ಆನ್ ಲೈನ್ ಬೋಧನೆ ಕುರಿತಂತೆ ಪೋಷಕರಿಗೆ ಸ್ಪಷ್ಟೀಕರಣ ನೀಡಿದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ದೊಡ್ಡಬಳ್ಳಾಪುರ :ಜೂ 10ರಂದು ನಿಮ್ಹಾನ್ಸ್ ಸಂಸ್ಥೆಯ ಮಕ್ಕಳ ಮಾನಸಿಕ ತಜ್ಞರು, ಯುನಿಸೆಫ್ ಪ್ರತಿನಿಧಿ, ಅಜೀಮ್‌ ಪ್ರೇಮ್‌ ಜೀ ಫೌಂಡೇಶನ್ ಸೇರಿದಂತೆ ವಿದ್ಯಾರ್ಥಿ ಶಿಕ್ಷಣದಲ್ಲಿ ಸಂಶೋಧನಾನಿರತ ಶಿಕ್ಷಣ ತಜ್ಞರು, ಹಾಗೂ ಇನ್ನು ಕೆಲ ಪರಿಣಿತರೊಂದಿಗೆ ಚರ್ಚಿಸಿ ಹಾಗೆಯೇ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಮಾರ್ಗದರ್ಶಿ ಸೂತ್ರಗಳನ್ವಯ ವಿದ್ಯಾರ್ಥಿಗಳ ಹಿತರಕ್ಷಿಸುವ ಸಂಬಂಧದ ಒಂದು ಸೂಕ್ತ ನಿರ್ಣಯವೊಂದನ್ನು On line ಶಿಕ್ಷಣ ಕುರಿತಂತೆ ಕೈಗೊಳ್ಳಲಾಗುವುದು ಎಂದು ಶಿಕ್ಷಣಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಖಾಸಗಿ ಶಾಲೆಗಳಲ್ಲಿ ಆನ್ಲೈನ್ ಶಿಕ್ಷಣ ಕುರಿತು ಸಾರ್ವಜನಿಕರು ಹಾಗೂ ಪೋಷಕರಿಂದ ಆಕ್ರೋಶ ಕೇಳಿಬಂದ ಹಿನ್ನೆಲೆ ಈ ಕುರಿತು ಸಚಿವರು ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಸುಮಾರು 58 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.ರಾಜ್ಯ ಪಠ್ಯ ಕ್ರಮವನ್ನು ಅನುಸರಿಸುವ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಸುಮಾರು 31 ಲಕ್ಷ ವಿದ್ಯಾರ್ಥಿಗಳು ಅಭ್ಯಸಿಸುತ್ತಿದ್ದಾರೆ.

ಈ ಶಾಲೆಗಳ ವಿದ್ಯಾರ್ಥಿಗಳಿಗೆ ಕೋವಿಡ್ ಸಂದರ್ಭದಲ್ಲಿ ಪರ್ಯಾಯ ಬೋಧನೆಯನ್ನು ಸರ್ಕಾರವು ಆಲೋಚಿಸುತ್ತಿದ್ದು,ದೂರದರ್ಶನದ ಚಂದನ ವಾಹಿನಿಯಲ್ಲಿ ರಜಾ ಅವಧಿಯ ಬೋಧನೆಗೆ ನುರಿತ ಶಿಕ್ಷಕರ ಮೂಲಕ ಬೋಧನಾ ತರಗತಿಗಳನ್ನು ರೂಪಿಸಿ ಬಿತ್ತರಿಸುವ ಪೂರ್ವಭಾವಿ ಕ್ರಮಗಳಿಗೆ ಇಲಾಖೆಯು ಈಗಾಗಲೇ ಚಾಲನೆ ನೀಡಿದೆ.

ಗ್ರಾಮಾಂತರ ಪ್ರದೇಶಗಳಲ್ಲಿರುವ ಸರ್ಕಾರಿ, ಖಾಸಗಿ ಅನುದಾನ ರಹಿತ ಶಾಲೆಗಳ ಮಕ್ಕಳು ರಾಜ್ಯ ಸರ್ಕಾರದ ನೀತಿಗೆ ಅಗುಣವಾಗಿ ಬೋಧನಾ ಕ್ರಮಗಳನ್ನು ಯಾವುದೇ ಸಮಸ್ಯೆಯಿಲ್ಲದೇ ಅಳವಡಿಸಿಕೊಳ್ಳುವುದು ಈ ಶಾಲೆಗಳಲ್ಲಿ ಕಲಿಯುತ್ತಿರುವ ಈ ಸುಮಾರು 90 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿಯಾದ ಕ್ರಮವಾಗಿರುತ್ತದೆ. 

ನಗರ ಕೇಂದ್ರಿತವಾದ ಕೇಂದ್ರ/ ಇತರೆ ಪಠ್ಯಕ್ರಮಗಳಲ್ಲಿ (CBSE, ICSE) ಕಲಿಯುತ್ತಿರುವ ಸುಮಾರು 14 ಲಕ್ಷ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಶಾಲಾ ಆಡಳಿತ ಮಂಡಳಿಗಳು ಮಾತ್ರ ಆನ್ಲೈನ್ ಬೋಧನೆಯ ಪರ್ಯಾಯ ಕ್ರಮಗಳನ್ನು ಪೋಷಕರ ಮತ್ತು ವಿದ್ಯಾರ್ಥಿಗಳ ಮೇಲೆ ಹೇರಿವೆ. 

ಈ ಸಮಸ್ಯೆ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳಲ್ಲಿ ಸಾಮಾನ್ಯವಾಗಿ ಕಂಡುಬರುವುದಿಲ್ಲ. ಖಾಸಗಿ ಶಾಲಾ ಸಂಸ್ಥೆಗಳ ರಾಜ್ಯ ಸಂಘಟನೆಗಳು, ಶಿಕ್ಷಣ ತಜ್ಞರುಗಳೊಂದಿಗೆ ಇಂದು ನನ್ನ ನೇತೃತ್ವದಲ್ಲಿ ಸಮಾಲೋಚನೆ ನಡೆಸಲಾಗಿದೆ.ಈ ಸುದೀರ್ಘ ಸಮಾಲೋಚನೆಯಲ್ಲಿ ಎಲ್ ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಹಂತದ ತರಗತಿಗಳಲ್ಲಿ ಆನ್ ಲೈನ್ ಮೂಲಕ ಶಿಕ್ಷಣವನ್ನು ನೀಡುವುದು ಆರೋಗ್ಯಕರವೂ ಅಲ್ಲ ಮತ್ತು ಯೋಗ್ಯವೂ ಅಲ್ಲ. ಹಾಗೂ ಇನ್ನುಳಿದ ತರಗತಿಗಳಿಗೆ ಮಕ್ಕಳ ಏಕಾಗ್ರತಾ ಅವಧಿ ಹಾಗೂ ಇಂತಹ ವಿನೂತನ ಬೋಧನಾ ಉಪಕ್ರಮಗಳು ಈ ವಿದ್ಯಾರ್ಥಿ ಸಮುದಾಯದ ಆರೋಗ್ಯದ ಮೇಲೆ ಉಂಟು ಮಾಡಬಹುದಾದ ದುಷ್ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಬಹುದಾಗಿದೆ ಎಂಬ ಅಭಿಪ್ರಾಯಗಳು  ಹೊರಹೊಮ್ಮಿವೆ ಎಂದಿರುವ ಅವರು ಇವುಗಳು ಅಭಿಪ್ರಾಯಗಳು_ಮಾತ್ರ. ತೀರ್ಮಾನವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!