ದೊಡ್ಡಬಳ್ಳಾಪುರ : ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಋತು ಚಕ್ರ ನೈರ್ಮಲ್ಯ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯನಿರ್ವಾಹಕ ಅಧಿಕಾರಿ ಮುರುಡಯ್ಯ ವಹಿಸಿದ್ದರು.
ಈ ವೇಳೆ ಮಾತನಾಡಿದ ಅವರು ಋತುಚಕ್ರ ಎಂಬುದು ನೈಸರ್ಗಿಕ ಪ್ರಕ್ರಿಯೆಯಾಗಿದೆ.ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಋತುಚಕ್ರದ ಯಾವುದೇ ಸಮಸ್ಯೆ ಇದ್ದರು ವೈದ್ಯರನ್ನು ಭೇಟಿ ಮಾಡಿ ಪರಿಹಾರ ಪಡೆಯಬೇಕು ಎಂದರು.ಗ್ರಾಮಪಂಚಾಯಿತಿಗಳಲ್ಲಿ ಸಪ್ತಾಹವನ್ನು ಆಚರಿಸಿ ಜನರಲ್ಲಿ ತಿಳಿವಳಿಕೆ ಮೂಡಿಸಬೇಕೆಂದು ತಿಳಿಸಿದರು.
ಸಹಾಯಕ ನಿರ್ದೇಶಕಿ ಗೀತಾರಾಣಿ ಮಾತನಾಡಿ, ನಾವು ವೈಜ್ಞಾನಿಕವಾಗಿ ಎಷ್ಟೇ ಮುಂದುವರೆದಿದ್ದರೂ ಕೆಲವು ಕುಗ್ರಾಮಗಳಲ್ಲಿ ಋತುಮತಿಯಾದ ಹೆಣ್ಣು ಮಕ್ಕಳನ್ನು ಮೂಢನಂಬಿಕೆಯಿಂದ ಊರಿನಿಂದ ಹೊರಗಿಡುವ ಪದ್ಧತಿಯಿದೆ.ಇಂತಹ ಸಪ್ತಾಹಗಳ ಆಚರಣೆಯ ಮೂಲಕ ಮುಗ್ದ ಜನರಿಗೆ ಮಾಹಿತಿ ನೀಡಿ ಬದಲಾವಣೆ ತರಬೇಕಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ, ಸ್ವಸಹಾಯ ಸಂಘದ ಸದಸ್ಯರುಗಳು ಹಾಗೂ ತಾಲೂಕು ಪಂಚಾಯತಿ ಸಿಬ್ಬಂದಿ ಭಾಗವಹಿಸಿದ್ದರು.