ಕರೊನಾ ಇದು ಸರಿನಾ..? ಧ್ವನಿ ಸುರುಳಿ ಬಿಡುಗಡೆ

ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶ್ರೀ ಹರ ಮ್ಯೂಸಿಕಲ್ ವಲ್ರ್ಡ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಂಯುಕ್ತಾಶ್ರಯಲ್ಲಿ  ಬುಧವಾರ ಜಿಲ್ಲಾಡಳಿತ ಭವನದ ತುಂಗಾಭದ್ರಾ ಸಂಭಾಗಣದಲ್ಲಿ ಆಯೋಜಿಸಲಾಗಿದ್ದ ‘ಕರೊನಾ ಇದು ಸರಿನಾ’ ಎಂಬ ಧ್ವನಿ ಸುರುಳಿ ಬಿಡುಗಡೆ  ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೋಲಿಸ್ ಸಿಬ್ಬಂದಿಗಳು, ಆರೋಗ್ಯ ಇಲಾಖೆ, ಅಗ್ನಿಶಾಮಕ ದಳ, ಗೃಹರಕ್ಷಕದಳ ಸೇರಿದಂತೆ ಕೊರೊನಾ ವಿರುದ್ದ ಹೋರಾಡುತ್ತಿರುವ ಕರೊನಾ ಸೈನಿಕರಿಗೆ ಮತ್ತು ಪೌರ ಕಾರ್ಮಿಕರಿಗೆ, ಡಿಸಿ, ಎಸ್ಪಿ ಸೇರಿದಂತೆ ಜಿಲ್ಲಾಡಳಿತದ ವತಿಯಿಂದ ಹೂ ಮಳೆ ಸುರಿಸುವ ಮೂಲಕ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಿ.ಎಸ್.ಷಡಾಕ್ಷರಿ ಮಾತನಾಡಿ, ಕೋವಿಡ್-19 ಸಂಬಂಧಿಸಿದಂತೆ ಲಾಕ್‍ಡೌನ್ ಆಗಿರುವ ಸಂದರ್ಭದಲ್ಲಿ ಸರ್ಕಾರಿ ನೌಕರರು ಕೋವಿಡ್ ವಿರುದ್ದ ಹೋರಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಪ್ರವಾಹದಲ್ಲಿ ನೆರೆ ಸಂತ್ರಸ್ತರ ಪರವಾಗಿ ಹಾಗೂ ಲಾಕ್‍ಡೌನ್ ಸಮಯದಲ್ಲಿ ತಮ್ಮ ಒಂದು ದಿನದ ವೇತನ ಒಟ್ಟು ರೂ. 200 ಕೋಟಿಗಳನ್ನು ರಾಜ್ಯ ಸರ್ಕಾರಕ್ಕೆ ನೀಡಿದ್ದೇವೆ ಎಂದರು.

ಗ್ರಾಮ ಮಟ್ಟದಲ್ಲಿ ಪಿಡಿಓ ಮತ್ತು ಕಾರ್ಯದರ್ಶಿಗಳು ಸೇರಿದಂತೆ ಹಲವು ಇಲಾಖೆಗಳ ಸರ್ಕಾರಿ ನೌಕರರು ಕೊರೊನಾ ಕುರಿತು ಹಳ್ಳಿಗಳಲ್ಲಿ ಜಾಗೃತಿ ಮೂಡಿಸಿದ್ದಾರೆ. ಉತ್ತರ ಕರ್ನಾಟಕದದಲ್ಲಿ ನೆರೆ ಸಂಭವಿಸಿದಾಗಲೂ ಸರ್ಕಾರಿ ನೌಕರರು ತಮ್ಮ ಒಂದು ದಿನದ ವೇತನವನ್ನು ಸರ್ಕಾರಕ್ಕೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಜೊತೆಗೆ ದೆಹಲಿ, ತಮಿಳುನಾಡು ಇತರೆ ರಾಜ್ಯಗಳಿಗೆ  ಹೋಲಿಸಿದರೆ ಕರ್ನಾಟಕದಲ್ಲಿ ಸರ್ಕಾರಿ ನೌಕರರು ಹೆಚ್ಚು ವೇತನವನ್ನು ಸರ್ಕಾರಕ್ಕೆ ನೀಡಿದ್ದಾರೆ ಎಂದು ಪ್ರಶಂಸಿದ ಅವರು ಮುಂದಿನ ದಿನಗಳಲ್ಲಿ ಜ್ಯೋತಿ ಸಂಜೀವಿನಿ ಯೋಜನೆಯ ಮೂಲಕ ನೌಕರರಿಗೆ ನಗದುರಹಿತ ಚಿಕಿತ್ಸೆ ನೀಡಲಾಗುತ್ತದೆ ಎಂದರು.

