ಬೆಂಗಳೂರು : ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ 38ನೇ ಪುಣ್ಯಸ್ಮರಣೆಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿನ ದೇವರಾಜ ಅರಸು ಪ್ರತಿಮೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ವೇಳೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ,ಆರೋಗ್ಯ ಸಚಿವ ಬಿ.ಶ್ರೀರಾಮುಲು, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಂಸದ ಬಿ ವೈ ರಾಘವೇಂದ್ರ ಮತ್ತಿತರಿದ್ದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಸಂಸದರು ಸಸಿಗಳನ್ನು ನೆಟ್ಟರು.