ಕೆಲಸಕ್ಕೆ ಹಾಜರಾಗದ ಹಾಪ್‍ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ

ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ  150 ಜನ ಹಾಪ್‍ಕಾಮ್ಸ್ ನೌಕರರ ವಿರುದ್ಧ  ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ 550 ಹಾಪ್‍ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು.ಮಳಿಗೆ ತೆರೆಯದೇ ಇರುವವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕೆಂದು ಅವರು  ಸೂಚಿಸಿದರು.  

ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹುತೇಕ ಇಲ್ಲವಾಗಿದೆ.  ಹೊಸ ಕೊಳವೆಬಾವಿಗಳನ್ನು ಕೊರೆಯಲು  ಅನುಮತಿ ನೀಡಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಒಂದು ತಿಂಗಳ ನಂತರ ಪರಿಸ್ಥಿತಿಯನ್ನು  ಪರಿಶೀಲಿಸಿ ತೀರ್ಮಾನಿಸಬಹುದು ಎಂದರು.

ಕಳೆದ ಸಾಲಿನಲ್ಲಿ ಹೆಚ್ಚುವರಿ ಬಿತ್ತನೆ ಬೀಜವನ್ನು ಖರೀದಿಸಿ ವಿತರಿಸಲಾಗಿತ್ತು. ಈ ಬಾರಿಯೂ ವಿತರಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯ ಆಹಾರ ಪದಾರ್ಥಗಳ ಸರಪಳಿ ನಿರ್ವಹಣಾ ಕೋಶ ಕಾರ್ಯ ನಿರ್ವಹಿಸುತ್ತಿದೆ.ಅಗ್ರಿ ವಾರ್ ರೂಂ ಸ್ಥಾಪಿಸಿದ್ದು, ಪರಿಕರಗಳ ಲಭ್ಯತೆ, ಉತ್ಪನ್ನಗಳ ಮಾರಾಟ, ಸಾಗಾಣಿಕೆಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಒದಗಿಸಲಾಗಿದೆ ಎಂದು ಸಚಿವ ಬಿ.ಸಿ.ಪಾಟೀಲ್  ಮಾಹಿತಿ ಒದಗಿಸಿದರು. ಕರ್ನಾಟಕಕ್ಕೆ ಮಿಡತೆ ಹಾವಳಿ ಇರುವುದಿಲ್ಲ ಎಂದು ವಿಜ್ಞಾನಿಗಳು ಖಚಿತಪಡಿಸಿರುವುದಾಗಿ ಸಚಿವರು ತಿಳಿಸಿದರು.

ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಿಂದ ಬೇರೆ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿರುವ ಅಧಿಕಾರಿ/ ಸಿಬ್ಬಂದಿಯನ್ನು ಮಾತೃ ಇಲಾಖೆಗೆ ವಾಪಸ್ಸು ಕರೆಸಿಕೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದರು.  

ರೇಷ್ಮೆ ಇಲಾಖೆ : ಹಿಪ್ಪುನೇರಳೆ ವಿಸ್ತೀರ್ಣಕ್ಕೆ ಸಂಬಂಧಿಸಿದಂತೆ ಡ್ರೋನ್ ಮೂಲಕ ಸಮೀಕ್ಷೆ ನಡೆಸಲಾಗುತ್ತಿದ್ದು, ಒತ್ತುವರಿ ಆಗಿರುವ ಸರ್ಕಾರಿ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲು ಮುಖ್ಯ ಮಂತ್ರಿಗಳು ಸೂಚಿಸಿದರು.

ಇದೇ ಸಂದರ್ಭದಲ್ಲಿ ಮೆಕ್ಕೆ ಜೋಳ ಹಾಗೂ ಹೂವು ಬೆಳೆಗಾರರಿಗೆ ಒಟ್ಟು  666 ಕೋಟಿ ರೂ.ಗಳ ಮೊತ್ತವನ್ನು ಆನ್ ಲೈನ್ ಮೂಲಕ ಬಿಡುಗಡೆ ಮಾಡಿದರು. ಈ ಬಗ್ಗೆ ರೈತರಿಗೆ ಕರೆ ಮಾಡಿ  ಹಣ ಸಂದಾಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳು ಖಾತರಿಪಡಿಸಿಕೊಂಡರು.

ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಕೆ.ನಾರಾಯಣಸ್ವಾಮಿ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ  ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!