ದೊಡ್ಡಬಳ್ಳಾಪುರ : ಕರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಸರ್ಕಾರದ ಆದೇಶದಂತೆ ಮೇ 24 ಮತ್ತು ಮೇ 31ರ ಎರಡು ಭಾನುವಾರಗಳಂದು ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಜಿಲ್ಲೆಯಾದ್ಯಂತ ಜಾರಿಯಲ್ಲಿದ್ದ, ದಿನಪೂರ್ತಿ ಸಂಪೂರ್ಣ ನಿಷೇಧಾಜ್ಞೆಯನ್ನು ಮೇ.31ರ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 7ರ ವರೆಗೆ ತೆರವುಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಆದೇಶಿಸಿದ್ದಾರೆ.
ಇನ್ನುಳಿದಂತೆ ಮೇ 31ರ ರಾತ್ರಿ 7 ರಿಂದ ಜೂನ್ 1ರ ಬೆಳಿಗ್ಗೆ 7 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಪ್ರಕಟಿಸಿದ್ದಾರೆ.