ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದಿದ್ದಲ್ಲಿ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ : ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು : ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ,  ಬಿ.ಬಿ.ಎಂ.ಪಿ ನಿಯಂತ್ರಣಾ ಕೊಠಡಿ/ಸಹಾಯವಾಣಿಗಳಿಗೆ  ಸಾರ್ವಜನಿಕರಿಂದ ಬರುವ ಕರೆಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಬೇಕು. ಕರೆ ಸ್ವೀಕರಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.  

ಮುಂಗಾರು ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದು ಅವರ  ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.   

ನಿನ್ನೆ ಮೊನ್ನೆ ಸುರಿದ ಅಕಾಲಿಕ ಮಳೆಯಿಂದ ಸಾವೀಗೀಡಾದ ಇಬ್ಬರು ಹೆಣ್ಣು ಮಕ್ಕಳ ಕುಟುಂಬಕ್ಕೆ ಬಿ.ಬಿ.ಎಂ.ಪಿ ವತಿಯಿಂದ ತಲಾ 5 ಲಕ್ಷ ರೂ.ಗಳ ಪರಿಹಾರ ಕೊಡಲಾಯಿತು. ಅಪಾಯಕಾರಿ ರೆಂಬೆ ಕೊಂಬೆಗಳನ್ನು ಗುರುತಿಸಿ ಕತ್ತರಿಸುವ ಕೆಲಸ ನಿರಂತರವಾಗಿ ಆಗಬೇಕು ಎಂದ ಅವರು,  ಎರಡು ದಿನಗಳಲ್ಲಿ ನಗರದಲ್ಲಿ  ಮಳೆಯಿಂದ ಬಿದ್ದ ಮರಗಳನ್ನು  ತೆರವುಗೊಳಿಸಲು   ಅಧಿಕಾರಿಗಳಿಗೆ ಸೂಚಿಸಿದರು. ನಗರ ಸಂಚಾರಕ್ಕೆ ಬಂದ ಸಂದರ್ಭದಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.  ನಗರದಲ್ಲಿ ಯಾವುದೇ ಸಾವು, ನೋವು ಸಂಭವಿಸದಂತೆ ಅಗತ್ಯವಿರುವ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. 

ಬಿ.ಬಿ.ಎಂ.ಪಿ, ಪೊಲೀಸ್, ಅರಣ್ಯ, ಸಾರಿಗೆ ಹಾಗೂ ಅಗ್ನಿಶಾಮಕ ಇಲಾಖೆಗಳು ಸಮನ್ವಯ ಸಾಧಿಸಿ ಕೆಲಸ ಮಾಡಬೇಕು ಎಂದು ಆದೇಶಿಸಿದರು. ಮರಗಳ ಕೆಳೆಗೆ ಯಾವುದೇ ವಾಹನಗಳನ್ನು ನಿಲ್ಲಿಸದಂತೆ ಮುನ್ನೆಚ್ಚರಿಕೆ ವಹಿಸಿ ಅನಾಹುತವಾಗುವುದನ್ನು ತಡೆಗಟ್ಟಲು ಕ್ರಮ ವಹಿಸಲು ಸೂಚಿಸಿದ ಅವರು, ನಗರದ 8 ವಲಯಗಳಲ್ಲಿ ಮ್ಯಾನ್ ಹೋಲ್‍ಗಳನ್ನು ಮುಚ್ಚಬೇಕು. ಜೆಟ್ಟಿಂಗ್ ಮೆಶೀನ್‍ಗಳು ಲಭ್ಯವಿರಬೇಕು ಎಂದರು.

ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ ಬೆಂಗಳೂರು ನಗರದ ಎಲ್ಲ ಎಂಟು ವಲಯಗಳಲ್ಲಿ ಬಿ.ಬಿ.ಎಂ.ಪಿ, ಬೆಸ್ಕಾಂ, ಒಳಚರಂಡಿ ಮಂಡಳಿ ಹಾಗೂ ಪೋಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳನ್ನು  ಒಳಗೊಂಡ ತಂಡವನ್ನು ರಚಿಸಿ ಮಳೆ ಸಂಬಂಧಿ ದೂರುಗಳು ಬಂದಲ್ಲಿ ತಕ್ಷಣವೇ ಕ್ರಮವಹಿಸಬೇಕು ಎಂದರು.  ಅನಾಹುತಗಳು ಸಂಭವಿಸಿದಲ್ಲಿ  ಸಹಾಯಕ ಅಭಿಯಂತರರನ್ನು ಹೊಣೆ ಮಾಡಲಾಗುವುದು ಎಂದು ತಿಳಿಸಿದರು. 

ಸಚಿವ ಭೈರತಿ ಬಸವರಾಜ್, ಮುಖ್ಯ ಕಾರ್ಯದರ್ಶಿ ಟಿ.ಯೆಂ.ವಿಜಯಭಾಸ್ಕರ್,  ಬಿ.ಬಿ.ಎಂ.ಪಿ.ಆಯುಕ್ತ ಬಿ.ಹೆಚ್ .ಅನಿಲ್ ಕುಮಾರ್,  ಬೆಂಗಳೂರು ನಗರ ಪೋಲೀಸ್ ಆಯುಕ್ತ ಭಾಸ್ಕರ್ ರಾವ್,  ನಗರಾಭಿವೃದ್ಧಿ ಇಲಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಉಪಸ್ಥಿತರಿದ್ದರು. 

ರಾಜಕೀಯ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

"ಅನಿಲ ಸಿಲಿಂಡರ್ ಗಳು (LPG) ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು

[ccc_my_favorite_select_button post_id="120126"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!