ಡಿ.ಕೆ.ಶಿವಕುಮಾರ್ ಪದಗ್ರಹಣ ಕಾಂಗ್ರೆಸ್ ಸಂಘಟನಾ ಶಕ್ತಿಯಾಗಲಿದೆ – ಎನ್.ಎಸ್.ಬೋಸ್ ರಾಜ್

ದೊಡ್ಡಬಳ್ಳಾಪುರ : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಜೂನ್ 7 ರಂದು ನಡೆಯಲಿದ್ದು, ಈ ಕಾರ್ಯಕ್ರಮ ಕಾಂಗ್ರೆಸ್ ಸಂಘಟನಾ ಶಕ್ತಿಯಾಗಿ ರೂಪುಗೊಳ್ಳಲಿದೆ ಎಂದು ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸ್ ರಾಜ್  ತಿಳಿಸಿದರು. 

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣದ ಅಂಗವಾಗಿ ನಗರದ ಬಮೂಲ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಬಿಜೆಪಿ ಸರ್ಕಾರ ಜನಪರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವಲ್ಲಿ ವಿಫಲವಾಗುತ್ತಿದ್ದು, ಗ್ರಾಮ ಪಂಚಾಯಿತಿ ಚುನಾವಣೆ ಅವಧಿ ಮುಗಿದಿದ್ದರೂ ತಮ್ಮ ಪಕ್ಷದ ಕಾರ್ಯಕರ್ತರನ್ನು ಸಮಿತಿ ಸದಸ್ಯರನ್ನಾಗಿ ಮಾಡಲು ಹುನ್ನಾರ ನಡೆಸಿದೆ. ಪಕ್ಷ ಸಂಘಟನೆಗಾಗಿ ಕಾರ್ಯಕರ್ತರ ಸಹಭಾಗಿತ್ವವನ್ನು ವಿನೂತನ ರೀತಿಯಲ್ಲಿ ನಡೆಸಲಾಗುತ್ತಿದ್ದು, ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದೆ ಎಂದು ತಿಳಿಸಿದರು. 

ವಿಧಾನ ಪರಿಷತ್ ಸದಸ್ಯ ಎಸ್.ರವಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ಕರೊನಾ ವೈರಸ್ ತಡೆಗಟ್ಟುವುದರಲ್ಲಿ ವಿಫಲವಾಗಿವೆ. ದಿನೇ ದಿನೇ ಕೊರೊನಾ ವೈರಸ್ ಹೆಚ್ಚಾಗುತ್ತಿದೆ.  ಈ ನಿಟ್ಟಿನಲ್ಲಿ ಜೂನ್ 07 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ ಅವರ ಪದಗ್ರಹಣ ಮಾಡುತ್ತಿರುವುದರಿಂದ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರದ ವಿವಿಧ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಎಲ್ ಇಡಿ ಟಿ.ವಿ, ವ್ಯವಸ್ಥೆ ಮಾಡಿ, ಕಾರ್‍ಯಕ್ರಮ ವೀಕ್ಷಣೆಯಲ್ಲಿ ಎಲ್ಲಾ ಕಾರ್‍ಯಕರ್ತರು ಭಾಗವಹಿಸಬೇಕಿದೆ. ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕಿದೆ. ಕಾರ್‍ಯಕ್ರಮದಲ್ಲಿ ಬಳಸುವ ಪ್ಲೆಕ್ಸ್, ಕಾರ್‍ಯಕ್ರಮದ ಆಯೋಜನೆಯಲ್ಲಿ ಪಕ್ಷದ ಶಿಷ್ಟಾಚಾರ ಹಾಗೂ ಕಾರ್‍ಯಕ್ರಮದ ರೂಪುರೇಷೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪದಗ್ರಹಣ ಸಮಾರಂಭ ವೈಭವೀಕರಣವಾಗದೇ ಪಕ್ಷದ ಸಂಘಟನೆಯಲ್ಲಿ ಶಕ್ತಿಯುತವಾಗಿ ರೂಪುಗೊಳ್ಳಬೇಕಿದೆ ಎಂದರು.

ಸಭೆಯಲ್ಲಿ  ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಕಾರ್ಯದರ್ಶಿಗಳಾದ ಗೋವಿಂದಪ್ಪ, ಎ.ಸಿ.ಶ್ರೀನಿವಾಸ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮುನಿಶಾಮಪ್ಪ, ಕೆಪಿಸಿಸಿ ಸದಸ್ಯಜಿ.ಲಕ್ಷ್ಮೀಪತಿ,ವೀಕ್ಷಕ ಮಂಜುನಾಥ ಅದ್ದೆ, ಜಿಲ್ಲಾ ಉಸ್ತುವಾರಿ ರತ್ನಪ್ರಭಾ,  ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ಉಪಾಧ್ಯಕ್ಷೆ ಪದ್ಮಾವತಿ, ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್,  ಕಾಂಗ್ರೆಸ್ ತಾಲೂಕು ಬ್ಲಾಕ್ ಅಧ್ಯಕ್ಷ  ಎಂ.ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ (ಅಪ್ಪಿ), ಜಿ.ಪಂ ಸದಸ್ಯ ಚುಂಚೇಗೌಡ, ತಾಲೂಕು ಪಂಚಾಯಿತಿ ಸದಸ್ಯ ನಾರಾಯಣ ಗೌಡ, ಎಸ್.ಸಿ.ಘಟಕದ ನಗರ ಅಧ್ಯಕ್ಷ ಬಿ.ಮುನಿರಾಜು, ತಾಲೂಕು ಅಧ್ಯಕ್ಷೆ ಪುಷ್ಪಲತ, ನಗರ ಘಟಕದ ಅಧ್ಯಕ್ಷೆ ಪ್ರಭಾವತಿ, ಎಪಿಎಂಸಿ ನಿರ್ದೇಶಕ ನಾರನಹಳ್ಳಿ ಎಂ.ಗೋವಿಂದರಾಜು ಮುಖಂಡರಾದ ತಿ.ರಂಗರಾಜು, ಬಿ.ಎಚ್.ಕೆಂಪಣ್ಣ  ಮೊದಲಾದವರು ಭಾಗವಹಿಸಿದ್ದರು. 

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!