ದೊಡ್ಡಬಳ್ಳಾಪುರ : ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನ ದುಬೈ ನಿಂದ ಇಂದು ರಾತ್ರಿ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಪ್ಪತ್ತಾರನೇ ಏರ್ ಇಂಡಿಯಾ ವಿಮಾನದಲ್ಲಿ 155 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 155 ಮಂದಿ ಪ್ರಯಾಣಿಕರಲ್ಲಿ 02 ಮಕ್ಕಳು ಸೇರಿದಂತೆ 97 ಪುರುಷರು ಮತ್ತು 56 ಮಹಿಳೆಯರು ಇದ್ದಾರೆ.
ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 155 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕರೊನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.
ಪ್ರಯಾಣಿಕರು 07 ದಿನಗಳು ಹೋಟೆಲ್ ನಲ್ಲಿ ಅಥವಾ ಹಜ್ ಭವನದಲ್ಲಿ ಸಾಂಸ್ಥಿಕ ಸಂಪರ್ಕ ತಡೆಯನ್ನು (Institutional Quarantine) ಪೂರ್ಣಗೊಳಿಸಿದ ಬಳಿಕ, ರೋಗ ಲಕ್ಷಣಗಳು ಕಂಡು ಬಂದಂತಹ ವ್ಯಕ್ತಿಗಳನ್ನು ಬೆಂಗಳೂರಿನ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಕಳುಹಿಸಿಕೊಡಲಾಗುವುದು ಹಾಗೂ ರೋಗ ಲಕ್ಷಣ ರಹಿತ ವ್ಯಕ್ತಿಗಳು 07 ದಿನಗಳ ಗೃಹ ಸಂಪರ್ಕ ತಡೆ (Home Quarantine) ವ್ಯವಸ್ಥೆಗೊಳಗಾಗಲಿದ್ದಾರೆ
ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.