ಎಂಎಸ್ಐಎಲ್ ರಿಟೇಲ್‌ ಮದ್ಯ ಮಾರಾಟ ಮಳಿಗೆಯನ್ನು ತೆರೆಯಲು ದೊಡ್ಡತುಮಕೂರು ಗ್ರಾಮಸ್ಥರ ವಿರೋಧ

ದೊಡ್ಡಬಳ್ಳಾಪುರ : ತಾಲೂಕಿನ ದೊಡ್ಡತುಮಕೂರು ಗ್ರಾಮದ ಜನವಸತಿ ಪ್ರದೇಶದಲ್ಲಿ ಎಂಎಸ್‌ಐಎಲ್‌ ರಿಟೇಲ್‌ ಮದ್ಯ ಮಾರಾಟ ಘಟಕ ತೆರೆಯಲು ಪ್ರಯತ್ನ ನಡೆದಿದ್ದು, ಇದಕ್ಕೆ ಪರವಾನಗಿ ನೀಡದಂತೆ ಒತ್ತಾಯಿಸಿ ಇಲ್ಲಿನ ಗ್ರಾಮಸ್ಥರು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಗ್ರಾಮಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿ,ತಾಲೂಕು ಪಂಚಾಯಿತಿ ಇಒ ಮುರುಡಯ್ಯ ಹಾಗೂ ಪಿಡಿಒ ಸೌಮ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಗ್ರಾಪಂ ಮಾಜಿ ಉಪಾಧ್ಯಕ್ಷ ರವಿಕುಮಾರ್,ದೊಡ್ಡತುಮಕೂರು ವ್ಯಾಪ್ತಿಯಲ್ಲಿನ ಜನತೆ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ.ರಿಟೇಲ್‌ ಮದ್ಯ ಮಾರಾಟ ಘಟಕ  ತೆರೆಯಲು ಅನುಮತಿ ನೀಡಿದಲ್ಲಿ ಇಲ್ಲಿನ ಜನರ ನೆಮ್ಮದಿ ಹಾಳಾಗಲಿದೆ.ಯಾವುದೆ ಕಾರಣಕ್ಕು ಘಟಕ ಸ್ಥಾಪನೆ ಅವಕಾಶ ನೀಡಬಾರದೆಂದರು.

ನಿವೃತ್ತ ಶಿಕ್ಷಕ ಚಿಕ್ಕಣಪ್ಪ ಮಾತನಾಡಿ, ಈ ಭಾಗದ ಜನರು ಬಹುತೇಕ ಕೂಲಿ ಕಾರ್ಮಿಕರಿದ್ದು, ನಿತ್ಯ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಈಗಾಗಲೇ ಹಲವೆಡೆ ಚಿಕ್ಕ ಮಕ್ಕಳಿಂದ ಹಿಡಿದು ಹಲವರು ಕುಡಿತದ ಚಟಕ್ಕೆ ಬಲಿಯಾಗಿದ್ದು,ಪ್ರತಿ ನಿತ್ಯ ಕುಟುಂಬಗಳು ಕಣ್ಣಿರಿನಲ್ಲಿ ಕೈತೊಳೆಯುವಂತಾಗಿದೆ. ಮದ್ಯದ ಅಂಗಡಿ ತೆರೆಯುವುದರಿಂದ ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇರುವುದರಿಂದ ಅನುಮತಿ ನೀಡಬಾರದೆಂದು ಒತ್ತಾಯಿಸಿದರು.

ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ  ಟಿ.ಜಿ.ಮಂಜುನಾಥ್ ಮಾತನಾಡಿ,ಮದ್ಯದಂಗಡಿ ತೆರೆಯಲು ಗೊತ್ತುಪಡಿಸಿದ ಸ್ಥಳ ಮುಖ್ಯ ರಸ್ತೆಯಲ್ಲಿದ್ದು, ಇಲ್ಲಿ ಮಹಿಳೆಯರು,ವಿದ್ಯಾರ್ಥಿಗಳು ಇದೇ ಸ್ಥಳದಲ್ಲಿ ಸಂಚರಿಸುವುದರಿಂದ ಭವಿಷ್ಯದಲ್ಲಿ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯದಂಗಡಿ ಸ್ಥಾಪಿಸಲು ಪರವಾನಗಿ ನೀಡಬಾರದು. ಒಂದೊಮ್ಮೆ ಅವಕಾಶ ನೀಡಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಸ್ತ್ರೀ ಶಕ್ತಿ ಸಂಘದ ನರಸಮ್ಮ,ಕಮಲ,ಭಾಗ್ಯಮ್ಮ,ಅಂಬುಜಮ್ಮ,ಆಶಾ,ವೆಂಕಟೇಶಮ್ಮ,ಮರಿಯಮ್ಮ,ಗ್ರಾಮಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ,ವಿಎಸ್ ಎಸ್ ಎನ್ ಅಧ್ಯಕ್ಷ ಪ್ರಭಾಕರ್,ನಿರ್ದೇಶಕ ಶಿವಕುಮಾರ್,ಮುಖಂಡರಾದ ಚನ್ನಗೌಡ,ಆಂಜಿನಪ್ಪ,ಟಿ.ಎಲ್ ರಘು,ಲೋಕೇಶ್, ಟಿ.ಕೆ.ಶಿವಕುಮಾರ್ ,ವಸಂತ್ ಕುಮಾರ್, ಅಜಯ್ ಕುಮಾರ್,ನಾರಾಯಣಸ್ವಾಮಿ ಮತ್ತಿತರಿದ್ದರು.

ರಾಜಕೀಯ

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ದ ದೂರು

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ದ ದೂರು

ತಮಿಳುನಾಡು, ಬಂಗಾಳ ಚುನಾವಣೆ ನಡೆಯುತ್ತಿರುವಾಗ, ತಮ್ಮ ಪಕ್ಷದ ಪರ ಭಾಷಣಕ್ಕಾಗಿ ಸರಕಾರಿ ಸ್ವಾಮ್ಯದ ದೂರದರ್ಶನವನ್ನು ಮೋದಿ (Modi)ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

[ccc_my_favorite_select_button post_id="121155"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!