ಡಿಸೆಂಬರ್ ವೇಳೆಗೆ ಬಾಕಿ 242 ಮನೆಗಳ ಹಸ್ತಾಂತರ : ವಿ.ಸೋಮಣ್ಣ

ಮಡಿಕೇರಿ : 2018ರ ಆಗಸ್ಟ್ ಸುರಿದ ಧಾರಾಕಾರ ಮಳೆಗೆ ಸಂತ್ರಸ್ತರಾದ ಕುಟುಂಬಗಳಿಗೆ ಈಗಾಗಲೇ ಕರ್ಣಂಗೇರಿಯಲ್ಲಿ 35 ಮನೆ, ಜಂಬೂರು 383 ಮತ್ತು ಮದೆ ಗ್ರಾಮದ ಬಳಿ 80 ಒಟ್ಟು 498 ಮನೆಗಳನ್ನು ಈಗಾಗಲೇ ಹಸ್ತಾಂತರಿಸಲಾಗಿದ್ದು, ಉಳಿದಂತೆ ಬಿಳಿಗೇರಿ ಬಳಿ 22 ಮನೆ, ಗಾಳಿಬೀಡು ಬಳಿ 140 ಮತ್ತು ಕೆ.ನಿಡುಗಣೆ ಬಳಿ 80 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಈ 242 ಮನೆಗಳನ್ನು 6-7 ತಿಂಗಳಲ್ಲಿ ಸಂತ್ರಸ್ತರಿಗೆ ಹಸ್ತಾಂತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. 

ಜಿಲ್ಲಾಡಳಿತ, ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪುನರ್ವಸತಿ ಯೋಜನೆ ಅಡಿಯಲ್ಲಿ 2018 ರ ಆಗಸ್ಟ್ ತಿಂಗಳಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆ ಹಕ್ಕು ಪತ್ರ ಹಾಗೂ ಕೀ ಯನ್ನು ಗುರುವಾರ ವಿತರಿಸಿ ಅವರು ಮಾತನಾಡಿದರು.

ಇನ್ಫೋಸಿಸ್ ವತಿಯಿಂದ ಸಹ 250 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಅದನ್ನು ಹಸ್ತಾಂತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.  

ಸರ್ಕಾರ ಪ್ರತಿ ಮನೆಗೆ 9.85 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಮನೆಗಳನ್ನು ನಿರ್ಮಿಸಿದ್ದು, ಇದು ರಾಜ್ಯಕ್ಕೆ ಮಾದರಿಯಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಮನೆ ಮಾರಿಕೊಳ್ಳಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕೋರಿದರು.

ಜಂಬೂರು ಮತ್ತು ಮದೆನಾಡು ಬಳಿ ನಿರ್ಮಿಸಿರುವ ಬಡಾವಣೆಯಲ್ಲಿ ಅಂಗನವಾಡಿ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ವಿ.ಸೋಮಣ್ಣ ಅವರು ನುಡಿದರು.  

ಕೊಡಗಿನಲ್ಲಿ ಮಳೆ ಬಂದರೆ ತೊಂದರೆ ಅನುಭವಿಸುತ್ತಿದ್ದರು. ಇದನ್ನು ಅರಿತು 2018 ರಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಈಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲಿ ಸಂತ್ರಸ್ತರಿಗೆ ಹಸ್ತಾಂತರಿಸಲಾಗುತ್ತದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಿವಿಮಾತು ಹೇಳಿದರು. 

ಕಂದಾಯ ಸಚಿವ ಆರ್.ಅಶೋಕ್ ಅವರು ಮಾತನಾಡಿ ಜಂಬೂರಿನಲ್ಲಿ 10 ಕೋಟಿ ರೂ.ವೆಚ್ಚದಲ್ಲಿ ಪ್ರಕೃತಿ ವಿಕೋಪ ಚಟುವಟಿಕೆಗೆ ಸುಸಜ್ಜಿತ ಭವನ ನಿರ್ಮಿಸಲಾಗುವುದು ಎಂದು ಅವರು ಪ್ರಕಟಿಸಿದರು.  

ಕೊಡಗು ಜಿಲ್ಲೆಯಲ್ಲಿ ಭೂ ಪರಿವರ್ತನೆ ಸಂಬಂಧಿಸಿದಂತೆ ಕೆಲವು ಷರತ್ತುಗಳನ್ನು ವಿಧಿಸಿ ಹೊಸ ಆದೇಶ ಹೊರಡಿಸಲಾಗಿದೆ ಎಂದು ಆರ್.ಅಶೋಕ ಅವರು ತಿಳಿಸಿದರು.   

