ದೊಡ್ಡಬಳ್ಳಾಪುರ : ಶಾಲಾ, ಕಾಲೇಜುಗಳು ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ ಕುಮಾರ್ ಹೇಳಿದ್ದಾರೆ.
ಧಾರವಾಡದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕರೊನಾ ಸೋಂಕು ತಡೆಗೆ ಜಾರಿ ಮಾಡಿದ ಲಾಕ್ ಡೌನ್ ನಿಂದ ಸಾಕಷ್ಟು ಮಂದಿ ಆರ್ಥಿಕವಾಗಿ ತೊಂದರೆಗೊಳಗಾಗಿದ್ದಾರೆ. ಆದ್ದರಿಂದ ಈ ಬಾರಿ ಮಾನವೀಯತೆ ಆಧಾರದ ಮೇಲೆ ಶಾಲಾ, ಕಾಲೇಜುಗಳು ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ ಎಂದರು.
ಇದೇ ವೇಳೆ ಬಾಕಿ ಇರುವ ಶುಲ್ಕವನ್ನು ಪಾವತಿ ಮಾಡುವಂತೆ ಶಾಲಾ,ಕಾಲೇಜುಗಳು ಒತ್ತಡ ಹೇರಬಾರದು ಎಂದು ಹೇಳಿದರು.