ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಂದು ಹನ್ನೆರಡು ಜನರಲ್ಲಿ ಕರೊನಾ ವೈರಾಣು ಸೋಂಕು ಪತ್ತೆಯಾಗಿದ್ದು,ಅದರಲ್ಲಿ 11ಜನರು ರಾಜ್ಯದ ವಿವಿಧ ಜಿಲ್ಲೆಯ ನಿವಾಸಿಗಳಾಗಿದ್ದು,ಒಬ್ಬರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ನಿವಾಸಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.
ಸೋಂಕಿತರಲ್ಲಿ ಐವರು ಮಂಡ್ಯ ಜಿಲ್ಲೆಯವರಾಗಿದ್ದು, (ಪಿ-4324), (ಪಿ-4325) ಮತ್ತು (ಪಿ-4326) ಮೇಲುಕೋಟೆ, (ಪಿ-4332) ನಾಗಮಂಗಲ ಹಾಗೂ (ಪಿ-4332) ಕೆ.ಆರ್.ಪೇಟೆ, (ಪಿ-4327), (ಪಿ-4328) ಮತ್ತು (ಪಿ-4329), ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ನಿವಾಸಿಗಳಾಗಿದ್ದು, ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿದವರಾಗಿದ್ದಾರೆ.
ರಾಮನಗರ ಜಿಲ್ಲೆಯ (ಪಿ-4330) ಹಾಗೂ ಬೆಂಗಳೂರು ನಗರ ಜಿಲ್ಲೆಯ ಟಿ.ದಾಸರಹಳ್ಳಿಯ (ಪಿ-4331) ಗುಜರಾತ್ ರಾಜ್ಯದ ಅಹಮದಾಬಾದಿನಿಂದ ಹಿಂದಿರುಗಿದವರಾಗಿದ್ದು, ಮತ್ತೊಬ್ಬ ವ್ಯಕ್ತಿ ಬೆಂಗಳೂರು ನಗರ ಜಿಲ್ಲೆಯ ಯಲಹಂಕದ ನಿವಾಸಿ (ಪಿ-4333), ರಾಜಸ್ಥಾನ ರಾಜ್ಯದಿಂದ ಹಿಂದಿರುಗಿದವರಾಗಿದ್ದಾರೆ.
ಹನ್ನೊಂದು ಸೋಂಕಿತ ವ್ಯಕ್ತಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದೇಶೀಯ ವಿಮಾನ ಮೂಲಕ ಮೇ.31ರಂದು ಆಗಮಿಸಿದ್ದು, ಅಂದಿನಿಂದ ದೇವನಹಳ್ಳಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ನಲ್ಲಿರಿಸಲಾಗಿತ್ತು, ಆರೋಗ್ಯ ತಪಾಸಣೆಗೊಳಪಟ್ಟಾಗ ಸೋಂಕು ದೃಢಪಟ್ಟಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ವ್ಯಕ್ತಿ (ಪಿ-4335), ಅವರು ತಮ್ಮ ಮೂಲ ಸ್ಥಳ ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ಪಲ್ಲಂಪಳ್ಳಿ ಗ್ರಾಮಕ್ಕೆ ಹೋಗಿ ರಾಜ್ಯಕ್ಕೆ ಹಿಂದಿರುಗಿದವರಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೊಳಪಟ್ಟಾಗ ಸೋಂಕು ದೃಢಪಟ್ಟಿದೆ.
ಎಲ್ಲಾ ಸೋಂಕಿತ ವ್ಯಕ್ತಿಗಳು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.