ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿಕ್ಷಣ ಇಲಾಖೆಗೆ ನೂತನವಾಗಿ ಉಪನಿರ್ದೇಶಕರಾಗಿ ವರ್ಗಾವಣೆಯಾದ ಎಂ.ಹೆಚ್.ಗಂಗಮಾರೇಗೌಡರಿಗೆ ಶಿಕ್ಷಕರ ಸಂಘದಿಂದ ಅಭಿನಂದನೆ ಸಲ್ಲಿಸಲಾಯಿತು.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಕಾಂತರಾಜು,ಉಪಾಧ್ಯಕ್ಷ ಮಲ್ಲಿಕಾರ್ಜುನರೆಡ್ಡಿ,ಪ್ರಧಾನ ಕಾರ್ಯದರ್ಶಿ ಜಯರಾಮ್,ನಾಮನಿರ್ದೇಶಕ ಸದಸ್ಯ ಗಾಳಿಹನುಮಯ್ಯ,ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಹಕಾರ್ಯದರ್ಶಿ ನಾಮನಿರ್ದೇಶಕ ಆಂಜಿನಪ್ಪ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಬಿ.ಎಸ್.ಸಿದ್ದಗಂಗಯ್ಯ,ದೇವನಹಳ್ಳಿ ತಾಲೂಕು ಅಧ್ಯಕ್ಷ ನಾಗೇಶ್ ಮತ್ತಿತರರಿದ್ದರು.