ನಾಳೆಯಿಂದ ಗ್ರಾಮೀಣ ಬಸ್ ಸಂಚಾರ ಆರಂಭ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ಕಲಬುರಗಿ: ಕರೊನಾ ಲಾಕ್ ಡೌನ್ ಸಡಿಲಿಕೆ ಪರಿಣಾಮ ರಾಜ್ಯದ ಸಾರಿಗೆ ಸಂಸ್ಥೆಗಳಿ ಕಳೆದ ಮೇ-22 ರಿಂದ ಅಂತರ ಜಿಲ್ಲಾ ಸಂಚಾರವನ್ನು ರಾಜ್ಯದೊಳಗೆ ಹಂತ-ಹಂತವಾಗಿ ಆರಂಭಿಸಲಾಗಿದೆ.ಇದೀಗ ಜಿಲ್ಲೆಯೊಳಗೆ ಹೋಬಳಿಯಿಂದ ಗ್ರಾಮದವರೆಗೂ ಬಸ್ ಸಂಚಾರ ಅರಂಭಿಸುವಂತೆ ಸಂಸ್ಥೆಗಳಿಗೆ ಸೂಚನೆ ನೀಡಿದ್ದು, ಮಂಗಳವಾರದಿಂದ ಗ್ರಾಮದ ಕಡೆ ಸಾರಿಗೆ ಬಸ್‍ಗಳು ಮುಖ ಮಾಡಲಿವೆ ಎಂದು ರಾಜ್ಯದ ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಹೇಳಿದರು.

ಸೋಮವಾರ ಇಲ್ಲಿನ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಲಾಕ್ ಡೌನ್‍ನಿಂದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಸುಮಾರು 2200 ಕೋಟಿ ರೂ. ನಷ್ಠ ಅನುಭವಿಸಿದೆ. ಇನ್ನೂ 3500 ಕೋಟಿ ರೂ. ನಷ್ಠ ಅನುಭವಿಸುವ ಸಾಧ್ಯತೆಯಿದೆ. ಪ್ರತಿನಿತ್ಯ 1 ಕೋಟಿ ಜನರು ಸಂಚರಿಸುತ್ತಿದ್ದ ಬಸ್‍ನಲ್ಲಿ ಇದೀಗ ಪ್ರಯಾಣಿಕರ ಸಂಖ್ಯೆ 14 ಲಕ್ಷಕ್ಕೆ ಇಳಿಕೆಯಾಗಿದೆ. ಕೊರೋನಾ ಭಯದಿಂದ ಜನರು ಇನ್ನೂ ಹೊರಬಾರದ ಕಾರಣ ಶೇ.86ರಷ್ಟು ಪ್ರಯಾಣಿಕರ ಕೊರತೆಯನ್ನು ಬಸ್‍ಗಳು ಕಾಣುತ್ತಿವೆ ಎಂದರು.

ಬಸ್ ಸಂಚಾರಕ್ಕೆ ಪ್ರಯಾಣಿಕರ ಆರೋಗ್ಯ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಹಾರಾಷ್ಟ್ರ ಹೊರತುಪಡಿಸಿ ಕೇರಳ, ಆಂಧ್ರ ಪ್ರದೇಶ, ಗೋವಾ, ತಮಿಳನಾಡು ನಡುವೆ ಅಂತರ ರಾಜ್ಯ ಬಸ್ ಸಂಚಾರ ಆರಂಭಿಸಲು ಪರಸ್ಪರ ಒಪ್ಪಂದ ಪ್ರಕ್ರಿಯೆಗಳು ಪ್ರಗತಿಯಲ್ಲಿವೆ ಎಂದರು.

ಕೊರೋನಾ ಸಂಕಷ್ಟದ ಸಮಯದಲ್ಲಿ ಸಂಸ್ಥೆ ಆರ್ಥಿಕವಾಗಿ ನಷ್ಟ ಅನುಭವಿಸಿದ್ದರಿಂದ 1.35 ಲಕ್ಷ ಸಿಬ್ಬಂದಿಗಳ ಏಪ್ರಿಲ್ ಮತ್ತು ಮೇ ಮಾಹೆಯ ವೇತನ ಪಾವತಿಗೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ ಪರಿಣಾಮ 652 ಕೊಟಿ ರೂ. ಸಂಸ್ಥೆಗೆ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ ಮಾಹೆಯ ವೇತನ ಈಗಾಗಲೇ ಸಿಬ್ಬಂದಿಗಳಿಗೆ ಪಾವತಿಸಿದ್ದು, ಮೇ ಮಾಹೆಯ ವೇತನ ಸಹ ಶೀಘ್ರ ಸಿಬ್ಬಂದಿಗಳ ಕೈಸೇರಲಿದೆ ಎಂದರು.

ಸಂಸ್ಥೆ ನಷ್ಠದಲ್ಲಿದೆ ಎಂದು ಯಾವುದೇ ಕಾರಣಕ್ಕೂ ಸಿಬ್ಬಂದಿಗಳ ವೇತನ ಕಡಿತ ಮಾಡುವಾಗಲಿ ಅಥವಾ ಕಡ್ಡಾಯ ರಜೆ ಮೇಲೆ ತೆರಳುವಂತೆ ಸೂಚಿಸದಂತೆ ಅಧಿಕಾರಿಗಳಿಗೆ ನಿರ್ದೇಶನ  ನೀಡಿದ್ದೇನೆ. ಸಾರಿಗೆ ಸೇವೆ ಹೆಚ್ಚಳವಾಗುತ್ತಿದ್ದಂತೆ ಸಿಬ್ಬಂದಿಗಳ ಅವಶ್ಯಕತೆ ಇದ್ದಾಗ ಅಧಿಕಾರಿಗಳು ಕರೆ ಕಳುಹಿಸಿದಾಗ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗಬೇಕು ಎಂದರು.

ದರ ಹೆಚ್ಚಿಸುವ ಪ್ರಸ್ತಾವನೆ ಇಲ್ಲ

ಕಳೆದ ನಾಲ್ಕು ತಿಂಗಳ ಹಿಂದೆ ಶೇ.12.5 ರಷ್ಟು ಸಾರಿಗೆ ದರವನ್ನು ಹೆಚ್ಚಿಸಿದ್ದು, ಪ್ರಸ್ತುತ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಠಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೇಲ್ಕೂರ, ಡಾ.ಅವಿನಾಶ ಜಾಧವ, ಎಂ.ಎಲ್.ಸಿ. ಬಿ.ಜಿ.ಪಾಟೀಲ ಇದ್ದರು.

ಸೂಪರ್ ಮಾರ್ಕೆಟ್ ಬಸ್ ನಿಲ್ದಾಣಕ್ಕೆ ಭೇಟಿ

20 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಸಿಟಿ ಬಸ್ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು.

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!