ಹಾಸನ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಮಗ್ರ ಮಾಹಿತಿಯನ್ನೋಳಗೊಂಡ ಪೋಸ್ಟರನ್ನು ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಬಿಡುಗಡೆ ಮಾಡಿದರು.
ಸಂಸದರಾದ ಪ್ರಜ್ವಲ್ ರೇವಣ್ಣ, ಶಾಸಕರಾದ ಪ್ರೀತಂ ಜೆ. ಗೌಡ, ಹೆಚ್.ಕೆ. ಕುಮಾರಸ್ವಾಮಿ, ಲಿಂಗೇಶ್, ಸಿ.ಎನ್ ಬಾಲಕೃಷ್ಣ, ಶಿವಲಿಂಗೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯರಾದ ಎಂ.ಎ ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ವೇತಾ ದೇವರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಮುಖ್ಯ ಯೋಜನಾಧಿಕಾರಿ ನಾಗರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಚಂದ್ರಶೇಖರ್ ಮತ್ತು ಮಹೇಶ್ ಹಾಗೂ ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.