October 13, 2024 1:16 am

ರೈತರು ಪರಿಹಾರ ಪಡೆಯಲು ತಪ್ಪದೇ ತ್ವರಿತವಾಗಿ ಆಧಾರ್ ಸಂಖ್ಯೆಗೆ ಬ್ಯಾಂಕ್ ಅಕೌಂಟನ್ನು ಜೋಡಣೆ‌ ಮಾಡಿ : ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು : ಆಧಾರ್ ಸಂಖ್ಯೆಗೆ ಇದೂವರೆಗೂ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡದ ರೈತರು ಆದಷ್ಟು ಬೇಗ ತಪ್ಪದೇ ಆಧಾರ್ ಸಂಖ್ಯೆಗೆ ಬ್ಯಾಂಕ್ ಅಕೌಂಟನ್ನು ಜೋಡಣೆ‌ ಮಾಡಬೇಕೆಂದು ಕೃಷಿ ಸಚಿವ  ಬಿ.ಸಿ.ಪಾಟೀಲರು ಮನವಿ ಮಾಡಿದ್ದಾರೆ.

ವಿಕಾಸಸೌಧದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸರ್ಕಾರ ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ರಾಜ್ಯದ ವಿವಿಧ ಯೋಜನೆಯಡಿ ಡಿಬಿಟಿ ಮಾರ್ಗಸೂಚಿಯಂತೆ ವಿದ್ಯುನ್ಮಾನವಾಗಿ ನೇರವಾಗಿ ರೈತರ ಖಾತೆಗೆ ಆಧಾರ್ ಆಧಾರಿತ ವ್ಯವಸ್ಥೆಯ ಮೂಲಕವರ್ಗಾಯಿಸಲಾಗುತ್ತಿದೆ. ಬಹುತೇಕ ರೈತರು ತಮ್ಮ ಆಧಾರ್ ಕಾರ್ಡನ್ನು ಅಕೌಂಟ್ ನಂ.ಗೆ ಲಿಂಕ್ ಮಾಡಿಲ್ಲ.ರೈತರು ತಮ್ಮತಮ್ಮ ಆಧಾರ್ ಕಾರ್ಡನ್ನು ತಾವು ಉಪಯೋಗಿಸುತ್ತಿರುವ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು ಎಂದು ಮನವಿ ಮಾಡಿದರು.ಮೆಕ್ಕೆಜೋಳ ಹಾಗೂ ಹೂವುಬೆಳೆದ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು

ಹತ್ತು ಲಕ್ಷ ರೈತರಿಗೆ ತಲಾ ಐದು ಸಾವಿರದಂತೆ ಪರಿಹಾರ ಧನದ   ಮೊದಲ ಕಂತು ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಆನ್ಲೈನ್ ಮೂಲಕ  ಪರಿಹಾರ ಯೋಜನೆಗೆ ಚಾಲನೆ ನೀಡಲಾಗಿದೆ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿದ ರೈತರಿಗೆ ಪರಿಹಾರ ಹೋಗಿದೆ.ಆದರೆ ಇನ್ನೂ ಕೆಲವು ರೈತರು ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯನ್ನು ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಲ್ಲ.ಇನ್ನೂ ಕೆಲವು ಹೋಗಿದೆ.

ಏರ್ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಿದ್ದಾರೆ.ಹೀಗಾಗಿ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಗೆ ಪರಿಹಾರದ ಹಣ ಹೋಗಿರುವುದು ತಮ್ಮ ಗಮನಕ್ಕೆ ಬಂದಿದೆ.ಏರ್‌ಟೆಲ್ ಯಾವುದೇ ಶಾಖೆಗಳನ್ನು ಹೊಂದಿಲ್ಲ.ಹೀಗಾಗಿ ಏರ್‌ಟೆಲ್ ಔಟ್‌ಲೆಟ್‌ಗಳಿಗೆ ಹೋಗಿ ಹಣ ಪಡೆಯಬೇಕಿದೆ.ಬೇರೆ ಜಿಲ್ಲೆಗಳಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ.ಇದನ್ನು ನಾವು ಪತ್ತೆ ಹಚ್ಚಿದ್ದೇವೆ.ಈ ಬಗ್ಗೆ ಏರ್ಟೆಲ್ ಕಂಪೆನಿಯ ಗಮನಕ್ಕೂ ತಂದು ಸೂಕ್ತ ಕ್ರಮಕೈಗೊಳ್ಳಲಾಗುವುದುಈ ಸಂಬಂಧ ಅಧಿಕಾರಿಗಳ ಜೊತೆ  ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬಹುದೆಂದು ಚರ್ಚಿಸಲಾಗುವುದು ಎಂದರು.

