ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವಪರಿಸರ ದಿನಾಚರಣೆ ಮತ್ತು ವನ ಮಹೋತ್ಸವ ಕಾರ್ಯಕ್ರಮವನ್ನು ಶುಕ್ರವಾರ ಬೆಳಗ್ಗೆ ಚಾಲನೆ ನೀಡಲಾಯಿತು.
ಈ ವೇಳೆ ಪರಿಸರ ದಿನಾಚರಣೆ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿದ ಜಿಲ್ಲಾಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್,ಜೀವ ವೈವಿಧ್ಯತೆ ಇದ್ದರಷ್ಟೆ ಪ್ರಕೃತಿಯ ಸಮತೋಲನ ಸಾಧ್ಯ. ಪ್ರಾಣಿ, ಪಕ್ಷಿಗಳು, ಗಿಡಮರಗಳು, ಸಸ್ಯ ಸಂಪತ್ತು, ಪರ್ವತಗಳು, ಜಲಚರಗಳೆಲ್ಲವೂ ನಮ್ಮ ಬದುಕಿನ ಭಾಗಗಳೇ.
ಗಾಳಿ, ನೀರು, ಭೂಮಿ, ಆಕಾಶ, ಸ್ವಚ್ಛವಾಗಿದ್ದರೆ ಮಾತ್ರ ನಮ್ಮ ಜೀವನ ಆರೋಗ್ಯವಾಗಿರುತ್ತದೆ. ಮನುಷ್ಯ ತನ್ನ ಜೀವಿತಾವಧಿಯಲ್ಲಿ ಗಿಡಮರಗಳನ್ನು ನೆಟ್ಟು ಬೆಳಸಿದರೆ ಒಂದು ದೇವಾಲಯವನ್ನೇ ಕಟ್ಟಿದಷ್ಟು ಪುಣ್ಯ ಲಭಿಸುತ್ತದೆ ಎಂದರು.
ಈ ವೇಳೆ ಜಿಪಂ ಅಧ್ಯಕ್ಷೆ ಜಯಮ್ಮಡಾ.ಲಕ್ಷ್ಮೀನಾರಾಯಣ್, ಸಿಇಒ ಎನ್.ಎಂ.ನಾಗರಾಜ್ ಮತ್ತಿತರರಿದ್ದರು.