ನೇಕಾರರಿಂದ ವಿದ್ಯುತ್ ಕರ ನಿರಾಕರಣ ಚಳವಳಿಗೆ ನಿರ್ಧಾರ

ದೊಡ್ಡಬಳ್ಳಾಪುರ: ದುಬಾರಿ ವಿದ್ಯುತ್ ಬಿಲ್ ನೀಡುತ್ತಿರುವುದರ ವಿರುದ್ಧ ಹಾಗೂ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ವತಿಯಿಂದ ಜೂ.8 ರಂದು ಬೆಳಿಗ್ಗೆ 10.30ಕ್ಕೆ ನಗರದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಶನಿವಾರ ನಡೆದ ನೇಕಾರರ ಸಭೆಯಲ್ಲಿ ನಿರ್ಧರಿಸಲಾಗಿದೆ.   

ಸಭೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ನಗರ ಘಟಕದ ಅಧ್ಯಕ್ಷ  ಪಿ.ಎ.ವೆಂಕಟೇಶ್, ಉಪಾಧ್ಯಕ್ಷ ಆರ್.ಎಸ್.ಶ್ರೀನಿವಾಸ್, ಲಾಕ್ಡೌನ್ ಸಂದರ್ಭದಲ್ಲಿ ಸ್ಥಗಿತವಾಗಿರುವ ನೇಕಾರಿಕೆ ಉದ್ಯಮ ಇನ್ನು ಆರಂಭವೇ ಆಗಿಲ್ಲ. ಇಂತಹ ಸಂದರ್ಭದಲ್ಲಿ ಬೆಸ್ಕಾಂ ಸಿಬ್ಬಂದಿ ತಮಗೆ ಇಷ್ಟ ಬಂದಷ್ಟು ವಿದ್ಯುತ್ ಬಿಲ್ ಬರೆದುಕೊಂಡು ಹೋಗಿದ್ದಾರೆ. ಈಗ ನೋಡಿದರೆ ಬಿಲ್ ಪಾವತಿ ಮಾಡದಿದ್ದರೆ ವಿದ್ಯುತ್ ಸಂಪರ್ಕವನ್ನು ಕಡಿತಮಾಡುವ ಎಚ್ಚರಿಕೆ ನೀಡುತಿದ್ದಾರೆ. ಇಲ್ಲಿಯವರೆಗೂ ವಿದ್ಯುತ್ ಮಗ್ಗಗಳಿಗೆ ರಿಯಾಯಿತಿ ದೊರೆಯುತಿತ್ತು. ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಿದರೆ ನೇಕಾರರ ಬದುಕು ಮತ್ತಷ್ಟು ಕಷ್ಟವಾಗಲಿದೆ. ವಿದ್ಯುತ್ ರಿಯಾಯಿತಿ ಕೈತಪ್ಪಲಿದೆ. ತಮಿಳುನಾಡು, ಆಂಧ್ರಪ್ರದೇಶದಲ್ಲಿ ನೇಕಾರರಿಗೆ ನೀಡಲಾಗುತ್ತಿರುವ ಸೌಲಭ್ಯಗಳು ನಮಗೂ ದೊರೆಯಬೇಕು. ನೇಕಾರಿಕೆ ಉದ್ಯಮ ಉತ್ತಮಗೊಳ್ಳುವವರೆಗೂ ಗೃಹಬಳಕೆ ಹಾಗೂ ಮಗ್ಗಕ್ಕೆ ಬಳಸುವ ವಿದ್ಯುತ್ ಶುಲ್ಕ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ ನಿರಾಕರಣ ಚಳವಳಿ ಆರಂಭಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಕಾರ್ಯದರ್ಶಿ ಅಶೋಕ್,ಸಹ ಕಾರ್ಯದರ್ಶಿ ಮುನಿರಾಜು, ಖಜಾಂಚಿ ಕೆ.ಮಲ್ಲೇಶ್,ಪದಾಧಿಕಾರಿಗಳಾದ ರಾಮಚಂದ್ರ, ಚೌಡಯ್ಯ,ರಾಮಾಂಜಿನಪ್ಪ, ಈಶ್ವರ್, ಕೆ.ರಘುಕುಮಾರ್,ಕೃಷ್ಣಾರೆಡ್ಡಿ, ಆದಿನಾರಾಯಣರೆಡ್ಡಿ ಇದ್ದರು.

ರಾಜಕೀಯ

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ..!

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ..!

"ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (BDCC Bank) ಚುನಾವಣೆಯಲ್ಲಿ ದೊಡ್ಡಬಳ್ಳಾಪುರದ ಚುಂಚೇಗೌಡ, ಎಂ.ಗೋವಿಂದ ರಾಜು, ರಮೇಶ್ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ".

[ccc_my_favorite_select_button post_id="117123"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!