ಮುಂದುವರೆದ ನಕಲಿ ಬೀಜ ಮಾರಾಟ ಜಾಲ ಪತ್ತೆ

ವಿಚಕ್ಷಣಾ ದಳದಿಂದ ನಕಲಿ ಬೀಜ ಮಾರಾಟ ಪತ್ತೆ ಮುಂದುವರೆದಿದೆ.ಮೆಕ್ಕೆಜೋಳದಂತೆ ನಕಲಿ ಹತ್ತಿಬೀಜ ಮಾರಾಟ ಜಾಲವೂ ಪತ್ತೆಯಾಗಿದೆ.ರಾಯಚೂರಿನ ತುರುವೆಹಾಳದಲ್ಲಿ ಕಳೆದ ಬುಧವಾರ ತೇಜಸ್ ಎನ್ನುವ ಆಂದ್ರ ಮೂಲಕ ಖಾಸಗಿ ಕಂಪೆನಿಗೆ ಸೇರಿದ ಮೈ ಸೀಡ್ಸ್ ಹೆಸರಿನ ಕಳಪೆ ನೂರು ಕೆಜಿ ಕಳಪೆ ಹತ್ತಿಬೀಜ ಪ್ಯಾಕೆಟ್ ವಶಪಡಿಸಿಕೊಳ್ಳಲಾಗಿದೆ.ಕಳೆದ ಹದಿನೈದು ದಿನಗಳ ಹಿಂದೆ ಈ ಖಾಸಗಿ ಕಂಪೆನಿಯಿಂದ ಬೀಜ ಕೊಂಡು ಬಿತ್ತಿದ ರೈತರಿಗೆ ಸಸಿ ಬಂದಿಲ್ಲ.ಇದನ್ನು ಗಮನಿಸಿದ ರಾಯಚೂರು ಎಡಿ ಹಾಗೂ ವಿಚಕ್ಷಣಾದಳ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಅದೇ ರೀತಿ ಮೇ.30 ರಂದು ಯಾದಗಿರಿಯ ಗೋದಾಮಿನಲ್ಲಿ ಹೈದರಾಬಾದಿನ ಮೂಲದ ಕಂಪೆನಿಯೊಂದು ಅಕ್ರಮವಾಗಿ ದಾಸ್ತಾನು ಮಾಡಿದ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ನಡೆಸಿದ ದಾಳಿಯಲ್ಲಿ ಸುಮಾರು 34,595ಕ್ವಿಂಟಾಲ್ ಹತ್ತಿಬೀಜ ವಶಪಡಿಸುಕೊಳ್ಳಲಾಗಿದ್ದು, ಅನಧಿಕೃತ ಸಂಗ್ರಹ ಹಾಗೂ ಪ್ಯಾಕಿಂಗ್ ದಂಧೆ ಮಾಡುತ್ತಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.ವಶಪಡಿಸಿಕೊಂಡ ಹತ್ತಿಬೀಜಗಳನ್ನು ಗುಣಮಟ್ಟ ಪತ್ತೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಕೃಷಿಸಚಿವರು ಸ್ಪಷ್ಟಪಡಿಸಿದರು.

