾವಣೆ ನಡೆಸುವುದು ಕಷ್ಟ ಸಾಧ್ಯವೆಂದು ಹಾಗೂ ಇಂತಹ ಪರಿಸ್ಥಿತಿಯೆ ಅಸಾಧಾರಣ ಪರಿಸ್ಥಿತಿ (EXCEPTIONAL CIRCUMSTANCES) ಎಂದು ಉಲ್ಲೇಖಿಸಲಾಗಿರುತ್ತದೆ.

ರಾಜ್ಯ ಚುನಾವಣಾ ಆಯೋಗವು,ಗ್ರಾಮಪಂಚಾಯಿತಿ ಸಾರ್ವತ್ರಿಕ ಚುನಾವಣೆಯನ್ನು ನಡೆಸುವ ಸಾಧ್ಯಸಾಧ್ಯತೆಗಳ ಬಗ್ಗೆ ಪರಿಶೀಲಿಸಿ,ಪ್ರಸ್ತುತ ಪರಿಸ್ಥಿತಿಯನ್ನು ಅಸಾಧಾರಣ ಪರಿಸ್ಥಿತಿ (EXCEPTIONAL CIRCUMSTANCES)  ಎಂದು ಪರಿಗಣಿಸಿ,ಭಾರತ ಸಂವಿಧಾನದ ಪರಿಚ್ಛೇದ 243-ಕೆ ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಪಂಚಾಯಿತಿಗಳ ಚುನಾವಣೆಯನ್ನು ನಡೆಸುವ ಸಂಬಂಧ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಗ್ರಾಮಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯನ್ನು ಅನಿವಾರ್ಯತೆಯಿಂದ ತಾತ್ಕಾಲಿಕವಾಗಿ ಮುಂದೂಡಲು ತೀರ್ಮಾನಿಸಿದೆ,ಅಲ್ಲದೆ ಮುಂದಿನ ದಿನಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣೆ ನಡೆಸುವುದಾಗಿ ತಿಳಿಸಿದೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]