ಶಾಲೆಗಳ ಪ್ರಾರಂಭ ಮಾಡುವ ಯಾವುದೇ ಆತುರದ ನಿರ್ಧಾರವಿಲ್ಲ – ಎಸ್.ಸುರೇಶ್ ಕುಮಾರ್

ದೊಡ್ಡಬಳ್ಳಾಪುರ : ಶಾಲೆಗಳನ್ನು ತರಾತುರಿಯಲ್ಲಿ ಪ್ರಾರಂಭ ಮಾಡುವ ಯಾವುದೇ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳುವುದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಶಾಲೆಗಳ ಪುನರಾರಂಭ ಕುರಿತು ಆರೋಗ್ಯಕರ ಚರ್ಚೆ ನಡೆಯುತ್ತಿರುವುದು ಸ್ವಾಗತಾರ್ಹ.ಆದರೆ “ಖಾಸಗಿ ಲಾಬಿ ಪ್ರಭಾವಕ್ಕೆ ಮಣಿದಿರುವ ಸರ್ಕಾರ” ಎಂಬಂತೆ ಬಿಂಬಿತವಾಗಿರುವುದು ಅತ್ಯಂತ ದುರ್ದೈವದ ಸಂಗತಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಸುರಕ್ಷತೆಗೆ ಅತ್ಯಂತ ಹೆಚ್ಚಿನ ಆದ್ಯತೆಯನ್ನು ಸರ್ಕಾರ ನೀಡುತ್ತದೆ.ಮಕ್ಕಳಲ್ಲಿ ಕಲಿಕೆಯನ್ನು ನಿರಂತರವಾಗಿ ಇಡಲು ದೂರದರ್ಶನದ ಪ್ರತ್ಯೇಕ ಶಿಕ್ಷಣ ಚಾನೆಲ್ ಪ್ರಾರಂಭಿಸುವುದೂ  ಸೇರಿದಂತೆ ಪರ್ಯಾಯ ಮಾರ್ಗಗಳನ್ನು ಸರ್ಕಾರ ಶೋಧಿಸುತ್ತಿದೆ. 

ಈ ಅಂಶಗಳನ್ನು ಅರ್ಥೈಸಿಕೊಳ್ಳದೆ ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಟೀಕೆಗಳನ್ನು ಗಮನಿಸಿದ್ದೇನೆ. 

ಎಳೆಯ ಮಕ್ಕಳ ಕುರಿತ  ಪೋಷಕರ ಕಾಳಜಿಯನ್ನು ನಾನು ಸಂಪೂರ್ಣವಾಗಿ ಅರಿತಿದ್ದೇನೆ ಮತ್ತು ಆ ಕಾಳಜಿಗೆ ಅಗತ್ಯ ಮನ್ನಣೆ ನೀಡುತ್ತೇನೆ. ಆ ಮಕ್ಕಳಿಗೆ ಮತ್ತು ಪೋಷಕರಿಗೆ ಕಿಂಚಿತ್ ಆಪತ್ತು ತರುವ ಯಾವುದೇ ಕಾರ್ಯ ನಮ್ಮಿಂದ ಆಗುವುದಿಲ್ಲ.ಅತ್ಯಂತ ಪ್ರಜಾಸತ್ತಾತ್ಮಕ ರೀತಿಯಲ್ಲಿ ಪೋಷಕರ ಅಭಿಪ್ರಾಯ ಸಂಗ್ರಹಿಸುವ ಅತಿ ದೊಡ್ಡ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.‌

ಈ ಎಲ್ಲಾ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಈ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಮುಂದಿನ ಹೆಜ್ಜೆ ಇಡಲಾಗುತ್ತದೆ. ಸರಕಾರದ ಪ್ರತಿ ಹೆಜ್ಜೆ ಸಂವೇದನಾಶೀಲತೆಯಿಂದ ಕೂಡಿರುತ್ತದೆ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದಿದ್ದಾರೆ.

ಎಲ್ಲಾ ಪೋಷಕರ ಅಭಿಪ್ರಾಯ ಸಂಗ್ರಹಿಸಲು ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನದ ಹಿನ್ನೆಲೆಯಲ್ಲಿ ಜೂನ್ 10, 11 ಮತ್ತು 12 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ (ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳೂ ಸೇರಿದಂತೆ) ಪೋಷಕರ ಸಭೆ ಕರೆದು ಕೆಳ ಕಂಡ 3 ಅಂಶಗಳ ಕುರಿತು ಅಭಿಪ್ರಾಯ ಸಂಗ್ರಹಿಸಬೇಕೆಂದು 1.6.2020 ರ ಸುತ್ತೋಲೆಯ ಮೂಲಕ ಸೂಚಿಸಿದೆ. 

ಅ) ಶಾಲೆಗಳನ್ನು ಯಾವಾಗ (ಎಂದಿನಿಂದ) ಪ್ರಾರಂಭ ಮಾಡಬೇಕು? 

* ನರ್ಸರಿ ಮತ್ತು ಪ್ರಾಥಮಿಕ‌ ತರಗತಿಗಳು. 

* ಉನ್ನತ ಪ್ರಾಥಮಿಕ ತರಗತಿಗಳು. 

* ಪ್ರೌಢಶಾಲಾ ತರಗತಿಗಳು. 

ಆ) ಕೊರೋನಾ ನಂತರದ ದಿನಗಳಲ್ಲಿ ಶಾಲೆಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ತರಗತಿಗಳನ್ನು ನಡೆಸುವ ಬಗ್ಗೆ. 

ಇ) ಶಾಲೆಗಳಲ್ಲಿ ಕೈಗೊಳ್ಳಬೇಕಿರುವ ಸುರಕ್ಷತಾ ಕ್ರಮಗಳು. 

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]