Recent Posts

ರಾಜಕೀಯ

Mysuru Dasara ಸ್ತಬ್ದ ಚಿತ್ರದಲ್ಲಿ ಕಡೆಗಣನೆ.. ದೊಡ್ಡಬಳ್ಳಾಪುರ ತಾಲೂಕಿನ ಜನರ ತಾಳ್ಮೆ ಪರೀಕ್ಷಿಸಬೇಡಿ; ಹರೀಶ್ ಗೌಡ ವಾರ್ನಿಂಗ್

Mysuru Dasara ಸ್ತಬ್ದ ಚಿತ್ರದಲ್ಲಿ ಕಡೆಗಣನೆ.. ದೊಡ್ಡಬಳ್ಳಾಪುರ ತಾಲೂಕಿನ ಜನರ ತಾಳ್ಮೆ ಪರೀಕ್ಷಿಸಬೇಡಿ;

ದೊಡ್ಡಬಳ್ಳಾಪುರ: ತಾಲ್ಲೂಕನ್ನು  ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಪದೇ ಪದೇ ಕಡೆಗಣಿಸುತ್ತಿದ್ದಾರೆ ಎಂಬುದಕ್ಕೆ ಜಿಲ್ಲೆಯ ದಸರಾ ಸ್ತಬ್ದ ಸಾಕ್ಷಿಯಾಗಿದ್ದು ತಾಲೂಕಿನ ಜನರ ತಾಳ್ಮೆಯನ್ನು ಪದೇ ಪದೇ ಪರೀಕ್ಷೆ ಮಾಡಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ

[ccc_my_favorite_select_button post_id="93984"]
Mysuru Dasara ಸ್ತಬ್ದ ಚಿತ್ರದಲ್ಲಿ ಕಡೆಗಣನೆ.. ದೊಡ್ಡಬಳ್ಳಾಪುರದ ಜನ ಶಾಂತಿಪ್ರಿಯರೆಂಬ ಕಾರಣ ಈ ಅವಮಾನವೇ..?; ವಿ-ಕರವೇ ನಂಜಪ್ಪ ಆಕ್ರೋಶ

Mysuru Dasara ಸ್ತಬ್ದ ಚಿತ್ರದಲ್ಲಿ ಕಡೆಗಣನೆ.. ದೊಡ್ಡಬಳ್ಳಾಪುರದ ಜನ ಶಾಂತಿಪ್ರಿಯರೆಂಬ ಕಾರಣ ಈ

ದೊಡ್ಡಬಳ್ಳಾಪುರ: ವಿಶ್ವವಿಖ್ಯಾತ ಮೈಸೂರು ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಸ್ತಬ್ಧ ಚಿತ್ರದಲ್ಲಿ ದೊಡ್ಡಬಳ್ಳಾಪುರ ತಾಲೂಕನ್ನು ಕಡೆಗಣಿಸಿರುವ ಧೋರಣೆ ಖಂಡನೀಯವೆಂದು ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಅಧ್ಯಕ್ಷ ಮತ್ತು ದೊಡ್ಡಬಳ್ಳಾಪುರ ಕನ್ನಡಪರ

[ccc_my_favorite_select_button post_id="93997"]
RSS: ದೇಶದ ನಾಲ್ಕೂ ದಿಕ್ಕುಗಳ ಪ್ರದೇಶಗಳಲ್ಲಿ ಅಶಾಂತಿ ಸೃಷ್ಟಿಸುವ ಷಡ್ಯಂತ್ರ – ಡಾ.ಮೋಹನ್ ಭಾಗವತ್​​​ ಕಳವಳ

RSS: ದೇಶದ ನಾಲ್ಕೂ ದಿಕ್ಕುಗಳ ಪ್ರದೇಶಗಳಲ್ಲಿ ಅಶಾಂತಿ ಸೃಷ್ಟಿಸುವ ಷಡ್ಯಂತ್ರ – ಡಾ.ಮೋಹನ್

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಚೇರಿಯಲ್ಲಿ ವಿಜಯದಶಮಿ ಹಬ್ಬದ ಅಂಗವಾಗಿ ರಾಷ್ಟ್ರೀ ಸ್ವಯಂ ಸೇವಕ ಸಂಘದ (RSS)​​​ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ವಿಜಯದಶಮಿ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ

[ccc_my_favorite_select_button post_id="93954"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ನಳಂದ ಪ್ರೌಢಶಾಲೆ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ..!