ಕೊಡಗಿನ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಿದಾಗ ಇನ್ನಷ್ಟು ಅಭಿವೃದ್ಧಿ ಕೆಲಸ ಕೈಗೊಳ್ಳಲು ಸಾಧ್ಯ ಎಂದು ಕಂದಾಯ ಸಚಿವರು ಹೇಳಿದರು.  

2019 ರಲ್ಲಿ ಸುರಿದ ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ವೆಚ್ಚದಲ್ಲಿ 5 ಕಂತುಗಳಲ್ಲಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಬಡವರಿಗೆ ಮನೆ ನಿರ್ಮಿಸಿಕೊಡಲು ಹಣದ ಕೊರತೆಯಿಲ್ಲ ಎಂದು ಕಂದಾಯ ಸಚಿವರು ಹೇಳಿದರು.        

ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಭೂ ಪರಿವರ್ತನೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಗೆ ಒಳಿತಾಗುವ ಷರತ್ತುಗಳನ್ನು ಹಾಕಿರಬೇಕು. ಇಲ್ಲದಿದ್ದಲ್ಲಿ ಕೊಕ್ಕೆ ಹಾಕಿದರೆ ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ಆದೇಶ ಓದಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜೀವ್ ಗಾಂಧಿ ವಸತಿ ಯೋಜನೆಯಡಿ ಜಿಲ್ಲೆಯಲ್ಲಿ ಉತ್ತಮ ಹಾಗೂ ಗುಣಮಟ್ಟದ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಕೆ.ಜಿ.ಬೋಪಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 

ಕಳೆದ ಎರಡು ವರ್ಷದಲ್ಲಿ ಉಂಟಾದ ಪ್ರಕೃತಿ ವಿಕೋಪ ಮುಂದಿನ ದಿನಗಳಲ್ಲಿ ಸಂಭವಿಸುವುದು ಬೇಡ ಎಂದು ಅವರು ಹೇಳಿದರು.

ಜಂಬೂರು, ಮದೆ ಅಥವಾ ಇತರೆ ಭಾಗಗಳಲ್ಲಿ ಮಳೆಗಾಲದಲ್ಲಿ ಮಾತ್ರ ವಾಸ ಮಾಡುತ್ತೇವೆ ಎಂಬುದನ್ನು ಬಿಟ್ಟು, ಎಲ್ಲಾ ಕಾಲದಲ್ಲಿಯೂ ವಾಸ ಮಾಡಬೇಕು. ಮನೆಯನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಚಿಂತಿಸಬೇಕು ಎಂದು ಅವರು ಸಲಹೆ ಮಾಡಿದರು.

ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ 2018 ರಲ್ಲಿ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಭಾಗದಲ್ಲಿ ಸಂಕಷ್ಟ ಎದುರಾಯಿತು. ಹಲವು ಕುಟುಂಬಗಳು ಮನೆ ಮಠ ಕಳೆದುಕೊಂಡರು. ಇವರಿಗೆ ಶಾಶ್ವತ ಸೂರು ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸಲಾಗಿದೆ ಎಂದು ಅವರು ಹೇಳಿದರು. 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಷ್ಟಾಚಾರದಂತೆ ಸರ್ಕಾರದ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸಬೇಕಾಗುತ್ತದೆ. ಆ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕಿದೆ ಎಂದರು. 

ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರು ವಸತಿ ಸಚಿವರಾಗಿ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವಲ್ಲಿ ಶ್ರಮಿಸಿದ್ದಾರೆ. ಇವರ ಕಾರ್ಯ ಮೈಸೂರು ಭಾಗದಲ್ಲಿ ಜನಮನ್ನಣೆ ಗಳಿಸಿದೆ ಎಂದು ಅವರು ಕೊಂಡಾಡಿದರು. 

ಸರ್ಕಾರವು ಕೊಡಗಿನಲ್ಲಿ ಅತಿವೃಷ್ಠಿಯಿಂದ ಮನೆ ಕಳೆದುಕೊಂಡವರಿಗೆ ಜಂಬೂರು ಮತ್ತು ಮದೆಯಲ್ಲಿ ಮನೆ ನಿರ್ಮಾಣಕ್ಕೆ ಹಿಂದಿನ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಾ.ರಾ.ಮಹೇಶ್ ಅವರು ಮನೆ ನಿರ್ಮಾಣಕ್ಕೆ ಚಾಲನೆ ನೀಡಿದರು ಎಂದು ಅವರು ಸ್ಮರಿಸಿದರು.  

