ನೇಕಾರರ ವಿದ್ಯುತ್ ಶುಲ್ಕ ಸಂಪೂರ್ಣ ಮನ್ನಾ ಮಾಡಲು ಆಗ್ರಹ

ದೊಡ್ಡಬಳ್ಳಾಪುರ : ನೇಕಾರರ ವಿದ್ಯುತ್ ಶುಲ್ಕ ಸಂಪೂರ್ಣ ಮನ್ನಾ ಮಾಡಲು ಒತ್ತಾಯಿಸಿ ಹಾಗೂ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ರಾಜ್ಯ ಮತ್ತು ಕೇಂದ್ರ ನೀತಿ ಖಂಡಿಸಿ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ನಗರ ಘಟಕದ ಅಧ್ಯಕ್ಷ  ಪಿ.ಎ.ವೆಂಕಟೇಶ್, ಉಪಾಧ್ಯಕ್ಷ ಆರ್.ಎಸ್.ಶ್ರೀನಿವಾಸ್, ಲಾಕ್ಡೌನ್ ಸಂದರ್ಭದಲ್ಲಿ ಸ್ಥಗಿತವಾಗಿರುವ ನೇಕಾರಿಕೆ ಉದ್ಯಮ ಇನ್ನು ಆರಂಭವೇ ಆಗಿಲ್ಲ. ಇಂತಹ ಸಂದರ್ಭದಲ್ಲಿ ಬೆಸ್ಕಾಂ ಸಿಬ್ಬಂದಿ ತಮಗೆ ಇಷ್ಟ ಬಂದಷ್ಟು ವಿದ್ಯುತ್ ಬಿಲ್ ಬರೆದುಕೊಂಡು ಹೋಗಿದ್ದಾರೆ.ಈಗ ನೋಡಿದರೆ ಬಿಲ್ ಪಾವತಿ ಮಾಡದಿದ್ದರೆ ವಿದ್ಯುತ್ ಸಂಪರ್ಕವನ್ನು ಕಡಿತಮಾಡುವ ಎಚ್ಚರಿಕೆ ನೀಡುತಿದ್ದಾರೆ. ಇಲ್ಲಿಯವರೆಗೂ ವಿದ್ಯುತ್ ಮಗ್ಗಗಳಿಗೆ ರಿಯಾಯಿತಿ ದೊರೆಯುತಿತ್ತು.ಪ್ರಸ್ತಾವಿತ ವಿದ್ಯುತ್ ಕಾಯ್ದೆ ತಿದ್ದುಪಡಿಯಿಂದಾಗಿ  ವಿದ್ಯುತ್ ಕ್ಷೇತ್ರ ಖಾಸಗಿಯವರ ಪಾಲಾಗಿ ನೇಕಾರರ ಬದುಕು ಮತ್ತಷ್ಟು ಕಷ್ಟವಾಗಲಿದೆ. ವಿದ್ಯುತ್ ರಿಯಾಯಿತಿ ಕೈತಪ್ಪಲಿದೆ. ನೇಕಾರಿಕೆ ಉದ್ಯಮ ಉತ್ತಮಗೊಳ್ಳುವವರೆಗೂ ಗೃಹಬಳಕೆ ಹಾಗೂ ಮಗ್ಗಕ್ಕೆ ಬಳಸುವ ವಿದ್ಯುತ್ ಶುಲ್ಕ ಮನ್ನಾ ಮಾಡಬೇಕು.ನಂತರ ನೇಕಾರರಿಗೆ ಉಚಿತ ವಿದ್ಯುತ್ ಹಾಗೂ ನಿರಂತರ ವಿದ್ಯುತ್ ಸೌಲಭ್ಯ ನೀಡಬೇಕಿದೆ. ವಿದ್ಯುತ್ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ನೀಡಬಾರದು. ನೇಕಾರರು ನೇಯ್ದ ಬಟ್ಟೆ ಮಾರಾಟವಾಗದೇ ದಿವಾಳಿಯಾಗಿ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನೇಕಾರರಿಗೆ 10 ಲಕ್ಷ ರೂ ಪರಿಹಾರವನ್ನು ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಕಾರ್ಯಪಾಲಕ ಅಭಿಯಂತರ ಗಂಗರಾಜು ವಿದ್ಯುತ್ ಬಿಲ್ಗಳಲ್ಲಿ ಆಗಿರುವ ವ್ಯತ್ಯಾಸವನ್ನು ಸರಿಪಡಿಸಿ, ಬಿಲ್ ಮೊತ್ತ ಹಚ್ಚಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವಿದ್ಯುತ್ ಶುಲ್ಕ ಮನ್ನಾ ಮಾಡುವುದು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಬೇಕಿದ್ದು, ನೇಕಾರರ ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಕಾರ್ಯದರ್ಶಿ ಅಶೋಕ್,ಸಹ ಕಾರ್ಯದರ್ಶಿ ಎಂ.ಮುನಿರಾಜು, ಖಜಾಂಚಿ ಕೆ.ಮಶ್, ಸಹಕಾರ್ಯದರ್ಶಿಗಳಾದ ಈಶ್ವರ್, ಕೆ.ರಘುಕುಮಾರ್, ಸಿ.ಅಶ್ವತ್ಥ್, ಚೌಡಯ್ಯ,ಆದಿರಾಯಣರೆಡ್ಡಿ, ಸಂಚಾಲಕರಾದ ಸುರೇಶ್, ರಾಮಣ್ಣ, ಉಪಾಧ್ಯಕ್ಷರಾದ ಎಂ.ರಾಮಚಂದ್ರ, ರಾಮಾಂಜಿನಪ್ಪ, ರಾಜಶೇಖರ್, ಸುರೇಶ್, ಚೌಡಪ್ಪ, ಕನ್ನಡ ಪಕ್ಷದ ಅಧ್ಯಕ್ಷ ಎಂ.ಸಂಜೀವ್ ನಾಯಕ್, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಜ.29 ರಿಂದ ಗ್ಯಾರಂಟಿ ಯೋಜನೆಗಳ ಕುಂದುಕೊರತೆ ಸಭೆ

ದೊಡ್ಡಬಳ್ಳಾಪುರ: ಜ.29 ರಿಂದ ಗ್ಯಾರಂಟಿ ಯೋಜನೆಗಳ ಕುಂದುಕೊರತೆ ಸಭೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಯ (Guarantee scheme) ಶಿಬಿರಗಳನ್ನು ಇದೇ ತಿಂಗಳ 29 ರಿಂದ ಆರಂಭಿಸಲಾಗುತ್ತಿದೆ.

[ccc_my_favorite_select_button post_id="118757"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ.. ಕಾರಣ ಕೇಳುದ್ರೆ ಶಾಕ್ ಆಗ್ತೀರಾ..!!

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ.. ಕಾರಣ ಕೇಳುದ್ರೆ ಶಾಕ್ ಆಗ್ತೀರಾ..!!

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ***** ಕಾಲೋನಿಯಲ್ಲಿ ನಡೆದಿದೆ.

[ccc_my_favorite_select_button post_id="118746"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!