ಬೆಂಗಳೂರು : ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪುನಾರಂಭ ಮಾಡುವ ಬಗ್ಗೆ ವರದಿ ನೀಡಲು ಮುಖ್ಯೋಪಾಧ್ಯಾಯರಿಗೆ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಅಲ್ಲದೇ ಶಾಲೆ ಪುನಾರಂಭ ಕುರಿತು SDMC ಸದ್ಯಸ್ಯರು ಹಾಗೂ ಪೋಷಕರ ಅಭಿಪ್ರಾಯ ಸಂಗ್ರಹಿಸುವಂತೆಯೂ ತಿಳಿಸಿದ್ದಾರೆ. ಜೂ.12ರ ಒಳಗೆ ಅಭಿಪ್ರಾಯ ಸಂಗ್ರಹಿಸಿ ಇಲಾಖೆಗೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.
” ಶಿಕ್ಷಣ ಸಚಿವರ ಸೂಚನೆ “
ರಾಜ್ಯದ ಎಲ್ಲಾ ಸರಕಾರೀ ಹಾಗೂ ಅನುದಾನಿತ ಮತ್ತು ಅನುದಾನ ರಹಿತ (ಖಾಸಗಿ) ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯ ರುಗಳು ಕೂಡಲೇ (10.6.2020 ರಿಂದ 12.6.2020 ರ ನಡುವಿನ ಅವಧಿಯಲ್ಲಿ) #ಪೋಷಕರು_ಮತ್ತು_SDMC ಸದಸ್ಯರನ್ನು ಸಭೆಗೆ ಆಹ್ವಾನಿಸಿ ಈ ಕೆಳಕಂಡ ವಿಷಯಗಳ ಕುರಿತು ಅವರ ಅಭಿಪ್ರಾಯ ಪಡೆಯಲು ಸೂಚಿಸಲಾಗಿದೆ.
A) ಶಾಲೆಗಳನ್ನು ಪುನರಾರಂಭ ಮಾಡಬಹುದಾದ ದಿನಾಂಕ ಕುರಿತು.
B) ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಧಾನದ ಬಗ್ಗೆ.
C) ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ.
ರಾಜ್ಯದ ಎಲ್ಲಾ ಪೋಷಕರು ಮತ್ತು SDMC ಸದಸ್ಯರುಗಳು ಈ ಸಭೆಗಳಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯ ತಿಳಿಸಬೇಕೆಂದು ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.