ಜೂನ್ 19 ರಂದು ನಡೆಯಲಿರುವ ರಾಜ್ಯ ಸಭೆಯ ದ್ವೈ-ವಾರ್ಷಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ವಿಧಾನಸಭಾ ಕಾರ್ಯದರ್ಶಿಗಳೂ ಆದ ಚುನಾವಣಾಧಿಕಾರಿ ಎಂ ಕೆ ವಿಶಾಲಾಕ್ಷಿ ಅವರಿಗೆ ಇಲ್ಲಿ ಇಂದು ನಾಮಪತ್ರ ಸಲ್ಲಿಸಿದರು
ಈವೇಳೆ ರಾಜ್ಯ ವಿಧಾನ ಸಭೆಯಲ್ಲಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವ ಕುಮಾರ್, ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಆರ್ ವಿ ದೇಶಪಾಂಡೆ ಹಾಜರಿದ್ದರು.