ಕೊಡಗು ಜಿಲ್ಲೆಯ ಶಾಸಕರು ಹೆಚ್ಚಿನ ಶ್ರಮವಹಿಸಿ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಅವರು ಹೇಳಿದರು.   

ಇದೇ ಸಂದರ್ಭದಲ್ಲಿ ಟಿ.ವಿ 9 ವಾಹಿನಿ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ(ಎಚ್.ಪಿ) ವತಿಯಿಂದ ಹೊಸ ಮನೆ ಪ್ರವೇಶಿಸಿದ ಸಂತ್ರಸ್ತರಿಗೆ ಉಚಿತ ಅಡುಗೆ ಅನಿಲ ಸ್ಟೌ ವಿತರಿಸಲಾಯಿತು.  

ಸಂತ್ರಸ್ತ ಎಲ್ಲರಿಗೂ ಅಡುಗೆ ಅನಿಲ ಸ್ಟೌ ತಲುಪಿಸುವಂತೆ ಹಿಂದೂಸ್ತಾನ್ ಪೆಟ್ರೋಲಿಯಂ(ಎಚ್.ಪಿ) ಸಂಸ್ಥೆಯವರಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಸಲಹೆ ಮಾಡಿದರು. 

ಮನೆ ನಿರ್ಮಾಣಕ್ಕೆ ಶ್ರಮಿಸಿದ ವಸತಿ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜೀವ್ ಗಾಂಧೀ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ವಿ.ರಾಮ್ ಪ್ರಸಾಥ್ ಮನೋಹರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ ಸಿಇಒ ಕೆ.ಲಕ್ಷ್ಮೀಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಬೆಂಗಳೂರು ನಗರ ವಿಶೇಷ ಜಿಲ್ಲಾಧಿಕಾರಿ ಹಾಗೂ ಹಿಂದಿನ ಜಿಲ್ಲಾ ಪುನರ್ವಸತಿ ವಿಭಾಗದ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ರಾಜೀವ್ ಗಾಂಧೀ ವಸತಿ ನಿಗಮದ ಯೋಜನಾ ನಿರ್ದೇಶಕರಾದ ಎಚ್.ಶ್ರೀನಿವಾಸ್ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂಧಿಸಲಾಯಿತು.   

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ.ಅಧ್ಯಕ್ಷ ಬಿ.ಎ ಹರೀಶ್, ಸದಸ್ಯರಾದ ಚಂದ್ರಕಲಾ, ಕುಮುದಾ, ಸೋಮವಾರಪೇಟೆ ತಾ.ಪಂ.ಅಧ್ಯಕ್ಷ ಪುಷ್ಪರಾಜ್, ಮಡಿಕೇರಿ ತಾ.ಪಂ ಅಧ್ಯಕ್ಷ ತೆಕ್ಕಡೆ ಶೋಭಾ ಮೋಹನ್, ಮಾದಾಪುರ ಗ್ರಾ.ಪಂ.ಅಧ್ಯಕ್ಷೆ ಲತಾ, ಮದೆ ಗ್ರಾ.ಪಂ.ಅಧ್ಯಕ್ಷ ಎಂ.ಬಿ ಚಂದ್ರಶೇಖರ್, ವಸತಿ ಇಲಾಖೆ ಕಾರ್ಯದರ್ಶಿ, ಮನೋಜ್ ಕುಮಾರ್ ಮೀನಾ, ರಾಜೀವ್ ಗಾಂಧೀ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ವಿ.ರಾಮ್ ಪ್ರಸಾಥ್ ಮನೋಹರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ ಸಿಇಒ ಕೆ.ಲಕ್ಷ್ಮೀಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಬೆಂಗಳೂರು ನಗರ ವಿಶೇಷ ಜಿಲ್ಲಾಧಿಕಾರಿ ಹಾಗೂ ಹಿಂದಿನ ಜಿಲ್ಲಾ

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರ: ಸಿಎಂ ಸಿದ್ದರಾಮಯ್ಯ

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರ: ಸಿಎಂ ಸಿದ್ದರಾಮಯ್ಯ

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ

[ccc_my_favorite_select_button post_id="115593"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!