ದೊಡ್ಡಬಳ್ಳಾಪುರ : ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನರೇಗಾ ಯೋಜನೆಯ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ
ದೊಡ್ಡಬಳ್ಳಾಪುರದ ತಾಲ್ಲೂಕು ಪಂಚಾಯಿತಿ ವತಿಯಿಂದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾರ್ಯ ನಿರ್ವಾಹಕ ಮುರುಡಯ್ಯ ರವರು ಮಾತನಾಡಿ ಸಾರ್ವಜನಿಕರಿಗೆ ನರೇಗಾ ಯೋಜನೆಯ ಬಗ್ಗೆ ಮಾಹಿತಿ ತಿಳಿಯಲು ಇಂತಹ ಐ ಇ ಸಿ ಚಟುವಟಿಕೆ ಕೈಗೊಳ್ಳಬೇಕು. ಹಾಗೂ ಈ ಪೋಸ್ಟರ್ ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಿಸುವಂತೆ ಸೂಚಿಸಿದರು.
ಸಹಾಯಕ ನಿರ್ದೇಶಕಿ ಸಿ.ಗೀತಾಮಣಿ ಮಾತನಾಡಿ,ಸಾರ್ವಜನಿಕರು ವಿವಿಧ ಅನುಷ್ಠಾನ ಇಲಾಖೆಗಳಿಂದ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಕೃಷಿಹೊಂಡ ಇಂಗು ಗುಂಡಿ ಕಿಚನ್ ಗಾರ್ಡನ್ ಸೋಕ್ ಪಿಟ್ ನಿರ್ಮಾಣ ನಿರ್ಮಾಣ ಮಾಡಿಕೊಳ್ಳುವಂತೆ ತಿಳಿಸಿದರು.
ಗ್ರಾಮೀಣ ಮತ್ತು ಕುಡಿಯುವ ನೀರು ಇಲಾಖೆಯ ಎಇಇ ಯೋಗೀಶ್,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್,ನಂದಿನಿ,ನಂದಕುಮಾರ್,ಮಲ್ಲೇಶ್,ಮೂರ್ತಿ ಹಾಜರಿದ್ದರು.