ಕೋವಿಡ್-19 ಸಂಬಂಧ ಯಾವ ನೌಕರರು ಭಯ ಪಡುವುದು ಬೇಡ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹಂತ ಹಂತವಾಗಿ ಸರ್ಕಾರಿ ನೌಕರರ ವೇತನ ಮತ್ತು ಡಿಎ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಲಾಗುವದು. ಸರ್ಕಾರ ನಮ್ಮೊಂದಿಗಿದೆ. ನೌಕರರು ಈ ಕುರಿತು ಯಾವುದೇ ಆತಂಕಕ್ಕೆ ಒಳಪಡುವುದು ಬೇಡ. ಜೊತೆಗೆ ಜಿಲ್ಲಾಧಿಕಾರಿಗಳು ನೌಕರರ ಪರವಾಗಿದ್ದಾರೆ. ಈ ಮೂಲಕ ನಮ್ಮೆಲ್ಲರ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸಬೇಕು ಎಂದರು.ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ,  ಕೋವಿಡ್-19 ಸಂದರ್ಭದಲ್ಲಿ ಸರ್ಕಾರಿ ನೌಕರರು ಒಟ್ಟು 13 ಕಂಟೈನ್‍ಮೆಂಟ್ ಜೋನ್ ಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ ಕೋವಿಡ್ ಸೋಂಕಿತರು ಇನ್ನೂ ಹೆಚ್ಚಾದರು ಸಹ ಸರ್ಕಾರಿ ನೌಕರರು ಎಂದೆಂದಿಗೂ ನಮ್ಮ ಜೊತೆ ಇರುತ್ತಾರೆ ಎಂಬ ಭರವಸೆಯಿದೆ ಎಂದ ಅವರು ಜಿಲ್ಲೆಯಲ್ಲಿ  ಆಶಾ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಎಲ್ಲಾ ಸರ್ಕಾರಿ ನೌಕರರು ಕೋವಿಡ್ ಯುದ್ದದಲ್ಲಿ ಹೋರಾಡಲು ಭಾಗಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಹನುಮಂತರಾಯ ಮಾತನಾಡಿ, ಕೋವಿಡ್-19 ನಿಂದ ಜಿಲ್ಲೆ ಇನ್ನೂ ಮುಕ್ತವಾಗಿಲ್ಲ. ಸಾರ್ವಜನಿಕರು ತುಂಬಾ ಜಾಗರೂಕತೆಯಿಂದ ಇರಬೇಕು. ಕಂಟೈನ್‍ಮೆಂಟ್ ಜೋನ್‍ಗಳಲ್ಲಿ ಹಣಕಾಸಿನ ಅನುಕೂಲಕ್ಕಾಗಿ ಇಂದು ಮೊಬೈಲ್ ಎ.ಟಿ.ಎಂ ಅನ್ನು ಉದ್ಘಾಟನೆ ಮಾಡುತ್ತಿದ್ದೇವೆ. ಲಾಕಡೌನ್ ಸಮಯದಲ್ಲಿ ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಲಾಗಿದೆ. ನಾವು ನಿಮ್ಮೊಂದಿಗೆ  ಇದ್ದೇವೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಬಿ. ಪಾಲಾಕ್ಷಿ,  ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್,  ಡಿಹೆಚ್‍ಓ ಡಾ.ರಾಘವೇಂದ್ರ ಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಸರ್ಕಾರಿ ನೌಕರ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ (Cmsiddaramaiah) ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="117898"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದ ಜೆಸಿಬಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ (Accident) ಕಾರು ತೀವ್ರವಾಗಿ ಜಖಂಗೊಂಡಿರುವ ಘಟನೆ ತಾಲೂಕಿನ ಮೆಣಸಿ ಗೇಟ್ ಬಳಿ ಕೆಲವೇ ಕ್ಷಣಗಳ ಮುಂಚೆ ಸಂಭವಿಸಿದೆ.

[ccc_my_favorite_select_button post_id="117905"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!