ದೊಡ್ಡಬಳ್ಳಾಪುರ : ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಫ್ರಾನ್ಸ್ ನ ಪ್ಯಾರಿಸ್ ನಿಂದ ಇಂದು ಸಂಜೆ 4:00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಪ್ಪತ್ತೊಂದನೇ ಏರ್ ಇಂಡಿಯಾ ವಿಮಾನದಲ್ಲಿ 172 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 172 ಮಂದಿ ಪ್ರಯಾಣಿಕರಲ್ಲಿ ಒಂದು ಮಗು ಸೇರಿದಂತೆ 123 ಪುರುಷರು ಮತ್ತು 48 ಮಹಿಳೆಯರು ಇದ್ದಾರೆ.
ನಂತರ ಏರ್ ಇಂಡಿಯಾ ವಿಮಾನವು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿತು.
ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿ, 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಯಿತು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.