Doddaballapura: ನಳಂದ ಪ್ರೌಢಶಾಲೆ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ..!

ದೊಡ್ಡಬಳ್ಳಾಪುರ; ನಗರದ ಪ್ರತಿಷ್ಠಿತ ಶಾಲೆಯಾದ ನಳಂದ ಪ್ರೌಢಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಹೃತಿಕ್ ಜಿ.ಸಿ ಕರ್ನಾಟಕ ಸರ್ಕಾರದ ವತಿಯಿಂದ ನಡೆದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಹಂತ ಹಂತವಾಗಿ ತಾಲೂಕು, ಜಿಲ್ಲೆ ,ವಿಭಾಗ ಹಾಗೂ ರಾಜ್ಯ

[ccc_my_favorite_select_button post_id="93881"]
ಸೆಲ್ಫಿ ತಂದ ಆಪತ್ತು: ಕೋಡಿ ಬಿದ್ದ ಕೆರೆಗೆ ಬಿದ್ದು ಯುವಕ ಸಾವು..!

ಸೆಲ್ಫಿ ತಂದ ಆಪತ್ತು: ಕೋಡಿ ಬಿದ್ದ ಕೆರೆಗೆ ಬಿದ್ದು ಯುವಕ ಸಾವು..!

ವಿಜಯನಗರ: ಸೆಲ್ಫಿ ಹುಚ್ಚಿಗೆ ತುಂಬಿದ ಕೆರೆಗೆ ಬಿದ್ದು ಯುವಕ ನೋರ್ವ ಸಾವನಪ್ಪಿರುವ ಘಟನೆ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಗಂಡಬೊಮ್ಮನಹಳ್ಳಿ ಕೆರೆಯಲ್ಲಿ ಸಂಭವಿಸಿದೆ. ಮೃತ ದುರ್ದೈವಿಯನ್ನು ಕೆ.ದಿಬ್ಬದಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಪಾಲಯ್ಯ ಅವರ 21 ವರ್ಷದ ಮಗ ಚೇತನ್ ಕುಮಾರ್ ಎಂದು

[ccc_my_favorite_select_button post_id="93971"]
ರೈಲು ಅಪಘಾತ: ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೂ ಎಷ್ಟು ಕುಟುಂಬ ಬಲಿಯಾಗಬೇಕು; ರಾಹುಲ್ ಗಾಂಧಿ ಕಿಡಿ

ರೈಲು ಅಪಘಾತ: ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೂ ಎಷ್ಟು ಕುಟುಂಬ ಬಲಿಯಾಗಬೇಕು; ರಾಹುಲ್

ನವದೆಹಲಿ: ನಿನ್ನೆ ರಾತ್ರಿ 8.30ರ ಸುಮಾರಿಗೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪೇಟ್ಟೈನಲ್ಲಿ ನಡೆದ ರೈಲು ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಪದೇ ಪದೇ ಸಂಭವಿಸುತ್ತಿರುವ ರೈಲುಗಳ ಅಪಘಾತ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ

[ccc_my_favorite_select_button post_id="93950"]

ಆರೋಗ್ಯ

ಸಿನಿಮಾ

NATIONAL AWARDS : ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಿದ ರಿಷಭ್ ಶೆಟ್ಟಿ- Video

NATIONAL AWARDS : ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಿದ ರಿಷಭ್ ಶೆಟ್ಟಿ- Video

ನವದೆಹಲಿ; ಪ್ರಕಟವಾಗಿದ್ದ 2022ನೇ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (NATIONAL AWARDS) ಇಂದು ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಈ ಪೈಕಿ ಕನ್ನಡದ ಚಲನಚಿತ್ರಗಳು 6 ಪ್ರಶಸ್ತಿಗಳನ್ನು ಬಾಚಿಕೊಂಡಿವೆ. ಕನ್ನಡದ ಕೆಜಿಎಫ್ ಚಾಪ್ಟರ್ 2

[ccc_my_favorite_select_button post_id="93703"]
error: Content is protected !!